ಗೊಲ್ಲರಹಟ್ಟಿಯಲ್ಲಿ ನಿರೀಕ್ಷಿತ ಅಭಿವೃದ್ಧಿ ಮರೀಚಿಕೆ

ಮುಖ್ಯಮಂತ್ರಿ ಎಚ್‌ಡಿಕೆ ಆಶ್ವಾಸನೆ ಪೂರ್ತಿ ಈಡೇರಿಲ್ಲ • ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ

Team Udayavani, Jun 21, 2019, 2:32 PM IST

tk-tdy-1..

ಗುಡಿಸಲಲ್ಲಿ ವಾಸಿಸುತ್ತಿರುವ ನಾಗರಾಜು ಕುಟುಂಬ.

ಶಿರಾ: ತಾಲೂಕಿನ ಹೊನ್ನಗೊಂಡನಹಳ್ಳಿಯ ಗೊಲ್ಲರ ಹಟ್ಟಿಯಲ್ಲಿ 21-12-2006ರಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಿಂದ ಸ್ಥಳೀಯರಲ್ಲಿದ್ದ ನಿರೀಕ್ಷಿಸಿದ ಅಭಿವೃದ್ಧಿ ಈವರೆಗೆ ಈಡೇರಿಲ್ಲ. ಆದರೆ ಕೆಲವೊಂದು ಪ್ರಗತಿಗಳು ಕಂಡಿವೆ.

ಗ್ರಾಮ ಬದಲಾಗಲಿಲ್ಲ: ಗೊಲ್ಲರಹಟ್ಟಿಯು ಶೇ.95ರಷ್ಟು ಕಾಡು ಗೊಲ್ಲರೇ ವಾಸಿಸುವ ಮೂಲ ಸೌಕರ್ಯದ ಕೊರತೆಯಿರುವ ಹಿಂದುಳಿದ ಗ್ರಾಮ. ಮುಖ್ಯಮಂತ್ರಿ ಗ್ರಾಮಕ್ಕೆ ಭೇಟಿ ನೀಡುತ್ತಿರು ವುದರಿಂದ ಗ್ರಾಮ ಸುವರ್ಣಗ್ರಾಮವಾಗುತ್ತದೆ ಎಂದು ಗ್ರಾಮಸ್ಥರು ಕಂಡಿದ್ದ ಕನಸು ನನಸಾಗಿಲ್ಲ. ನೀಡಿದ ಆಶ್ವಾಸನೆಗಳು ಪೂರ್ತಿ ಈಡೇರಲಿಲ್ಲ ಎಂಬುದು ಗ್ರಾಮಸ್ಥರ ಬೇಸರದ ನುಡಿ.

ಪಾಳು ಬಿದ್ದಿದೆ ಮನೆ: ಅಂದು ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ತಾಪಂ ಸದಸ್ಯ ಚಿಕ್ಕಣ್ಣ ಹಾಗೂ ಸಹೋದರ ನಾಗರಾಜು ಎಂಬುವವರ ಮನೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಶಿರಾ ಶಾಸಕ ಬಿ.ಸತ್ಯ ನಾರಾಯಣ ಮತ್ತು ಪಕ್ಷದ ಮುಖಂಡರು ಊಟ ಮಾಡಿದ್ದರು. ಆ ಸಂದರ್ಭ ಶಿಥಿಲಾವಸ್ಥೆಯಲ್ಲಿದ್ದ ಈ ಮನೆ ಈಗ ಪಾಳು ಬಿದ್ದು ಗಿಡಗಂಟಿಗಳು ಬೆಳೆದಿವೆ. ನಾಗರಾಜು, ಈಗ ಗುಡಿಸಲು ಕಟ್ಟಿಕೊಂಡು, 80 ವರ್ಷದ ತಾಯಿ, ಹೆಂಡತಿ ಮಕ್ಕಳೊಂದಿಗೆ ವಾಸ ವಾಗಿದ್ದಾನೆ. ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ 13 ವರ್ಷ ಕಳೆದರೂ ನೆರವಿಗೆ ಬಂದಿಲ್ಲ ಎಂದು ಪಾಳು ಬಿದ್ದ ಮನೆ ತೋರಿಸುತ್ತಾರೆ ನಾಗರಾಜ್‌.

ಭರವಸೆ ಮಹಾಪೂರ: ಕುಮಾರಸ್ವಾಮಿ ವಾಸ್ತವ್ಯ ಮಾಡಿದಂದು ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ತೆರೆಯುತ್ತೇನೆ. ಸಿಸಿ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಕಲ್ಪಿಸುತ್ತೇನೆ. ಸಮುದಾಯ ಭವನ ನಿರ್ಮಿಸುತ್ತೇನೆ. ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುತ್ತೇನೆ ಮತ್ತು ನರಸಿಂಹಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧನ ಸಹಾಯ ಮಾಡುತ್ತೇನೆಂದು ಭರವಸೆ ನೀಡಿದ್ದರು.

 

● ಎಸ್‌.ಕೆ.ಕುಮಾರ್‌

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.