ಓವರ್‌ ಹೆಡ್‌ ಟ್ಯಾಂಕ್‌ ದಿಢೀರ್‌ ಕುಸಿತ

ಕಳಪೆ ಕಾಮಗಾರಿ ವಿರುದ್ಧ ಕ್ರಮ ಕೈಗೊಳ್ಳಲು ಗ್ರಾಮಸ್ಥರ ಆಗ್ರಹ

Team Udayavani, Jun 1, 2019, 3:01 PM IST

tumkur-tdy-3..

ಶಿರಾ ತಾಲೂಕಿನ ಕಪ್ಪೇನಹಳ್ಳಿ ಮತ್ತು ಬೋವಿ ಕಾಲೋನಿಗೆ ನೀರುಣಿಸುತ್ತಿದ್ದ ಓವರ್‌ ಹೆಡ್‌ ಟ್ಯಾಂಕ್‌ ದಿಢೀರ್‌ ಕುಸಿದು ಬಿದ್ದಿದೆ.

ಶಿರಾ: ನೀರು ಸರಬರಾಜು ಮಾಡುತ್ತಿದ್ದ ಓವರ್‌ ಹೆಡ್‌ ಟ್ಯಾಂಕ್‌ ದಿಢೀರ್‌ ಕುಸಿದುಬಿದ್ದ ಘಟನೆ ತಾಲೂಕಿನ ಚಿನ್ನೇನ್ನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆ ದಿದೆ. ಪಂಚಾಯ್ತಿಯ ಕಪ್ಪೇನಹಳ್ಳಿ ಮತ್ತು ಬೋವಿ ಕಾಲೋನಿಗೆ ನೀರು ಸರಬರಾಜು ಮಾಡುತ್ತಿದ್ದ ಸುಮಾರು 1 ಲಕ್ಷ ಲೀಟರ್‌ ಸಾಮರ್ಥ್ಯ ಹೊಂದಿದ್ದ, ಟ್ಯಾಂಕ್‌ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಕಾಮಗಾರಿ ಕಳಪೆ ಎನ್ನುವುದು ಸಾಬೀತಾಗಿದೆ. ಅದರ ಹಿಂದಿನ ಅಕ್ರಮಗಳು ಇನ್ನೂ ತನಿಖೆ ಯಾಗಿ ಹೊರಬರಬೇಕಿದೆ.

ಓವರ್‌ ಟ್ಯಾಂಕ್‌ ಕುಸಿದು ಬಿದ್ದಿರುವು ದಕ್ಕೆ ತೀವ್ರ ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಸ್ಥಳ ಪರಿಶೀಲನೆಗೆ ತೆರಳಿದ್ದ ಎಇಇ ರವಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಸಮಗ್ರ ತನಿಖೆ ನಡೆಸಿ ತಪ್ಪಿತ ಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿ ಸಿದ್ದಾರೆ. ಗ್ರಾಪಂ ಅಧ್ಯಕ್ಷೆ ಮಂಗಳಮ್ಮ ರಂಗಯ್ಯ, ಉಪಾಧ್ಯಕ್ಷ ವೆಂಕಟೇಶ್‌, ಸದಸ್ಯರಾದ ತಿಪ್ಪೇಸ್ವಾಮಿ, ಚಂದ್ರಣ್ಣ, ನಂದಿನಿ ದೇವರಾಜು ಹಾಗೂ ಪಂಚಾ ಯಿತಿ ಅಧಿಕಾರಿಗಳು, ಕಾರ್ಯದರ್ಶಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ಗ್ರಾಮಸ್ಥರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು: ಗ್ರಾಮಸ್ಥರ ಮಾತಿನಂತೆ ಮಾಹಿತಿ ಒಳಗೊಂಡ ವರದಿಯನ್ನು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಿ, ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರಲಾಗುವುದು. ಜೊತೆಯಲ್ಲೇ ಗ್ರಾಮದ ಹಿತದೃಷ್ಟಿ ಯಿಂದ ಪ್ರಸ್ತುತ ವರ್ಷ ಹೊಸದಾಗಿ ಟ್ಯಾಂಕ್‌ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಪರ್ಯಾಯ ವ್ಯವಸ್ಥೆ ಮಾಡಿ: ಸತತ ಬರದಿಂದ ಬೇಯುತ್ತಿರುವ ತಾಲೂಕಿ ನಲ್ಲಿ ಬೇಸಿಗೆಯಲ್ಲೇ ಟ್ಯಾಂಕ್‌ ಕುಸಿದಿದೆ. ಮೇಲ್ನೋಟಕ್ಕೆ ಕಳಪೆ ಕಾಮಗಾರಿ ಕಂಡು ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಸ್ಥರ ಕುಡಿಯುವ ಮತ್ತು ಬಳಕೆ ನೀರಿಗೆ ಅಭಾವ ಉಂಟಾಗದಂತೆ ತಕ್ಷಣ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಪುಟ್ಟರಾಜು ಒತ್ತಾಯಿಸಿದ್ದಾರೆ.

ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ: ಕೇವಲ ಐದಾರು ವರ್ಷದ ಹಿಂದೆ ನಿರ್ಮಿಸಿದ್ದ ಟ್ಯಾಂಕ್‌ ಏಕಾಏಕಿ ಕುಸಿದಿದೆ ಎಂದರೆ ಅದರ ಗುಣಮಟ್ಟ ಯೋಚಿಸಿ. ಉತ್ತಮ ಗುಣಮಟ್ಟದ ಕಬ್ಬಿಣ, ಸಿಮೆಂಟ್ ಬಳಸಿದ್ದರೆ, ಇಂಥ ಅನಾಹುತ ನಡೆಯುತ್ತದೆ. ಟ್ಯಾಂಕ್‌ ಕುಸಿದ ಅನಾಹುತಕ್ಕೆ ಕಾರಣರಾದ ಗುತ್ತಿಗೆದಾರನ ಪರವಾನಗಿ ರದ್ದು ಪಡಿಸಬೇಕು. ಅವನಿಗೆ ಸಾಥ್‌ ನೀಡಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಅಕ್ರಮ ಎಸಗುವವರಿಗೆ ಭಯವೇ ಇಲ್ಲದಂತಾಗುತ್ತದೆ ಎಂದು ಕಪ್ಪೇನಹಳ್ಳಿ ಸಿದ್ದಯ್ಯ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.