ಕೊರಟಗೆರೆ: ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ
Team Udayavani, Jun 30, 2022, 9:56 PM IST
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬಂಡೇಹಳ್ಳಿ ಗ್ರಾಮದ ಸಿದ್ದರಾಜು ಖಾದ್ರಪ್ಪ(55) ಉಗ್ರನಹಳ್ಳಿ ಎಂಬಲ್ಲಿ ಹುಣಸೆ ಮರಕ್ಕೆ ಟವೆಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನು ಕೂಲಿ ಕೆಲಸ ಮಾಡಿಕೊಂಡಿದ್ದು ಜೂನ್ 29 ರಂದು ಎಂದಿನಂತೆ ಕೆಲಸಕ್ಕೆ ಹೊಗಿದ್ದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಭೀಮಯ್ಯ ರವರ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ.
ಸಿದ್ದರಾಜು ಆ ಪುತ್ರಿ ನಂದಿನಿ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಾಗರಾಜು .ಬಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.