ಸರ್ಕಾರಿ ಶಾಲಾ ಮಕ್ಕಳಿಗೆ ಶಾಸಕರಿಂದ ಪಾಠ


Team Udayavani, Jul 1, 2019, 12:14 PM IST

tk-tdy-2..

ಮಹಾತ್ಮಗಾಂಧಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಶಾಸಕ ಡಾ.ರಂಗನಾಥ್‌.

ಕುಣಿಗಲ್: ಪಟ್ಟಣದ ಮಹಾತ್ಮಗಾಂಧಿ ಸರ್ಕಾರಿ ಪ್ರೌಢಶಾಲೆಗೆ ದಿಢೀರ್‌ ಭೇಟಿ ನೀಡಿದ ಶಾಸಕ ಡಾ.ಎಚ್.ಡಿ.ರಂಗನಾಥ್‌ ಮಕ್ಕಳಿಗೆ ಪಾಠ ಪ್ರವಚನ ಮಾಡುವ ಮೂಲಕ ಗಮನ ಸೆಳೆದರು.

ಶಾಸಕರ ಅಭಯ: ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ, ಬಿಸಿ ಊಟ, ಪಠ್ಯಪುಸ್ತಕ, ಕೊಠಡಿ ಸಮಸ್ಯೆ ಹಾಗೂ ಸಮವಸ್ತ್ರಗಳ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದುಕೊಂಡರು. ಶಾಲೆ ತ್ತೀಚೆಗೆ ಪ್ರಾರಂಭವಾಗಿದ್ದು, ಹೀಗಾಗಿ ಯಾವುದೇ ಕೊರತೆ ಇಲ್ಲ ಎಂದು ವಿದ್ಯಾರ್ಥಿಗಳು ಶಾಸಕರಿಗೆ ಹೇಳಿದರು. ವಿದ್ಯಾಭ್ಯಾಸ ಹಾಗೂ ಮೂಲಸೌಲಭ್ಯಕ್ಕೆ ಸಂಬಂಧಿಸಿ ಸಮಸ್ಯೆ ಇದ್ದಲ್ಲಿ ನೇರವಾಗಿ ನನ್ನೊಂದಿಗೆ ಹಂಚಿಕೊಳ್ಳಬಹುದೆಂದು ಶಾಸಕ ಅಭಯ ನೀಡಿದರು.

ಶಾಲೆಗಳ ಬಲವರ್ಧನೆಗೆ ಕ್ರಮ: ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಡಾ.ರಂಗನಾಥ್‌, ಸರ್ಕಾರಿ ಶಾಲೆಗಳಿಗೆ ಬಹುತೇಕವಾಗಿ ಗ್ರಾಮೀಣ ಪ್ರದೇಶದ ಬಡ ಮಕ್ಕಳು ದಾಖಲಾಗುತ್ತಿದ್ದಾರೆ, ಆದರೆ ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕುಂಠಿತವಾಗುತಿದೆ. ಹೀಗಾಗಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ರಾಜ್ಯ ಸಮಿಶ್ರ ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಕಂಪ್ಯೂಟರ್‌ ತರಬೇತಿ ಕೇಂದ್ರ ಆರಂಭ: ಜಾಗತಿಕ ಸ್ಪರ್ಧೆಯಲ್ಲಿ ಗ್ರಾಮಾಂತರ ಬಡ ರೈತರ ಮಕ್ಕಳು ಉದ್ಯೋಗ ಪಡೆಯಲು ಕಂಪ್ಯೂಟರ್‌ ಕಲಿಕೆ ಅಗತ್ಯ ವಾಗಿದೆ. ಖಾಸಗಿ ಕಂಪ್ಯೂಟರ್‌ ತರಬೇತಿ ಕೇಂದ್ರ ದಲ್ಲಿ ಬಡ ಮಕ್ಕಳು 3ರಿಂದ 4 ಸಾವಿರ ರೂ. ನೀಡಿ ತರಬೇತಿ ಪಡೆಯಬೇಕು. ಆದರೆ ಹಣವಿಲ್ಲದೆ ಬಡ ವಿದ್ಯಾರ್ಥಿಗಳು ಕಂಪ್ಯೂಟರ್‌ ತರಬೇತಿಯಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಮನಗೊಂಡು ಡಿಕೆಶಿ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಮಹಾತ್ಮಗಾಂಧಿ ಶಾಲೆಯಲ್ಲಿ ಕಂಪ್ಯೂಟರ್‌ ತರಬೇತಿ ಕೇಂದ್ರ ಪ್ರಾರಂಭಿಸಿ ಉಚಿತವಾಗಿ ತರಬೇತಿ ನೀಡಲಾಗುವುದು. ತರಬೇತಿಗೆ ಶಿಕ್ಷಕರನ್ನು ಟ್ರಸ್ಟ್‌ವತಿಯಿಂದ ನೇಮಕ ಮಾಡಲಾಗುವುದು. ಮುಂದಿನ ದಿನದಲ್ಲಿ ಅವಶ್ಯಕತೆ ಇರುವ ಎಲ್ಲ ಕಾಲೇಜುಗಳಲ್ಲಿ ಕಂಪ್ಯೂಟರ್‌ ತರಬೇತಿ ಕೇಂದ್ರ ಪ್ರಾರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆ: ತಾಲೂಕಿನ ಎಲ್ಲಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಅಂಕ ತೆಗೆದು, ಉತ್ತಮ ಫಲಿತಾಂಶಕ್ಕೆ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರ ಸಭೆ ಕರೆದು ಈ ಸಂಬಂಧ ಸೂಚನೆ ನೀಡಲಾಗುವುದು ಎಂದರು.

ವಿದ್ಯಾರ್ಥಿನಿಗೆ ಸಹಾಯ: ತಾಲೂಕಿನ ಚೌಡನಕುಪ್ಪೆ ಗ್ರಾಮದ ವಿದ್ಯಾರ್ಥಿನಿ ಕವಿಕ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದರೂ ಹಣವಿಲ್ಲದೆ ಬಿ.ಕಾಂಗೆ ಸೇರಲು ಸಾಧ್ಯವಾಗಿರಲಿಲ್ಲ, ಹೀಗಾಗಿ ಧನ ಸಹಾಯ ನೀಡಿ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲ ಮಾಡಿಕೊಡಲಾಗಿದೆ ಎಂದು ಶಾಸಕರು ಹೇಳಿದರು. ಪ್ರಭಾರ ಉಪ ಪ್ರಚಾರ್ಯ ಸೋಮಶೇಖರಯ್ಯ, ಪುರಸಭಾ ಮುಖ್ಯಾಧಿಕಾರಿ ಆರ್‌.ರಮೇಶ್‌, ಲೋಕೋಪಯೋಗಿ ಇಲಾಖೆಯ ಎಇಇ ದಿವಾಕರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.