ಗುಂಡಿ ಬಿದ್ದ ರಸ್ತೆ ದುರಸ್ತಿಗೆ ನಿರ್ಲಕ್ಷ್ಯ
Team Udayavani, Aug 16, 2019, 5:43 PM IST
ಚಿಕ್ಕನಾಯಕನಹಳ್ಳಿ ತಾಲೂಕಿನ ತೀರ್ಥಪುರ ಗ್ರಾಪಂ ವ್ಯಾಪ್ತಿಯ ಕಾರ್ತಿಕೆಹಾಳ್ ಅಂಗನವಾಡಿ ರಸ್ತೆ ಗುಂಡಿಯಲ್ಲಿ ನೀರು ನಿಂತಿರುವುದು.
ಚಿಕ್ಕನಾಯಕನಹಳ್ಳಿ: ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ತಿಕೆಹಾಳ್ ಊರಿನಲ್ಲಿನ ಅಂಗನ ವಾಡಿ ರಸ್ತೆ ಮಳೆ ಬಂದರೆ ಕೆಸರು ಗದ್ದೆಯಾಗುತ್ತಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆ ಯಾಗುತ್ತಿದೆ ಎಂದು ಯುವಕ ರಾಕೇಶ್ ನಾಯಕ್ ಆರೋಪಿಸಿದ್ದಾರೆ.
ಕಾರ್ತಿಕೆಹಾಳ್ ಊರಿನಲ್ಲಿನ ಅಂಗನ ವಾಡಿಗೆ ಹೋಗುವ ರಸ್ತೆಯಲ್ಲಿ ಗುಂಡಿ ಗಳು ಬಿದ್ದು ಮಳೆ ನೀರು ಶೇಖರಣೆ ಯಾಗಿದೆ. ಈ ರಸ್ತೆ ಕೆಸರು ಗದ್ದೆಯಂತಾ ಗಿದ್ದು, ಹಲವಾರು ವರ್ಷದಿಂದ ರಸ್ತೆ ದುರಸ್ತಿ ಮಾಡದೇ ನಿರ್ಲಕ್ಷ್ಯ ವಹಿಸ ಲಾಗಿದೆ. ನಿವಾಸಿಗಳಿಗೆ ತೊಂದರೆಯಾಗು ತ್ತಿದ್ದರೂ ಗ್ರಾಮ ಪಂಚಾಯಿತಿ ಸದಸ್ಯರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದು, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋ ಜನವಾಗಿಲ್ಲ. ಸಂಬಂಧಪಟವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆ ಬಗೆ ಹರಿಸಬೇಕು. ಇಲ್ಲ ವಾದರೆ ಗ್ರಾಮ ಪಂಚಾಯಿತಿ ಮುಂದೆ ಧರಣಿ ಮಾಡು ವುದಾಗಿ ಎಚ್ಚರಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444