ಕುಣಿಗಲ್: ತಾವರೆ ಹೂವು ಕೀಳಲು ಹೋಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು
ಶುಕ್ರವಾರ ನಡೆದ ಘಟನೆ; ಗುರುತು ಸಿಗದಂತಾಗಿರುವ ಮೃತದೇಹ
Team Udayavani, Aug 8, 2022, 8:11 PM IST
ಕುಣಿಗಲ್: ತಾವರೆ ಹೂವು ಕೀಳಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಯೂರುದುರ್ಗದ ಕಿಚ್ಚವಾಡಿ ಗ್ರಾಮದಲ್ಲಿ ನಡೆದಿದೆ. ಮೃತನ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ.
ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ದಿನದಂದು ಕಿಚ್ಚವಾಡಿ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋದ ವೇಳೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತ ದೇಹ ಗುರುತು ಸಿಗದಂತಾಗಿದ್ದು ಮೃತನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಹುಲಿಯೂರುದುರ್ಗ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.