
ಪಾವಗಡ: 3 ವರ್ಷಗಳ ಹಿಂದೆ ನಾಪತ್ತೆ; ಯುವಕ ಹತ್ಯೆಯಾಗಿರುವ ಸುಳಿವು
ಪ್ರೀತಿಸುತ್ತಿದ್ದ ಯುವತಿಯ ಕಡೆಯವರು ಹತ್ಯೆ ಮಾಡಿರುವ ಅನುಮಾನ...
Team Udayavani, Sep 24, 2022, 10:27 PM IST

ಪಾವಗಡ: ಮೂರು ವರ್ಷಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯೊಬ್ಬರು ಹತ್ಯೆಯಾಗಿರುವ ಬಗ್ಗೆ ಪಟ್ಟಣ ಠಾಣೆ ಪೊಲೀಸರಿಗೆ ಸುಳಿವು ಸಿಕ್ಕಿದೆ.
ತಾಲೂಕಿನ ತಿಮ್ಮ ನಾಯಕನ ಪೇಟೆ ಗ್ರಾಮದ ನಾಗೇಂದ್ರ(26) 3 ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಸದ್ಯ ಕಾಣೆಯಾಗಿರುವ ಯುವಕ ಹತ್ಯೆಯಾಗಿರುವ ಸುಳಿವು ಸಿಕ್ಕಿರುವ ಹಿನ್ನೆಲೆ ಅನುಮಾನಿತರನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ಪ್ರಗತಿಯಲ್ಲಿದ್ದು, ಪಟ್ಟಣ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಅಜಯ ಸಾರಥಿ ನೇತೃತ್ವದಲ್ಲಿ ವಿಶೇಷ ತಂಡ ಹತ್ಯೆ ಪ್ರಕರಣವನ್ನು ಭೇದಿಸಿದೆ. 3 ವರ್ಷಗಳ ನಂತರ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪೊಲೀಸ್ ಇಲಾಖೆ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.
3 ವರ್ಷವಾದರೂ ಕಾಣೆಯಾದ ದಲಿತ ಯುವಕನನ್ನು ಪತ್ತೆ ಹಚ್ಚಿಲ್ಲ ಎಂದು ದಲಿತ ಪರ ಸಂಘಟನೆಗಳ ಮುಖಂಡರು ಸಭೆಗಳಲ್ಲಿ ಬೇಸರ ವ್ಯಕ್ತಪಡಿಸಿದ್ದರು. ನಾಗೇಂದ್ರ ಪ್ರೀತಿಸುತ್ತಿದ್ದ ಯುವತಿಯ ಕಡೆಯವರು ಹತ್ಯೆ ಮಾಡಿರುವ ಅನುಮಾನಗಳಿದ್ದವು. ಇದೇ ಸುಳಿವನ್ನು ಆಧರಿಸಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
