Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು
Team Udayavani, Mar 18, 2024, 2:54 PM IST
ಪಾವಗಡ: ಜೆಸಿಬಿ ಮತ್ತು ಟಿ.ವಿ.ಎಸ್.ಎಕ್ಸ್ ಎಲ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ.18ರ ಸೋಮವಾರ ಬೆಳಗ್ಗೆ ಸುಮಾರು 11 ಗಂಟೆಗೆ ತಾಲೂಕಿನ ಪಿ ರೊಪ್ಪ ಗ್ರಾಮದ ಬಾಲಾಜಿ ಮಿಲ್ ಸಮೀಪ ಸಂಭವಿಸಿದೆ.
ಪಾವಗಡ ತಾಲೂಕಿನ ಗುಂಡಾರ್ಲಹಳ್ಳಿ ಗ್ರಾಮದ ರಾಮಚಂದ್ರಪ್ಪ (60) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.