ಗೂಳೂರು ಗಣಪತಿಗೆ ವಿಸರ್ಜನೆಗೆ ಚಾಲನೆ


Team Udayavani, Dec 15, 2019, 3:00 AM IST

goolooru

ಭಕ್ತರ ಪಾಲಿನ ಇಷ್ಟಾರ್ಥ ಸಿದ್ಧಿಸುವ ಮಹಾಗಣಪತಿ ಎಂದೇ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿರುವ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಭವ್ಯ ಮೆರವಣಿಗೆ ವಿವಿಧ ಮಂಗಳವಾದ್ಯ, ಜಾನಪದ ಕಲಾ ಪ್ರಕಾರಗಳೊಂದಿಗೆ ಶನಿವಾರ ರಾತ್ರಿಯಿಂದ ಆರಂಭಗೊಂಡಿದ್ದು, ಇಡೀ ರಾತ್ರಿ ಮೆರವಣಿಗೆ ಸಾಗಿ ಭಾನುವಾರ ಸಂಜೆ ಮಹಾಗಣಪತಿ ವಿಸರ್ಜನೆ ನಡೆಯಲಿದ್ದು, ಈ ಸಂಭ್ರಮಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ…

ತುಮಕೂರು: ಇತಿಹಾಸ ಪ್ರಸಿದ್ಧ ಗೂಳೂರಿನ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವದ ಭವ್ಯ ಮೆರವಣಿಗೆ ಶನಿವಾರ ಸಂಜೆ ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿದ ಮೇಲೆ ಜಯಘೋಷಗಳೊಂದಿಗೆ ಗ್ರಾಮದ 18 ಕೋಮಿನ ಜನರ ಸಮಕ್ಷಮದಲ್ಲಿ ಅಲಂಕೃತ ರಥದಲ್ಲಿ ಗಣಪತಿ ಕೂರಿಸಿ, ರಥದ ಮುಂದೆ ಈಡುಗಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ನಂತರ ವಿವಿಧ ಮಂಗಳವಾದ್ಯ ಹಾಗೂ ಜಾನಪದ ಕಲಾ ಪ್ರಕಾರಗಳು, ಸಿಡಿಮದ್ದು, ಬಾಣ ಬಿರುಸುಗಳೊಂದಿಗೆ ಅಪಾರ ಸಂಖ್ಯೆಯ ಭಕ್ತರ ಜಯಘೋಷಗಳೊಂದಿಗೆ ಗೂಳೂರಿನ ಮುಖ್ಯರಸ್ತೆಗಳಲ್ಲಿ ವೈಭವಯುತವಾಗಿ ಮೆರವಣಿಗೆ ನಡೆದು ವಿವಿಧ ಕಲಾ ತಂಡಗಳು ಮೆರವಣಿಗೆಗೆ ರಂಗು ತಂದಿತ್ತು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಭಕ್ತರು ಈ ಅಪೂರ್ವ ಮೆರವಣಿಗೆಗೆ ಸಾಕ್ಷಿಯಾದರು.

ರಾಜ್ಯದಲ್ಲೇ ವಿಶಿಷ್ಟ ಗಣಪತಿ, ಬೇಡಿ ಬರುವ ಭಕ್ತರ ಸಂಕಷ್ಟ ನಿವಾರಿಸುವ ಗಣಪ ಎಂದೇ ಪ್ರಸಿದ್ಧಿ ಪಡೆದಿರುವ ಗೂಳೂರು ಗಣೇಶ ಮೂರ್ತಿಯನ್ನು ದೀಪಾವಳಿ ಬಲಿಪಾಡ್ಯಮಿಯಂದು ಪ್ರತಿಷ್ಠಾಪಿಸಿ ಒಂದು ತಿಂಗಳ ಕಾಲ ಪೂಜೆ ಸಲ್ಲಿಸಿ ನಂತರ ವಿಶೇಷ ರೀತಿಯಲ್ಲಿ ಮೆರವಣಿಗೆ ಮಾಡಿ ವಿಸರ್ಜಿಸುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ ಶನಿವಾರ ರಾತ್ರಿ ಆರಂಭಗೊಂಡಿದ್ದು, ಭಾನುವಾರ ಸಂಜೆ ಗೂಳೂರು ಕೆರೆಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಸರ್ಜಿಸಲಾಗುವುದು.

ಕಿರೀಟ ಧಾರಣೆ: ಗೂಳೂರು ಮಹಾಗಣಪತಿಯ ಜಾತ್ರೆ ಈ ಹಿಂದೆ ನ. 30, ಡಿ.1ರಂದು ನಡೆಯಬೇಕಿತ್ತು. ಉತ್ಸವಕ್ಕಾಗಿ ಗ್ರಾಮದ 18 ಕೋಮುಗಳ ಜನರು ಒಗ್ಗೂಡಿ ಆಸ್ಥಾನ ಮಂಟಪದಿಂದ ಗಣೇಶ ಮೂರ್ತಿಯನ್ನು ಮೆರವಣಿಗೆ ರಥಕ್ಕೆ ಕೂರಿಸಲು ರಾಜಗೋಪುರದ ಕೆಳಗೆ ತರಲಾಗಿತ್ತು, ಅಂದು ಮಳೆ ಬಂದ ಹಿನ್ನೆಲೆಯಲ್ಲಿ ಉತ್ಸವವನ್ನು ಡಿ. 14, 15ಕ್ಕೆ ಮುಂದೂಡಲಾಯಿತು. ರಾಜಗೋಪುರದ ಕೆಳಗೆ ಕೂರಿಸಿದ್ದ ಮಹಾಗಣಪತಿಯನ್ನು ಅಲ್ಲಿಯೇ ಕೂರಿಸಿ ಪೂಜಾ ಕೈಂಕರ್ಯ ನೆರವೇರಿಸಲಾಗುತಿತ್ತು.

ಶನಿವಾರ ಮಹಾಗಣಪತಿಗೆ 18 ಕೋಮಿನ ಸಮಕ್ಷಮದಲ್ಲಿ ಕಿರೀಟ ಧಾರಣೆ ಮಾಡಿ ಎಲ್ಲರೂ ಜಯಘೋಷಗಳೊಂದಿಗೆ ಮಹಾರಥದಲ್ಲಿ ಗಣೇಶ ಮೂರ್ತಿ ಕೂರಿಸಿದರು. ಗೂಳೂರು ಗಣೇಶನ ಪೂಜೆಗೆ ಶನಿವಾರ ರಾತ್ರಿ ಅಂತಿಮ ತೆರೆ ಎಳೆಯಲಾಯಿತು. ನಂತರ ಆರಂಭವಾದ ಗಣೇಶನ ಮೆರವಣಿಗೆಗೆ ವಿವಿಧ ಜಾನಪದ ಕಲಾತಂಡಗಳಾದ ನಾದಸ್ವರ, ಕರಡಿ ಮಜುಲು, ನಾಸಿಕ್‌ ಡೋಲು, ಕರಡಿವಾದ್ಯ, ವೀರಗಾಸೆ, ಕೀಲುಕುದುರೆ, ನಂದಿಕೋಲು, ಡೊಳ್ಳು ಕುಣಿತ, ಸೋಮನ ಕುಣಿತ, ಪೂಜಾ ಕುಣಿತ ತಂಡಗಳ ಪ್ರದರ್ಶನದ ಜೊತೆಗೆ ಪಟಾಕಿ, ಬಾಣ-ಬಿರುಸು ಪ್ರದರ್ಶನ ಸಾಥ್‌ ನೀಡಿದವು.

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ಮಹಾ ಗಣಪತಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿದರು. ಭಾನುವಾರವೂ ಗೂಳೂರಿನ ಪ್ರಮುಖ ರಸ್ತೆಗಳಲ್ಲಿ ಭವ್ಯ ಮೆರವಣಿಗೆ ಸಾಗಿ ನಂತರ ಗೂಳೂರು ಕೆರೆಯಲ್ಲಿ ನಿರ್ಮಿಸಿರುವ ಕಲ್ಯಾಣಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮಹೋತ್ಸವ ನೆರವೇರಲಿದೆ.

ಸಿಡಿಮದ್ದಿನ ಪ್ರದರ್ಶನ: ಜಿಲ್ಲೆಯಲ್ಲಿ ಗೂಳೂರು ಗಣೇಶನ ಪರಸೆ ಎಂದು ಪ್ರಸಿದ್ಧಿ ಪಡೆದಿರುವ ಗಣೇಶ ಮಹೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಉತ್ಸವದಲ್ಲಿ ಶನಿವಾರ ಎರಡು ಗಂಟೆ ನಡೆದ ಆಕರ್ಷಕ ಮದ್ದಿನ ಪ್ರದರ್ಶನ 500 ಅಡಿ ಉದ್ದದ ಜೋಗ್‌ಫಾಲ್ಸ್‌, ನೂರು ಬಾರಿ ಹೊಡೆಯುವ ಔಟ್ಸ್‌ ಮತ್ತು ಪ್ಯಾರಚೂಟ್‌ ಪ್ರದರ್ಶನ ಗಮನಸೆಳೆಯಿತು. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಗಣೇಶನ ಉತ್ಸವ ವೈಭವಯುತವಾಗಿಯೇ ನಡೆಯುತ್ತಿದೆ. ಆದರೆ ಕಳೆದ ವರ್ಷಗಳಿಗೆ ಹೋಲಿಸಿದರೆ ಭಕ್ತರ ಸಂಖ್ಯೆ ಇಳಿಮುಖವಾದಂತಿದೆ. ಶನಿವಾರ ರಾತ್ರಿಯಿಡೀ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ಮಹಾಗಣಪತಿ ವೈಭವಯುತ ಮೆರವಣಿಗೆ ನಡೆದಿದೆ. ಭಾನುವಾರದಂದೂ ಮೆರವಣಿಗೆ ಮುಂದುವರೆಯಲಿದ್ದು, ಗೂಳೂರಿನ ರಾಜ ಬೀದಿಗಳಲ್ಲಿ ಮೆರವಣಿಗೆ ನಂತರ ವಿಸರ್ಜನೆ ಮಾಡಲಾಗುವುದು. ಡಿ. 16ರಂದು ಬೆಳಗ್ಗೆ 11 ಗಂಟೆಗೆ ಜಾತ್ರೆ ನಂತರ ಶ್ರೀ ಮಹಾಗಣಪತಿ ಕೃಪಾಪೋಷಿತ ನಾಟಕ ಮಂಡಳಿಯಿಂದ “ಕುರುಕ್ಷೇತ್ರ’ ಪೌರಾಣಿಕ ನಾಟಕ ಏರ್ಪಡಿಸಲಾಗಿದೆ.

ಮಳೆಗೆ ಮುಂದೂಡಿಕೆ: ನ.30, ಡಿ.1ರಂದು ನಡೆಯಬೇಕಿದ್ದ ತಾಲೂಕಿನ ಇತಿಹಾಸ ಪ್ರಸಿದ್ಧ ಗೂಳೂರು ಗಣೇಶ ವಿಸರ್ಜನಾ ಮಹೋತ್ಸವ ಮಳೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಶನಿವಾರ ರಾತ್ರಿ ಉತ್ಸವದ ರಥದಲ್ಲಿ ದೇವರನ್ನು ಕೂರಿಸಲಾಗಿದೆ ಎಂದು ಶ್ರೀ ಗೂಳೂರು ಮಹಾಗಣಪತಿ ಭಕ್ತ ಮಂಡಳಿ ಅಧ್ಯಕ್ಷ ಜಿ.ಎಸ್‌.ಶಿವಕುಮಾರ್‌ ತಿಳಿಸಿದರು. ಕಳೆದ ಬಲಿಪಾಡ್ಯಮಿಯಂದು ಇತಿಹಾಸ ಪ್ರಸಿದ್ಧ ಗೂಳೂರು ಗಣೇಶನನ್ನು ಪ್ರತಿಷ್ಠಾಪಿಸಿ ಅಂದಿನಿಂದ ಪ್ರತಿನಿತ್ಯ ವಿಶೇಷ ಪೂಜಾ, ಕೈಂಕರ್ಯ ನೆರವೇರಿಸಲಾಗುತ್ತಿದ್ದು, ಗ್ರಾಮದ 18 ಕೋಮಿನವರ ಸಹಕಾರದೊಂದಿಗೆ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವ ನಡೆಯುತ್ತಿದೆ ಎಂದರು.

ಅನ್ನ ಸಂತರ್ಪಣೆ: ಗಣೇಶ ವಿಸರ್ಜನಾ ಮಹೋತ್ಸವದ ಜಾತ್ರೆಗೆ ಆಗಮಿಸುವ ಭಕ್ತರಿಗೆ ಎರಡು ದಿನ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಭಕ್ತರೂ ಅಲ್ಲಲ್ಲಿ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದಾರೆ. ಅನ್ನ ಸಂತರ್ಪಣೆ ಸಿದ್ಧತೆ ಕುರಿತು ಶ್ರೀ ಗೂಳೂರು ಮಹಾಗಣಪತಿ ಭಕ್ತ ಮಂಡಳಿ ಅಧ್ಯಕ್ಷ ಜಿ.ಎಸ್‌. ಶಿವಕುಮಾರ್‌ ಪರಿಶೀಲಿಸಿದರು.

ಗೂಳೂರು ಮಹಾಗಣಪತಿ ಭಕ್ತರ ಇಷ್ಟಾರ್ಥ ಸಿದ್ಧಿಸುವ ಕ್ಷೇತ್ರವಾಗಿದೆ. ಪ್ರತಿ ವರ್ಷವೂ ವಿಶೇಷವಾಗಿ ನಮ್ಮ ಊರಿನಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿ 18 ಕೋಮಿನ ಜನರು ಒಟ್ಟಾಗಿ ಗಣೇಶ ಮಹೋತ್ಸವ ಆಚರಿಸುತ್ತಾರೆ. ಸುತ್ತ-ಮುತ್ತಲಿನ ಗ್ರಾಮಗಳಿಂದ ಅಲ್ಲದೇ ಬೇರೆ-ಬೇರೆ ಭಾಗಗಳಿಂದಲೂ ಭಕ್ತರು ಬರುತ್ತಾರೆ.
-ಗೂಳೂರು ಮಣಿಕಂಠ

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.