ತಾಲೂಕಿನಲ್ಲಿನ್ನು ಅಧಿಕಾರಿಗಳ ಗ್ರಾಮವಾಸ್ತವ್ಯ

ಕೆಡಿಪಿ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಪರಮೇಶ್ವರ್‌ ಹೇಳಿಕೆ • ಜನರ ಸಮಸ್ಯೆಗೆ ಸ್ಪಂದಿಸಿ

Team Udayavani, Jul 3, 2019, 11:34 AM IST

tk-dy-1..

ಕೊರಟಗೆರೆ ತಾಪಂ ಸಭಾಗಂಣದಲ್ಲಿ ಏರ್ಪಡಿಸಿದ್ದ ಕೆಡಿಪಿ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಡಿ.ಸಿ.ರಾಕೇಶ್‌ಕುಮಾರ್‌, ಜಿಪಂ ಸಿಇಒ ಶುಭಾಕಲ್ಯಾಣ್‌, ಎಸ್ಪಿ ವಂಶೀಕೃಷ್ಣ, ತಾಪಂ ಅಧ್ಯಕ್ಷೆ ನಾಜೀಮಾಬೀ, ವೆಂಕಟಪ್ಪ ಇತರರಿದ್ದರು.

ಕೊರಟಗೆರೆ: ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಎಲ್ಲಾ ಅಧಿಕಾರಿಗಳು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ತಾಪಂ ಕೆಡಿಪಿ ಸಭೆಯಲ್ಲಿ ಮಾತನಾಡಿ, ಇಲಾಖಾ ಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಬೇಕು. ಇಲಾಖಾಧಿಕಾರಿಗಳು ಪ್ರತಿನಿತ್ಯ ದೂರದ ಊರು ಗಳಿಂದ ಬರುತ್ತಿದ್ದು ಕಚೇರಿಯಲ್ಲಿ ಕೆಲಸಗಳು ಕುಂಠಿತವಾಗಿದ್ದು, ಕ್ಷೇತ್ರದಲ್ಲೇ ಇದ್ದು ಜನರಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಸಕ್ಕರೆ ಇಲ್ಲದ ಹಾಲು: ತಾಲೂಕು ಕಚೇರಿ ಮತ್ತು ತಾಪಂ ಕಚೇರಿ ಶುಚಿತ್ವವಿಲ್ಲದೆ ನೂತನ ಕಟ್ಟಡ ಶಿಥಿಲ ವಾಗಿರುವಂತೆ ಕಾಣುತ್ತಿದೆ. ಸ್ವಚ್ಛತೆಗೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದ ಅವರು, ಕಂದಾಯ ಇಲಾಖೆಯಲ್ಲಿ ಅನೇಕ ದೂರುಗಳು ಬರುತ್ತಿದ್ದು, ಈ ಕುರಿತು ಡೀಸಿಯೊಂದಿಗೆ ಸಭೆ ನಡೆಸುತ್ತೇನೆ. ತಾಲೂಕಿನಲ್ಲಿ ಅಕ್ಷರ ದಾಸೋಹದೊಂದಿಗೆ ಮಕ್ಕಳಿಗೆ ಕ್ಷೀರಭಾಗ್ಯ ನೀಡುತ್ತಿದ್ದು, ಕೋಳಾಲ ಹೋಬಳಿಯ ಶಾಲೆಯೊಂದ ರಲ್ಲಿ ಸಕ್ಕರೆ ಇಲ್ಲದೆ ಮಕ್ಕಳಿಗೆ ಹಾಲು ನೀಡುತ್ತಿದ್ದಾರೆ. ಈ ಬಗ್ಗೆ ಅಕ್ಷರ ದಾಸೋಹ ಅಧಿಕಾರಿಗಳು ಪರಿ ಶೀಲಿಸಬೇಕು. ಶಿಕ್ಷಣಾಧಿಕಾರಿಗಳು ತಾಲೂಕಿ ಎಲ್ಲಾ ಶಾಲೆಗಳಿಗೂ ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಗೃಹ ಇರಬೇಕು. ಶೌಚಗೃಹ ಇಲ್ಲದ ಶಾಲೆ ಗುರುತಿಸಿ ವರದಿ ಸಲ್ಲಿಸಬೇಕು. ಶಾಲೆ ಆವರಣದಲ್ಲಿ ಸಸಿ ನೆಟ್ಟು ಪೋಷಿಸುವಂತೆ ಶಿಕ್ಷಕರಿಗೆ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದರು.

ತಾಲೂಕಿನಲ್ಲಿ ಯಾವ ಹೋಬಳಿ, ಗ್ರಾಮದಲ್ಲಿ ಮಳೆಯಾಗಿದೆ ಎಂಬುದು ತಿಳಿಯುತ್ತಿಲ್ಲ. ಮುಂದಿನ ಸಭೆಗೆ ಪ್ರತಿ ಹೋಬಳಿ ಸೇರಿದಂತೆ ಗ್ರಾಪಂ ವ್ಯಾಪ್ತಿ ಯಲ್ಲಿ ಮಳೆ ವಿವರ ನೀಡುವಂತೆ ಹಾಗೂ ಪ್ರಸ್ತುತ ರೈತರಿಗೆ ಬೇಕಾಗುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ವಿತರಿಸುವಂತೆ ಕೃಷಿ ಅಧಿಕಾರಿ ನಾಗರಾಜುಗೆ ಡಿಸಿಎಂ ತಿಳಿಸಿದರು.

ಸರ್ಕಾರದ ಸವಲತ್ತು ನೀಡಿ: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕಳೆದ 5 ವರ್ಷಗಳಿಂದ ಒಂದೇ ವರದಿ ನೀಡುತ್ತಿದ್ದೀರಿ. ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತರಿಗೆ ಆರ್ಥಿಕವಾಗಿ ಲಾಭದಾಯಕ ತರಕಾರಿ ಹಾಗೂ ಹಣ್ಣುಗಳು ಬೆಳೆಯಲು ಸರ್ಕಾರದ ಸವಲತ್ತು ನೀಡಬೇಕು ಎಂದರು. ರಾಜ್ಯದಲ್ಲಿ ಆಹಾರ ಇಲಾಖೆಯಿಂದ ಶೇ.90 ಬಿಪಿಎಲ್ ಕಾರ್ಡ್‌ ವಿತರಿ ಸಿರುವ ಮಾಹಿತಿ ಇದ್ದು, ಈ ಬಗ್ಗೆ ಸರಿಯಾದ ಮಾಹಿತಿ ದೊರೆಯದಂತಾಗಿದ್ದು, ಇಲಾಖಾಧಿಕಾರಿ ಗಳು ತನಿಖೆ ಮೂಲಕ ಅರ್ಹ ಮತ್ತು ಅನರ್ಹ ಫ‌ಲಾನುಭವಿಗಳ ಪಟ್ಟಿ ಮಾಡಿ ವರದಿ ನೀಡುವಂತೆ ತಿಳಿಸಿದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಜಗದೀಶ್‌ ಮಾಹಿತಿ ನೀಡಿ, ಪ್ರಸಕ್ತ ವರ್ಷದಲ್ಲಿ ತಾಲೂಕಿನಲ್ಲಿ ವಿವಿಧ ರಸ್ತೆ ಕಾಮಗಾರಿಗೆ 107 ಕೋಟಿ ರೂ. ಬಿಡುಗಡೆಯಾಗಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‌ ರಮೇಶ್‌ ಮಾಹಿತಿ ನೀಡಿ, ತಾಲೂಕಿನಲ್ಲಿ ಗೋಬಲ ಗುಟ್ಟೆ ಕೆರೆ ಹಾಗೂ ಗೌಡನಕೆರೆ ಅಭಿವೃದ್ಧಿಗೆ ವಿಶೇಷ ಅನುದಾನವಾಗಿ 1.5 ಕೋಟಿ ರೂ.ಬಿಡುಗಡೆ ಯಾಗಿದ್ದು, ಇದರೊಂದಿಗೆ ಚೆಕ್‌ ಡ್ಯಾಂ ಮತ್ತು ರಕ್ಷಣಾ ಗೋಡೆಗಳ ನಿರ್ಮಾಣಕ್ಕೂ ಹಣ ಬಿಡುಗಡೆಯಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು.

ಇಂಜಿನಿಯರ್‌ ರಂಗಪ್ಪ ಮಾತನಾಡಿ ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು 139 ಕಾರ್ಯನಿರ್ವಹಿಸುತ್ತಿದ್ದು, ಇದೊಂದಿಗೆ 32 ಘಟಕ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 132 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೇಡಿಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಪ್ರಕಾಶ್‌ ಮತ್ತು ತಾಲೂಕು ವೈದ್ಯಾಧಿಕಾರಿ ಡಾ.ವಿಜಯ ಕುಮಾರ್‌, ಸಮಾಜ ಕಲಾಣ್ಯಾಧಿಕಾರಿ, ಸಿಡಿಪಿಒ ಶಮಂತಕ ಮಾಹಿತಿ ನೀಡಿದರು. ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಂಶಿಕೃಷ್ಣ, ತಾಪಂ ಅಧ್ಯಕ್ಷ ನಾಜೀಮಾಬೀ, ಉಪಾಧ್ಯಕ್ಷ ವೆಂಕಟಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಸಿ.ರಾಮಯ್ಯ, ಜಿಪಂ ಸದಸ್ಯ ಪ್ರೇಮಾ ಮಹಾಲಿಂಗಪ್ಪ, ನಾರಾಯಣ ಮೂರ್ತಿ, ಶಿವರಾಮಯ್ಯ, ಅಕ್ಕಮಹಾದೇವಿ, ಮಧುಗಿರಿ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ, ತಹಶೀಲ್ದಾರ್‌ ಶಿವರಾಜು, ಇಒ ಶಿವಪ್ರಕಾಶ್‌ ಇತರರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.