3 ವರ್ಷ ಕಳೆದರೂ ಬಾಕಿ ಹಣ ನೀಡದ ಪುರಸಭೆ

Team Udayavani, Jan 10, 2020, 3:36 PM IST

tk-tdy-1

ಚಿಕ್ಕನಾಯಕನಹಳ್ಳಿ: ಪಟ್ಟಣದ 23 ವಾರ್ಡ್‌ ಹಾಗೂ ಸರ್ಕಾರಿ ಕಚೇರಿಗಳಿಗೆ ಟ್ಯಾಂಕರ್‌ ನೀರು ಸರಬರಾಜು ಮಾಡಿದ ಬಾಕಿ ಹಣ 3 ವರ್ಷ ಕಳೆದರೂ ನೀಡಿಲ್ಲ ಎಂದು ಟ್ಯಾಂಕರ್‌ ಮಾಲೀಕರು ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.

2016-17ನೇ ಸಾಲಿನಲ್ಲಿ ಭೀಕರ ಬರಗಾಲದಿಂದ ಪುರಸಭೆಯ ಕುಡಿಯುವ ನೀರಿನ ಬೋರ್‌ವೆಲ್‌ ಗಳು ನೀರಿಲ್ಲದೆ ಬತ್ತಿ ಹೋಗಿತ್ತು. ಈ ಸಂದರ್ಭ ಖಾಸಗಿ ಟ್ಯಾಂಕರ್‌ ಮೂಲಕ ಪ್ರತಿ ವಾರ್ಡ್‌ಗೆ 4ರಂತೆ 92 ಟ್ಯಾಂಕರ್‌ ಹಾಗೂ ಸರ್ಕಾರಿ ಕಚೇರಿಗಳು, ಪೊಲೀಸ್‌ ಸ್ಟೇಷನ್‌, ಬಿಇಒ ಕಚೇರಿ, ತಾಲೂಕು ಕಚೇರಿ ಶಾಲ ಕಾಲೇಜು, ಪಶು ಆಸ್ಪತ್ರೆ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಇತರೆ ಸರ್ಕಾರಿ ಕಚೇರಿಗಳಿಗೆ ಒಟ್ಟು ಪ್ರತಿ ದಿನ ಸುಮಾರು 120 ಟ್ಯಾಂಕರ್‌ ನೀರು ಸರಬರಾಜು ಮಾಡಲಾಗಿದೆ. ಸುಮಾರು 5 ತಿಂಗಳು ಪ್ರತಿ ದಿನ ವಾರ್ಡ್‌ಗಳಿಗೆ ನೀರು ಸರಬರಾಜು ಮಾಡಿದ ಖಾಸಗಿ ಟ್ಯಾಂಕರ್‌ ಮಾಲೀಕರಿಗೆ 3 ವರ್ಷ ಕಳೆದರೂ 27.28 ಲಕ್ಷ ರೂ. ಬಾಕಿ ಹಣ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನೀರು ನೀಡಿದವರಿಗೆ ಮೋಸ: ಖಾಸಗಿ ಟ್ಯಾಂಕರ್‌ ಮಾಲೀಕ ರಮೇಶ್‌ ಮಾತನಾಡಿ, 3 ವರ್ಷದ ಪಟ್ಟಣ ನೀರಿಲ್ಲದೇ ಸಂಕಷ್ಟಕ್ಕೆ ಸಿಲುಕಿತ್ತು. ಹಗಲು ರಾತ್ರಿ 23 ವಾರ್ಡ್‌ಗಳಿಗೆ ಪುರಸಭೆ ಸದಸ್ಯರ ಉಪಸ್ಥಿತಿಯಲ್ಲಿ ನೀರು ಸರಬರಾಜು ಮಾಡಲಾಗಿದೆ. ಆದರೆ ಪುರಸಭೆ ಅಧಿಕಾರಿಗಳು ಹಣ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಪುರಸಭೆ ಅಧ್ಯಕ್ಷ ಸಿ.ಡಿ ಚಂದ್ರಶೇಖರ್‌ ಮಾತನಾಡಿ, ಪುರಸಭೆ ಅಧ್ಯಕ್ಷನಾಗಿದ್ದಾಗ ಬರಗಾಲದಿಂದ ನೀರಿನ ಹಾಹಾಕಾರ ಸೃಷ್ಟಿಯಾಗಿತ್ತು. ಅಂತಹ ಸಮಯದಲ್ಲಿ ಟ್ಯಾಂಕರ್‌ ಮಾಲೀಕರು ಸಾರ್ವಜನಿಕರಿಗೆ ಪ್ರಾಮಾಣಿಕವಾಗಿ ನೀರು ಸರಬರಾಜು ಮಾಡಿದ್ದಾರೆ. ನನ್ನ ಅವಧಿಯಲ್ಲಿ 31 ಲಕ್ಷ ರೂ. ಬಿಡುಗಡೆಯಾಗಿದೆ. ಉಳಿದ 27.28 ಲಕ್ಷ ರೂ. ನೀಡಲು ಮುಖ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಟ್ಯಾಂಕರ್‌ ಮಾಲೀಕರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದರು.

ಸಿ.ಸಿ ರಸ್ತೆ, ಚರಂಡಿ ಕಾಮಗಾರಿಗೆ ಮಾಡಿರುವ ಬಿಲ್‌ ಅಲ್ಲ. ಮನುಷ್ಯನಿಗೆ ಅವಶ್ಯಕವಾಗಿ ಬೇಕಾಗಿರುವ ನೀರು ಸರಬರಾಜು ಮಾಡಿರುವ ಹಣವಾಗಿದೆ. ಮೂರು ವರ್ಷ ಕಳೆದರೂ ಪುರಸಭೆ ಹಣ ನೀಡದಿರು ವುದರಿಂದ ನೀರು ಸರಬರಾಜು ಮಾಡಿರುವುದು ನಷ್ಟ ಉಂಟುಮಾಡಿದೆ. ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗೆಮನವಿ ನೀಡಿದರೂ ಸ್ಪಂದನೆ ಸಿಕ್ಕಿಲ್ಲ. ಪುರಸಭೆ ಎಲ್ಲಾ ಸದಸ್ಯರೂ ಹಣ ನೀಡುವಂತೆ ತಿಳಿಸಿದರೂ ನೀಡುತ್ತಿಲ್ಲ. ಆದ್ದರಿಂದ ಟ್ಯಾಂಕರ್‌ ಬಾಕಿ ಬಿಲ್‌ ಬರುವವರೆಗೆ ಪುರಸಭೆ ಮುಂದೆ ಪ್ರತಿದಿನ ಸತ್ಯಾಗ್ರಹ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಪುರಸಭೆ ಸದಸ್ಯ ಮಲ್ಲಿಕಾರ್ಜುನಯ್ಯ, ಚೇತನ್‌, ಪರಮೇಶ್‌, ವಿನಯ್‌, ಶಿವಕುಮಾರ್‌, ಕಿರಣ್‌ ನಿಶಾನಿ, ಸುರೇಶ್‌, ಮೋಹನ, ಹರ್ಷ ಇತರರಿದ್ದರು.

ಟಾಪ್ ನ್ಯೂಸ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

akash

Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ

14-

ಕಾರ ಹುಣ್ಣಿಮೆ; ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ; ಕನ್ನಡದ ಮೊದಲ ಮಣ್ಣಿನ ಹಬ್ಬ ಕಾರಹುಣ್ಣಿಮೆ

ಅಮೆರಿಕದ ಕಾಲೇಜಿನಲ್ಲಿ ಪದವಿ ಪಡೆದರೆ Green Card! ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್ ಭರವಸೆ

ಅಮೆರಿಕದ ಕಾಲೇಜಿನಲ್ಲಿ ಪದವಿ ಪಡೆದರೆ Green Card! ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್ ಭರವಸೆ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

Dhananjaya as Nadaprabhu Kempegowda

Dhananjaya; ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಡಾಲಿ

Pat Cummins becomes the 2nd Australian to pick a hat-trick in the T20 World Cup history

T20 World Cup; ಹ್ಯಾಟ್ರಿಕ್ ವಿಕೆಟ್ ಕಿತ್ತ ಕಮಿನ್ಸ್; 17 ವರ್ಷದ ಬಳಿಕ ಆಸೀಸ್ ಬೌಲರ್ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PDOಗಳಿಗೆ ಒಂದೇ ದಿನ ಸೇವೆ ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸಲು ಬಿ.ಸುರೇಶ್ ಆಗ್ರಹ

PDOಗಳಿಗೆ ಒಂದೇ ದಿನ ಸೇವೆ ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸಲು ಬಿ.ಸುರೇಶ್ ಆಗ್ರಹ

Kunigal ಶ್ರೀ ಕ್ಷೇತ್ರ ಎಡೆಯೂರು ದೇವಾಲಯದ ಆನೆ ಗಂಗಾ ಇನ್ನಿಲ್ಲ!

Kunigal ಶ್ರೀ ಕ್ಷೇತ್ರ ಎಡೆಯೂರು ದೇವಾಲಯದ ಆನೆ ಗಂಗಾ ಇನ್ನಿಲ್ಲ!

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

1-sadasd

Tumakuru ಕ್ಷೇತ್ರ ಅಭಿವೃದ್ಧಿ ಪಡಿಸುವುದೇ ನನ್ನ ಗುರಿ: ಕೇಂದ್ರ ಸಚಿವ ವಿ.ಸೋಮಣ್ಣ

5-

ಕೇಂದ್ರ ಮಂತ್ರಿಯಾಗಿ ಕ್ಷೇತ್ರಕ್ಕೆ ಬಂದ ಮೊದಲ ದಿನವೇ ಸೋಮಣ್ಣ ಡಿಸಿ, ಅಧಿಕಾರಿಗಳಿಗೆ ತರಾಟೆ

MUST WATCH

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

ಹೊಸ ಸೇರ್ಪಡೆ

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

15

Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ನಾಗ ತನುತರ್ಪಣ ಮಂಡಲ ಸೇವೆ ಸಂಪನ್ನ

akash

Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ

Udayavani Campaign: ಬಸ್‌ ಬೇಕೇ, ಬೇಕು- ಆ ಊರಿನ ಬಸ್‌ ಕೊರೊನಾಗೆ ಬಲಿಯಾಗಿದೆ!

Udayavani Campaign: ಬಸ್‌ ಬೇಕೇ, ಬೇಕು- ಆ ಊರಿನ ಬಸ್‌ ಕೊರೊನಾಗೆ ಬಲಿಯಾಗಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.