ನಾಳೆಯಿಂದ ಕುಷ್ಠರೋಗ ಪತ್ತೆ ಅಭಿಯಾನ

ತಾಲೂಕು ಆರೋಗ್ಯಾಧಿಕಾರಿ ಡಾ. ಮೋಹನ್‌ ಹೇಳಿಕೆ ಸೆ. 23ರವರೆಗೆ ಪ್ರತಿ ಮನೆಗೆ ಭೇಟಿ ನೀಡಿ

Team Udayavani, Sep 4, 2019, 12:14 PM IST

ತುಮಕೂರು: ಜಿಲ್ಲೆಯಲ್ಲಿ ಸೆ. 5ರಿಂದ 23ರವರೆಗೆ ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಷ್ಠರೋಗ ಪತ್ತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸಿ.ಆರ್‌ ಮೋಹನ್‌ ತಿಳಿಸಿದರು. ತಾಲೂಕು ಆರೋಗ್ಯಾಧಿ ಕಾರಿ ಕಚೇರಿ ಸಭಾಂಗ ಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಯ್ದ 9 ಜಿಲ್ಲೆಗಳಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಹಮ್ಮಿಕೊಂಡಿದ್ದು, ಇದರಲ್ಲಿ ತುಮಕೂರು ಕೂಡ ಒಂದಾಗಿದೆ ಎಂದರು.

ಜಿಲ್ಲೆಯಲ್ಲಿ ಕುಷ್ಠರೋಗ ಕುರಿತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ರೋಗದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡ ಬೇಕು. ಕುಟುಂಬದ ಪ್ರತಿಯೊಬ್ಬರ ದೈಹಿಕ ಪರೀಕ್ಷೆ ನಡೆಸಬೇಕು. ಕುಷ್ಠರೋಗ ಪ್ರಕರಣಗಳು ಕಂಡು ಬಂದಲ್ಲಿ ರೋಗಿಗಳ ಮನವೊಲಿಸಿ ಹತ್ತಿರದ ಪ್ರಾಥಮಿಕ ಅಥವಾ ತಾಲೂಕು ಆರೋಗ್ಯ ಕೇಂದ್ರ ಗಳಲ್ಲಿ ಉಚಿತ ಚಿಕಿತ್ಸೆ ಪಡೆಯುವಂತೆ ತಿಳಿಸಬೇಕು ಎಂದ‌ು ಹೇಳಿದರು.

ನಿಗಾವಹಿಸದಿದ್ದಲ್ಲಿ ಅಂಗವಿಕಲತೆ: ಮೊದಲು ಚರ್ಮ ಹಾಗೂ ನರಗಳಲ್ಲಿ ಸಮಸ್ಯೆ ಕಾಣಿಸಿ ಕೊಳ್ಳುತ್ತದೆ. ಕುಷ್ಠರೋಗ ಸಾಮಾನ್ಯವಾಗಿ ಮಾಸಲು ಬಿಳಿ ಅಥವಾ ತಾಮ್ರ ಬಣ್ಣದ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ. ಕತ್ತಿನ ಪಕ್ಕ, ಮೊಣಕೈ ಹಾಗೂ ಮೊಣ ಕಾಲಿನ ಹಿಂಭಾಗ ನರಗಳ ಊತ ಹಾಗೂ ನೋವು ಕಂಡುಬರುತ್ತದೆ. ಕುಷ್ಠರೋಗದ ಲಕ್ಷಣ ಕಂಡುಬಂದ ತಕ್ಷಣ ರೋಗಿ ಶೀಘ್ರ ಚಿಕಿತ್ಸೆ ಪಡೆಯದೇ ನಿಗಾ ವಹಿಸದಿದ್ದಲ್ಲಿ ಅಂಗವಿಕಲತೆ ಉಂಟಾಗುತ್ತದೆ ಎಂದು ಎಚ್ಚರಿಸಿದರು.

463 ತಂಡ ರಚನೆ: ರೋಗದ ಸಮೀಕ್ಷೆ ನಡೆಸಲು ಜಿಲ್ಲೆಯಲ್ಲಿ ಒಟ್ಟು 463 ತಂಡ ರಚಿಸಲಾಗಿದ್ದು, ಪ್ರತಿ ತಂಡದಲ್ಲೂ ಒಬ್ಬ ಪುರುಷ ಹಾಗೂ ಒಬ್ಬ ಮಹಿಳೆ, 92 ಸೂಪರ್‌ ವೈಸರ್‌ಗಳು, 274 ಆಶಾ ಕಾರ್ಯ ಕರ್ತೆಯರಿದ್ದಾರೆ. ಸರ್ಕಾರಿ ರಜೆ ದಿನ ಹೊರತು ಪಡಿಸಿ ಪ್ರತಿದಿನ ನಗರದಲ್ಲಿ 25 ಮನೆಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ 20 ಮನೆಗಳಿಗೆ ಬೇಟಿ ನೀಡಿ ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸ ಲಾಗುತ್ತದೆ. ವಸತಿ ಶಾಲೆಗಳು ಹಾಗೂ ಸಾರ್ವಜನಿಕ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳನ್ನು ತಪಾ ಸಣೆಗೆ ಒಳಪಡಿಸಬೇಕು. ಆಯಾ ಸ್ಥಳಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ಶಿಕ್ಷಕರು ತಪಾಸಣೆಗೆ ಕೊಠಡಿ ವ್ಯವಸ್ಥೆ ಕಲ್ಪಿಸಬೇಕು. ರೋಗ ನಿರ್ಮೂಲನೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್‌, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಯ್ಯ, ನಗರದ ಸಿಡಿಪಿಒ ಸತ್ಯ ನಾರಾಯಣ, ಗ್ರಾಮಾಂತರ ಎ.ಸಿ.ಡಿ.ಪಿ.ಒ ಮಾಲಾ ಇತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮಧುಗಿರಿ: ಹೈನುಗಾರರು ಗುಣಮಟ್ಟದ ಹಾಲು ಡೇರಿಗೆ ನೀಡಬೇಕು ಎಂದು ತುಮುಲ್‌ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್‌ ತಿಳಿಸಿದರು. ತಾಲೂಕಿನ...

  • ತಿಪಟೂರು: ತುಮಕೂರು ಜಿಲ್ಲೆಗೆ ನಿಗದಿಯಾಗಿರುವ 25 ಟಿಎಂಸಿ ಹೇಮಾವತಿ ನೀರು ಜಿಲ್ಲೆಯ ಬಹುತೇಕ ಕೆರೆಗಳಿಗೆ ಹರಿಯುವ ಮೂಲಕ ಈ ಭಾಗದ ಜನರ ಕುಡಿಯುವ ನೀರಿನ ಬವಣೆ ಕೆಲವೇ...

  • ತಿಪಟೂರು: ಮಹಾತ್ಮಾ ಗಾಂಧೀಜಿಯವರ ಗ್ರಾಮಾಭಿವೃದ್ಧಿ ಕಲ್ಪನೆ ಸಹಕಾರ ತತ್ವದಲ್ಲಿ ಅಡಗಿದೆ. ಸಹಕಾರ ಸಂಘಗಗಳು ಸರ್ಕಾರಗಳು ಮಾಡಲು ಸಾಧ್ಯವಾಗದ ಎಷ್ಟೋ ಜನೋಪಯೋಗಿ...

  • ಹುಳಿಯಾರು: ಕೇಂದ್ರ ಸರ್ಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಖರೀದಿಸುತ್ತಿರುವುದು ರೈತರಲ್ಲಿ ಮಂದಹಾಸ ಮೂಡಿಸಿದ್ದರೆ, ಅದಕ್ಕಾಗಿ ಸಿದ್ಧಪಡಿಸಿರುವ ಫ್ರೂಟ್‌...

  • ಶಿರಾ: ಜನರಿಗೆ ಅನ್ನ ನೀಡುವ ಅನ್ನದಾತನಿಗೆ ಬೇಕಾಗಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಡುವಂತ ಕಿಸಾನ್‌ ಸಮ್ಮಾನ್‌ ಯೋಜನೆ 2 ಸಾವಿರ ರೂ., ಕಳಪೆ ಬೀಜ,...

ಹೊಸ ಸೇರ್ಪಡೆ