ಎನ್‌.ಹೆಚ್‌.206 ಚತುಷ್ಪಥ ರಸ್ತೆ ಕಾಮಗಾರಿ ಕಳಪೆ, ಅವೈಜ್ಞಾನಿಕ

Team Udayavani, Apr 11, 2022, 3:25 PM IST

Untitled-1

ತಿಪಟೂರು: ಎನ್‌.ಎಚ್‌. 206 ರಾಷ್ಟ್ರೀಯ ಹೆದ್ದಾರಿಯನ್ನು ತುಮಕೂರು-ಹೊನ್ನಾವರದ ವರೆಗೆ ನೂರಾರು ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿಸಲು ನಡೆಸಲಾಗುತ್ತಿರುವ ನಿರ್ಮಾಣ ಕಾಮಗಾರಿಯು ತಾಲೂಕಿನಾದ್ಯಂತ ನಡೆಯುತ್ತಿದ್ದು, ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದ್ದು, ಸಂಚಾರಕ್ಕೆ ತೀವ್ರ ತೊಂದರೆ ಯಾಗುತ್ತಿದೆ ಎಂದು ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರ್‍ನಾಲ್ಕು ವರ್ಷಗಳಿಂದ ಕಾಮಗಾರಿಯು ಆಮೆ ವೇಗದಲ್ಲಿ ನಡೆಯುತ್ತಿದ್ದು, ಗುಣ ಮಟ್ಟದಿಂದ ಕೂಡಿಲ್ಲ. ಹೊಸದಾಗಿ ಹಾಕಿರುವ ಡಾಂಬರು ಕಿತ್ತು ಗುಂಡಿಗಳು ಬಿದ್ದಿದ್ದು, ಇದರಿಂದ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಡೆಯುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಪ್ರಾಣ ಕಳೆದುಕೊಳ್ಳುವಂತಾಗಿದೆ.

ಸೂಚನಾ ಫ‌ಲಕಗಳಿಲ್ಲ: ಅಧಿಕಾರಿಗಳು, ಗುತ್ತಿಗೆ ದಾರರು ನಿತ್ಯ ಓಡಾಡುವ ವಾಹನಗಳ ಸುರಕ್ಷಿತ ಪ್ರಯಾಣಕ್ಕೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಕಾಮಗಾರಿ ನಡೆಯು ತ್ತಿದ್ದರೂ ಯಾವುದೇ ಸೂಚನಾ ಫ‌ಲಕಗಳಿಲ್ಲ. ರಾಷ್ಟ್ರೀಯ ಹೆದ್ದಾರಿಯಾಗಿರುವ ಕಾರಣ ವಾಹನ ಗಳು ವೇಗವಾಗಿ ಬರುವುದರಿಂದ ಅಪಘಾತಗಳು ಸಂಭವಿಸುತ್ತಿವೆ.

ಅಪಘಾತ: ಇನ್ನೂ ಸಾಕಷ್ಟು ಕಡೆಗಳಲ್ಲಿ ರಸ್ತೆ ಕಿರಿದಾಗಿದ್ದು, ತಿರುವುಗಳು ಸಾಕಷ್ಟು ಸಂಖ್ಯೆಯಲ್ಲಿವೆ. ಮುಂಬರುವ ವಾಹನಗಳೇ ಕಾಣಿಸುವು ದಿಲ್ಲ. ದಿಢೀರ್‌ ಕಾಣಿಸಿದರೂ ಸೈಡ್‌ ಕೊಡಲು ಸ್ಥಳಾವಕಾಶವೇ ಇಲ್ಲ. ಅಲ್ಲದೇ ರಸ್ತೆಯ ಹಲವು ಕಡೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಏಕಾಏಕಿ ವಾಹನಗಳು ಬಂದು ಗುಂಡಿಗೆ ಇಳಿಯು ವುದರಿಂದ ಅಪಘಾತಗಳುಂಟಾಗಿ ಸಾವುನೋವು ಗಳು ಸಂಭವಿಸುತ್ತಿವೆ.

ಬಹುತೇಕ ಕಡೆ ರಸ್ತೆ ಹಾಳು: ಸಾವಿರಾರು ಸಂಖ್ಯೆ ಯಲ್ಲಿ ಬಾರಿ ವಾಹನಗಳು, ಬಸ್‌ಗಳು, ಲಾರಿ, ಕಾರುಗಳು ಸೇರಿದಂತೆ ಸಾವಿರಾರು ದ್ವಿಚಕ್ರ ವಾಹನಗಳು ನಿತ್ಯ ಓಡಾಡುತ್ತವೆ. ಬಹುತೇಕ ಕಡೆಗಳಲ್ಲಿ ರಸ್ತೆ ಹಾಳಾಗಿರುವುದು, ರಸ್ತೆ ಅಕ್ಕಪಕ್ಕ ಕಾಮಗಾರಿ ನಡೆಯುತ್ತಿರುವುದರಿಂದ ಮಣ್ಣು, ಜಲ್ಲಿ-ಕಲ್ಲುಗಳು ರಸ್ತೆಗೆ ಬೀಳುವುದು, ಕಾಮಗಾರಿ ನಡೆಸುವಾಗ ಬಿದ್ದಿರುವ ಗುಂಡಿಗಳಿಂದ ತಪ್ಪಿಸಲು ಹೋಗಿ ಎದುರಿನಿಂದ ಬರುವ ವಾಹನಗಳಿಗೆ ಡಿಕ್ಕಿ ಹೊಡೆಯುವುದು ಸೇರಿದಂತೆ ಆಯತಪ್ಪಿ ಬಿದ್ದು ಅಪಘಾತಗಳಾಗುತ್ತಿವೆ.

ನೂತನ ರಸ್ತೆ ಕಾಮಗಾರಿಯ ಪಕ್ಕದಲ್ಲಿ ಹಳೆ ರಸ್ತೆ ಇದ್ದು ಅಲ್ಲಲ್ಲಿ ತಿರುವು ತೆಗೆದುಕೊಳ್ಳಬೇಕಾಗಿದ್ದು, ಎಲ್ಲೂ ಸೂಚನಾ ಫ‌ಲಕಗಳಿಲ್ಲ. ತಿರುವು ತೆಗೆದು ಕೊಳ್ಳಬೇಕಾದ ಜಾಗದಲ್ಲಿ ರಸ್ತೆ ಸಂಪೂರ್ಣ ಹಾಳಾಗಿ ದ್ದರೂ ಅಧಿಕಾರಿಗಳು, ಗುತ್ತಿಗೆದಾರರು ಆ ಕಡೆ ಗಮನವನ್ನೇ ನೀಡದೆ ಅಧಿಕಾರಿಗಳು ಹಾಗೂ ಅಪಘಾತಕ್ಕೆ ಆಹ್ವಾನ ಮಾಡಿಕೊಡು ತ್ತಿದ್ದಾರೆ. ಇದರ ಪರಿಣಾಮ ಕಳೆದ ವಾರವೂ ಭೀಕರ ಅಪಘಾತ ಸಂಭವಿಸಿ 2 ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ ಹಲವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.