ಕುಣಿಗಲ್: ಅಪ್ರಾಪ್ತ ಬಾಲಕಿ ಅಪಹರಣ; ಪ್ರಕರಣ ದಾಖಲು
Team Udayavani, Sep 18, 2022, 7:11 PM IST
ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ವ್ಯಕ್ತಿಯೋರ್ವ ಅಪರಿಸಿಕೊಂಡು ಹೋಗಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿಯಲ್ಲಿ ನಡೆದಿದ್ದು, ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ತನ್ನ ಗ್ರಾಮದಿಂದ ಬಾಲಕಿ ಪಟ್ಟಣದ ಕಾಲೇಜಿಗೆ ಬಂದ ವೇಳೆ ತಾಲೂಕಿನ ಹುತ್ರಿದುರ್ಗ ಹೋಬಳಿ ಹುಣಸೇಕುಪ್ಪೆ ಗ್ರಾಮದ ಯೊಗೀಶ್ ಎಂಬ ವ್ಯಕ್ತಿಯು ಬಾಲಕಿಯನ್ನು ಅಪಹರಿಸಿದ್ದಾನೆ ಎನ್ನಲಾಗಿದ್ದು ಪೋಷಕರು ಆರೋಪಿ ವಿರುದ್ದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಸಂಬಂಧಿಕರ ಅಂಗಡಿಗೆ ಹಲವು ದಿನಗಳಿಂದ ಬಾಲಕಿ ಹೋಗುತ್ತಿದ್ದಳು ಎನ್ನಲಾಗಿದ್ದು, ಆಕೆಯನ್ನು ಯೋಗಿಶನೊಂದಿಗೆ ಪ್ರೀತಿಸುವಂತೆ ಆರೋಪಿ ಸಂಬಂಧಿಗಳು ಒತ್ತಾಯ ಮಾಡಿದ್ದರು ಎಂದು ಬಾಲಕಿ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿಯು ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಿನ್ನೆ ಬಾಲಕಿ ಕುಣಿಗಲ್ ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಬೆಳಗ್ಗೆ ಹೋದವಳು ಸಂಜೆ ಎಷ್ಟು ಹೊತ್ತಾದರೂ ಮನೆಗೆ ಬಾರದ ಕಾರಣ ಪೊಷಕರು ಹಲವು ಕಡೆ ಹುಡುಕಾಡಿದ್ದಾರೆ. ಬಾಲಕಿ ಸಿಗದ ಕಾರಣ ಭಾನುವಾರ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
MUST WATCH
ಹೊಸ ಸೇರ್ಪಡೆ
ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ಸ್ಪೋರ್ಟ್ಸ್ ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ