ಶೇಷಪ್ಪನಹಳ್ಳಿ ರಸ್ತೆ ದುರಸ್ತಿಗೆ ಮೀನಾಮೇಷ

Team Udayavani, Oct 29, 2019, 6:00 PM IST

tk-tdy-1

ಹುಳಿಯಾರು: ಜಿಲ್ಲೆಯ ಗಡಿ ಭಾಗವಾದ ದಸೂಡಿಯಿಂದ ಹಿರಿಯೂರಿಗೆ ಸಂಪರ್ಕ ಕಲ್ಪಿಸುವ ಶೇಷಪ್ಪನಹಳ್ಳಿ ರಸ್ತೆ ನಿರ್ಮಿಸಿ ಸುಮಾರು 15 ವರ್ಷಗಳೇ ಕಳೆದಿದ್ದು, ರಸ್ತೆ ಪಕ್ಕ ಮುಳ್ಳಿನ ಪೂದೆ, ಗಿಡಗಂಟೆಗಳು ಬೆಳೆದು ಕಾಡುಪ್ರಾಣಿಗಳ, ವಿಷಜಂತುಗಳ ಆವಾಸ ಸ್ಥಾನವಾಗಿದೆ.

ಆಳೆತ್ತರದ ಗುಂಡಿಗಳು ಬಿದ್ದಿದ್ದು ಬಸ್‌ ಹಾಗೂ ಇನ್ನಿತರ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ದ್ವಿಚಕ್ರ ಸವಾರರಂತೂ ಯಾತನೆ ಪಟ್ಟು ಸಂಚರಿಸಬೇಕಿದೆ. ಮಳೆ ಬಂದರಂತೂ ಓಡಾಡಲೂ ಅಸಾಧ್ಯ ಎನ್ನುವಂತೆ ಕೆಸರು ಗದ್ದೆಯಾಗುತ್ತದೆ. ರಸ್ತೆಯು ದಸೂಡಿ ಗ್ರಾಮದಿಂದ ಪುರದಯ್ಯನಪಾಳ್ಯ, ಚಿತ್ರದೇವರಹಟ್ಟಿ, ಶೇಷಪ್ಪನಹಳ್ಳಿ, ಹಾಲುಮಾದೇನಹಳ್ಳಿ ಗ್ರಾಮದ ಮೂಲಕ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್‌ 234 ಗೆ ಸೇರುತ್ತದೆ. ಈ ಹಳ್ಳಿಗಳಿಂದ ಸುಮಾರು 79 ವಿದ್ಯಾರ್ಥಿಗಳು ಬಸ್‌ ಪಾಸ್‌ ಮಾಡಿಸಿ ಶಾಲೆಗಳಿಗೆ ಬಂದೋಗುತ್ತಾರೆ.

ಅಲ್ಲದೆ ಸಂತೆ, ಆಸ್ಪತ್ರೆ ಅಂಗಡಿ ಸೇರಿ ಅನೇಕ ಸೌಲಭ್ಯಗಳಿಗೆ ಈ ಭಾಗದ ಜನ ಈ ರಸ್ತೆ ಮೂಲಕ ಹಿರಿಯೂರಿಗೆ ಹೋಗಬೇಕಿದೆ. ಆದರೆ ರಸ್ತೆ ಪರಿಸ್ಥಿತಿ ತೀರಾ ಹದಗೆಟ್ಟಿದ್ದರೂ ದುರಸ್ತಿ ಮಾಡಲು ಜನಪ್ರತಿನಿಧಿಗಳು ಮುಂದಾಗಿಲ್ಲ.  ದಸೂಡಿ ಗ್ರಾಮ ಜಿಲ್ಲೆಯ ಗಡಿ ಗ್ರಾಮದಲ್ಲಿದ್ದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗಡಿ ಗ್ರಾಮಗಳಿಗೆ ಹೊಂದಿಕೊಂಡಿವೆ. ಹಿರಿಯೂರು ಭಾಗದ ರಸ್ತೆ ಸುಗಮವಾಗಿದ್ದು ತುಮಕುರು ಭಾಗದ ಕೇವಲ ಒಂದೆರಡು ಕಿ.ಮೀ. ರಸ್ತೆ ದುರಸ್ತಿಗೆ ಮೀನಮೇಷ ಎಣಿಸುತ್ತಿದ್ದಾರೆ.

ಶೇಷಪ್ಪನಹಳ್ಳಿ ರಸ್ತೆ ಅನೇಕ ವರ್ಷಗಳಿಂದ ಕಿತ್ತು ಅಧ್ವಾನವಾಗಿದೆ. ಈ ಭಾಗದ ಜನರು ಪ್ರತಿಭಟನೆ ಮಾಡಿದ ಫಲವಾಗಿ ರಸ್ತೆಯನ್ನೇನೋ ಮಾಡಿದರು. ಆದರೆ ಅರ್ಧಕ್ಕೆ ನಿಲ್ಲಿಸಿ ಹೋದವರು ಮತ್ತೆ ಬಂದಿಲ್ಲ. ಆದರೆ ಚುನಾವಣಾಸಂದರ್ಭ ದುರಸ್ತಿಯಾಗದೆ ಉಳಿದ ರಸ್ತೆಗೆ ಹಾಕಿರುವ ಮಣ್ಣು ಮಳೆಗಾಲದಲ್ಲಿ ಕೆಸರಾಗಿ ಓಡಾಡಲು ಆಗದಂತಾಗಿದೆ. ಅಧಿಕಾರಿಗಳು ಇನ್ನಾದರೂ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿ. -ಕೆ. ಹನುಮಂತರಾಯಪ್ಪ, ದಸೂಡಿ ಗ್ರಾಪಂ ಉಪಾಧ್ಯಕ್ಷ

-ಎಚ್‌.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.