Udayavni Special

ತಾಪಂ ಅಳಿವು -ಉಳಿವಿನ ಬಗ್ಗೆ ಗೊಂದಲ ಸೃಷ್ಟಿ

ಅನುದಾನವಿಲ್ಲದೇ ಹಲ್ಲು ಕಿತ್ತ ಹಾವಾದ ತಾಪಂ ! ತಾಪಂ ಆಡಳಿತದ ವಿರುದ್ಧ ಶಾಸಕರ ಹಗ್ಗ-ಜಗ್ಗಾಟ

Team Udayavani, Feb 25, 2021, 8:16 PM IST

Pavagada Taluk Panchayat

ತುಮಕೂರು: ಸ್ಥಳೀಯ ಸರ್ಕಾರ ರಚನೆಯಲ್ಲಿ ಪಂಚಾಯತ್‌ ರಾಜ್‌ ವ್ಯವಸ್ಥೆ ಪ್ರಮುಖ ಪಾತ್ರ ವಹಿಸಿದೆ. ಗ್ರಾಪಂ, ತಾಪಂ ಮತ್ತು ಜಿಪಂ ಗ್ರಾಮೀಣ ಪ್ರದೇಶಗಳ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಕೆಲಸ ಮಾಡುತ್ತಿದೆ. ಆದರೆ, ಇತ್ತೀಚೆಗೆ ಪಂಚಾಯಿತಿ ಆಡಳಿತವ್ಯವಸ್ಥೆಯಲ್ಲಿ ಈವರೆಗೆ ಪ್ರಮುಖ ಸ್ಥಾನ ಪಡೆದಿರುವ ತಾಪಂ, ಅನುದಾನ ಕೊರತೆಯಿಂದ ಹಲ್ಲು ಕಿತ್ತ ಹಾವಿನಂತಾಗಿದೆ.

ಹೌದು, ಈಗಾಗಲೇ ಗ್ರಾಪಂ ಚುನಾವಣೆ ಮುಗಿದಿದೆ. ಇನ್ನೇನು ತಾಪಂ, ಜಿಪಂ ಚುನಾವಣೆಗಳು ನಡೆಯ ಬೇಕಿದೆ. ಈ ವೇಳೆಯಲ್ಲಿ ಪಂಚಾಯಿತಿ ಆಡಳಿತದ ವ್ಯವಸ್ಥೆ ಬಗ್ಗೆ ವ್ಯಾಪಕ ಚರ್ಚೆಗಳು ಕೇಳಿಬರುತ್ತಿದ್ದು, ತಾಪಂ ಆಡಳಿತ ಬೇಕೇ, ಬೇಡವೇ ಎನ್ನುವ ಚರ್ಚೆ ಆರಂಭಗೊಂಡಿದೆ. ಬರುವ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆಯೂ ಇದೆ. ಈಗಾಗಲೇ ಚುನಾವಣಾ ಆಯೋಗ ಜಿಪಂ ಮತ್ತು ತಾಪಂ ಚುನಾವಣೆ ನಡೆಸಲು ಎಲ್ಲಾ ರೀತಿಯ ತಯಾರಿ ನಡೆಸಿದ್ದು, ಕ್ಷೇತ್ರ ಪುನರ್‌ ವಿಂಗಡಣೆ ನಡೆದಿದೆ. ಗ್ರಾಮಗಳು ಅಭಿವೃದ್ಧಿಯಾಗ ಬೇಕಾದರೆ ಗ್ರಾಮೀಣ ಪ್ರದೇಶದಲ್ಲಿ ಅಧಿಕಾರ ಇರಬೇಕು ಎನ್ನುವ ಉದ್ದೇಶದಿಂದ ಪಂಚಾಯತ್‌ ರಾಜ್‌ ವ್ಯವಸ್ಥೆ ಜಾರಿಗೆ ಬಂದಿದೆ. ಜಿಲ್ಲಾ ಪರಿಷತ್‌ ಜಿಲ್ಲಾ ಮಟ್ಟದಲ್ಲಿ ಮಂಡಳ ಪಂಚಾಯಿತಿಗಳು ಗ್ರಾಮೀಣ ಪ್ರದೇಶದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದವು. ಜಿಲ್ಲಾ ಪರಿಷತ್‌ ಹಾಗೂ ಮಂಡಲ್‌ ಪಂಚಾಯಿತಿ ನಡುವೆ ಸೇತುವೆಯಾಗಿ ತಾಲೂಕು ಅಭಿವೃದ್ಧಿ ಅಧಿಕಾರಿ ಕೆಲಸ ನಿರ್ವಹಿಸುತ್ತಿದ್ದರು.

ತಾಪಂ ಅಧ್ಯಕ್ಷರಿಗೆ ಹೆಚ್ಚು ಅಧಿಕಾರ: ಜಿಲ್ಲಾ ಪರಿಷತ್‌ ಹೋಗಿ ಪಂಚಾಯತ್‌ ರಾಜ್‌ ವ್ಯವಸ್ಥೆ ಬಂದು ಜಿಪಂ, ತಾಪಂ ಮತ್ತು ಗ್ರಾಪಂ ಕಾರ್ಯಾರಂಭಗೊಂಡವು. ಗ್ರಾಪಂ ಆಡಳಿತದ ವೈಖರಿ ಬಗ್ಗೆ ನಿಗಾ ಇಡುವ ಅಧಿಕಾರ ತಾಪಂಗಳಿಗೆ ಇತ್ತು. ಜೊತೆಗೆ, ವಿವಿಧ ಅನುದಾನಗಳು ಬಂದು ತಾಪಂ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಲು ಅನುವಾಗಿತ್ತು. ಅನುದಾನ ಬಳಸಿ ಕೊಂಡು ತಾಪಂ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿತ್ತು.ತಾಪಂ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಪ್ರತಿ ತಿಂಗಳು 5ನೇ ತಾರೀಖೀನಂದು ತಾಲೂಕು ಅಧಿಕಾರಿಗಳ ಪ್ರಗತಿ ಬಗ್ಗೆ ಪರಿಶೀಲಿಸಲು, ಕೆಡಿಪಿ ಸಭೆ ನಡೆಸುವ ಅಧಿಕಾರ ಅಧ್ಯಕ್ಷರಿಗೆ ಇದೆ. ಜೊತೆಗೆ, ಗ್ರಾಪಂ ಆಡಳಿತ ವೈಖರಿ ಬಗ್ಗೆ ನಿಗಾವಹಿಸುವ ಅಧಿಕಾರ ತಾಲೂಕು ಪಂಚಾ ಯಿತಿಗಳಿಗೆ ಇದ್ದು, ಗ್ರಾಪಂ ಮತ್ತು ಜಿಪಂ ನಡುವೆ ಸೇತುವೆಯಾಗಿ ತಾಪಂ ಕಾರ್ಯನಿರ್ವ ಹಿಸುತ್ತಿರುವುದರಿಂದ ತಾಪಂ ಇರಬೇಕು. ಅದನ್ನು ಬಲಿಷ್ಠಗೊಳಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ತಾಪಂಗಳಿಗೆ ಈ ಹಿಂದೆ ಹೆಚ್ಚಿನ ಅನುದಾನ ಬರುತ್ತಿತ್ತು. ಈಗ ಯಾವುದೇ ಅನುದಾನ ಬರುತ್ತಿಲ್ಲ. ಬರುತ್ತಿರುವ ಅನುದಾನವೂ ಕಡಿಮೆ. ತಾಪಂ ಸದಸ್ಯರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆಲಸಮಾಡಲು ಸಾಧ್ಯವಾಗದ ಸ್ಥಿತಿ ಇದೆ. ತಾಪಂಗಳಿಗೆ ಹೆಚ್ಚಿನ ಅನುದಾನ ನೀಡಿ, ಅಧಿಕಾರ ನೀಡಬೇಕು. ಸರ್ಕಾರ ಇದನ್ನು ನೀಡದಿದ್ದರೆ, ತಾಪಂಗಳ ಅವಶ್ಯಕತೆಗಳು ಇಲ್ಲ ಎನ್ನುವ ವಾದವೂ ಇದೆ.

  • ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ : ಹಿರನ್‌ ಮನೆಗೆ ಎನ್‌ಐಎ ಭೇಟಿ

ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ : ಹಿರನ್‌ ಮನೆಗೆ ಎನ್‌ಐಎ ಭೇಟಿ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ೆರಯೆತೆಡ

ಕೋವಿಡ್‌ ತಡೆಗೆ ಕಾರ್ಯಾಚರಣೆಗಿಳಿದ ಪೊಲೀಸರು

್ಗಹ್ದಗಸ

ಧರ್ಮ ಸಂರಕ್ಷ ಣೆಗೆ ಗಮನ ಕೊಡಿ

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್‌ ವಶ : ಕೇರಳದ ಅರಬ್ಬೀ ಕಡಲಲ್ಲಿ ನೌಕಾಪಡೆ ಕಾರ್ಯಾಚರಣೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

“ಇಂಡಿಯಾ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಟೂರ್ನಿ ಮುಂದಕ್ಕೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ : ಹಿರನ್‌ ಮನೆಗೆ ಎನ್‌ಐಎ ಭೇಟಿ

ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ : ಹಿರನ್‌ ಮನೆಗೆ ಎನ್‌ಐಎ ಭೇಟಿ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಚಿವದ್ವಯರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.