ಗ್ರಾಪಂನಲ್ಲೂ ಆಪರೇಷನ್‌ ಕಮಲ

ಬಿಜೆಪಿಗಿಂತ 15 ಸಾವಿರ ಮತಗಳ ಅಂತರದಲ್ಲಿ ಜೆಡಿಎಸ್‌ ಮುಂದಿದೆ: ಅನಂತ್‌ಕುಮಾರ್‌

Team Udayavani, Feb 9, 2021, 4:49 PM IST

oparation kamala

ತುಮಕೂರು: ಅಧಿಕಾರ ದುರುಪಯೋಗ,ಆಪರೇಷನ್‌ ಕಮಲದಿಂದ ಕೆಲವು ಗ್ರಾಪಂಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿರಬಹುದು, ಆದರೆ ಕ್ಷೇತ್ರದಲ್ಲಿ ಬಂದಿರುವ ಮತಗಳಲ್ಲಿ ಜೆಡಿಎಸ್‌ 15 ಸಾವಿರ ಮತಗಳ ಅಂತರದಲ್ಲಿ ಮುಂದೇ ಇದೆ ಎಂದು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ಹಾಲನೂರು ಅನಂತ್‌ ಕುಮಾರ್‌ ತಿಳಿಸಿದರು.

ಸೋಮವಾರ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿ, ತುಮಕೂರು ಗ್ರಾಮಾಂತರ ಕ್ಷೇತ್ರದ ಪ್ರಮುಖ ಗ್ರಾಪಂಗಳಾದ ಹೆಗ್ಗೆರೆ, ಗೂಳೂರು, ನಾಗವಲ್ಲಿ, ತಿಮ್ಮರಾಜನಹಳ್ಳಿ, ಹೊನಸಗೆರೆ ಗ್ರಾಪಂ ಜೆಡಿಎಸ್‌ ಬೆಂಬಲಿಗರ ವಶಕ್ಕೆ ಬಂದಿವೆ ಎಂದು ಹೇಳಿದರು.

ಸೆಳೆದಿದ್ದಾರೆ: ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ತನ್ನ ಪ್ರಾಬಲ್ಯ ಉಳಿಸಿಕೊಂಡಿದೆ. ಕ್ಷೇತ್ರದ 35 ಗ್ರಾಪಂಗಳ 5 ಕ್ಷೇತ್ರಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಜೆಡಿಎಸ್‌ ಪಕ್ಷದವರಾಗಿದ್ದು 10 ಗ್ರಾಪಂಗಳಲ್ಲಿ ಉಪಾಧ್ಯಕ್ಷರಾಗಿದ್ದಾರೆ, 6 ಪಂಚಾಯ್ತಿಗಳಲ್ಲಿ ಸಮಾನಾಂತರವಾಗಿ ಇದ್ದೆವು. ಅಲ್ಲಿ ಆಪರೇಷನ್‌ ಕಮಲ ಮಾಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮತ್ತು ಸಚಿವ ಗೋಪಾಲಯ್ಯ ಅವರಿಂದ ಒತ್ತಡ ಹಾಕಿಸಿ ತಮ್ಮತ್ತ ಸೆಳೆದು ಕೊಂಡು ಅಧಿಕಾರ ಹಿಡಿದಿದ್ದಾರೆಂದರು.

ದೂಳಿಪಟ ಮಾಡಲು ಆಗಲ್ಲ: ಕೆಲವು ಕಡೆ ಅಧಿಕಾರ ದುರುಪಯೋಗಪಡಿಸಿಕೊಂಡು ಮೀಸಲಾತಿ ವ್ಯತ್ಯಾಸವಾಗಿ ನಮ್ಮ ಕೈ ತಪ್ಪಿದೆ. ಆದರೆ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲಿಗರಿಗೆ ಬಂದಿರುವ ಮತ ಗಮನಿಸುವುದಾದರೆ ಬಿಜೆಪಿಗಿಂತ 15 ಸಾವಿರ ಹೆಚ್ಚು ಮತ ಜೆಡಿಎಸ್‌ ಬೆಂಬಲಿಗರಿಗೆ ಬಂದಿವೆ ಎಂದು ಹೇಳಿದರು.

ಗ್ರಾಮಾಂತರ ಕ್ಷೇತ್ರದಲ್ಲಿ ನಮ್ಮ ಶಾಸಕರಾದ ಡಿ.ಸಿ.ಗೌರಿಶಂಕರ್‌ ಅವರು ಮಾಡಿರುವ ಜನಪರ ಕೆಲಸಗಳು ಜನರಿಗೆ ತಿಳಿದಿವೆ. ಮತದಾರರು ಜೆಡಿಎಸ್‌ ಪರ ಇದ್ದಾರೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ. ಜೆಡಿಎಸ್‌ ಎಂದೂ ದೂಳಿಪಟ ವಾಗುವುದಿಲ್ಲ. ಹಾಗೆ ಮಾಡಲೂ ಸಾಧ್ಯವಿಲ್ಲ ಎಂದರು. ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ, ಗ್ರಾಪಂ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅಭಿವೃದ್ಧಿ ಸಾಧಿಸುವಂತೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‌ ಅವರು ಸಂಬಂಧಿಸಿದ ಗ್ರಾಪಂ ಅಧ್ಯಕ್ಷರಿಗೆ ಕಿವಿಮಾತು ಹೇಳಿದ್ದಾರೆ ಎಂದರು.

ಇದನ್ನೂ ಓದಿ :ಅಂಬೇಡ್ಕರ್ ಭವನ ನನ್ನ ಅಭಿಲಾಷೆ: ಶಾಸಕ

ತಾಪಂ, ಜಿಪಂ ಚುನಾವಣೆಗೆ ಸಿದ್ಧ:ಕ್ಷೇತ್ರದ ಜೆಡಿಎಸ್‌ ಮುಖಂಡರೆಲ್ಲರೂ ಸಂಘಟಿತವಾಗಿ ಹೋರಾಡಿ  ಮುಂಬರುವ ಜಿಪಂ, ತಾಪಂನಲ್ಲಿ ಜೆಡಿಎಸ್‌ ಹೆಚ್ಚು ಸ್ಥಾನ ಪಡೆಯುವಂತೆ ಮಾಡಬೇಕಿದೆ ಎಂದು ನಮ್ಮ ಶಾಸಕರಾದ ಡಿ.ಸಿ.ಗೌರಿಶಂಕರ್‌ ಕರೆ ನೀಡಿದ್ದಾರೆ. ಅದರಂತೆ ನಾವು ಚುನಾವಣೆಗೆ ಸಿದ್ಧರಾಗಿದ್ದೇವೆಂದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.