ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ


Team Udayavani, Mar 15, 2020, 3:00 AM IST

shikshanika_

ಕುಣಿಗಲ್‌: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಸ್ನಾನಕ್ಕೆ ಹೋಗಲು, ಉತ್ತಮ ಪರಿಸರ, ನುರಿತ ಶಿಕ್ಷಕರು ಹಾಗೂ ಮೂಲಭೂತ ಸೌಲಭ್ಯ ಅತ್ಯಗತ್ಯವಾಗಿದೆ. ಹೀಗಾಗಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಶಾಸಕ ಡಾ.ಎಚ್‌.ಡಿ.ರಂಗನಾಥ್‌ ಹೇಳಿದರು. ಪಟ್ಟಣದಲ್ಲಿ ಶನಿವಾರ 1.75 ಕೋಟಿ ರೂ. ವೆಚ್ಚದ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಆಧುನಿಕ ಯುಗದಲ್ಲಿ ಶಿಕ್ಷಣ ಕ್ಷೇತ್ರ ಅತಿವೇಗವಾಗಿ ಬೆಳೆಯುತ್ತಿದೆ. ಶ್ರೀಮಂತರ, ಉನ್ನತ ರಾಜಕಾರಣಿಗಳ ಹಾಗೂ ಅಧಿಕಾರಿಗಳ ಮಕ್ಕಳು ಪೋಷಕರು ಕೋಟ್ಯಂತರ ರೂ. ಖರ್ಚು ಮಾಡಿ ವಿದ್ಯಾಭ್ಯಾಸ ಕೊಡುತ್ತಿದ್ದಾರೆ. ಆದರೆ ಆರ್ಥಿಕ ಸಂಕಷ್ಟದಲ್ಲಿ ಇರುವ ಗ್ರಾಮೀಣ ಪ್ರದೇಶದ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ.

ಗುಣಮಟ್ಟದ ಶಿಕ್ಷಣ ಹಾಗೂ ವಸತಿ ನಿಲಯ, ಊಟ, ಉಪಾಹಾರ, ಪಠ್ಯ ಪುಸ್ತಕ, ಕಂಪ್ಯೂಟರ್‌ ಮೊದಲಾದ ಮೂಲಸೌಲಭ್ಯ ದೊರಕಿಸಿ ಕೊಡುತ್ತಿದೆ. ಈ ಸೌಲಭ್ಯ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ತಲುಪಿಸುವ ದಿಸೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಬಿಸಿಎಂ ಹಾಸ್ಟೆಲ್‌ ಕಟ್ಟಡಕ್ಕೆ 1.75 ಕೋಟಿ ರೂ. ಮಂಜೂರು ಮಾಡಿಸಿದೆ. ಆ ಅನುದಾನದಲ್ಲಿ ಇಂದು ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

2 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, 7 ಕೊಠಡಿ, ಅಡುಗೆ ಮನೆ, ಊಟದ ಕೋಣೆ, 8 ಸ್ನಾನದ ಗೃಹ, 8 ಶೌಚಗೃಹ, ಗ್ರಂಥಾಲಯ ಒಳಗೊಂಡಿರುತ್ತದೆ. ಕಟ್ಟಡ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತಮ ಕಟ್ಟಡವಾಗಲಿದೆ. ಈ ಕಟ್ಟಡ ತುಮಕೂರು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಗುಣಮಟ್ಟದ ಕಾಮಗಾರಿ ಮಾಡಿಸಬೇಕೆಂದು ಸೂಚಿಸಿದರು.

ಮಕ್ಕಳ ಭವಿಷ್ಯ ಉತ್ತಂಗಕ್ಕೆ ಬರಬೇಕು: ಮಕ್ಕಳು ನಾಡಿನ ಸಂಪತ್ತು. ಹೀಗಾಗಿ ಶಿಕ್ಷಕರು, ಪೋಷಕರು, ಹಾಸ್ಟೆಲ್‌ ಮೇಲ್ವಿಚಾರಕರು ವಿದ್ಯಾರ್ಥಿಗಳ ಅಗತ್ಯಕ್ಕೆ ಅನುಗುಣವಾಗಿ ವಿದ್ಯಾಭ್ಯಾಸದ ಜತೆಗೆ ಅಗತ್ಯವಿರುವ ಸೌಲಭ್ಯ ಕೊಡುವತ್ತ ಗಮನ ಹರಿಸಬೇಕು. ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ, ಕಂಪ್ಯೂಟರ್‌ ಕಲಿಸುವ ಕೆಲಸವಾಗಬೇಕಾಗಿದೆ ಎಂದು ಹೇಳಿದರು. ಪುರಸಭೆ ಸದಸ್ಯರಾದ ಕೆ.ಆರ್‌.ಜಯಲಕ್ಷ್ಮೀ, ರೂಪಿಣಿ, ಉದಯಕುಮಾರ್‌, ದೇವರಾಜ್‌, ವಿಸ್ತಾರಣಾಧಿಕಾರಿ ಪಾರ್ವತವ್ವ, ಪುರಸಭೆ ಮಾಜಿ ಅಧ್ಯಕ್ಷ ರೆಹಮಾನ್‌ ಷರೀಪ್‌, ಸದಸ್ಯ ಚಂದ್ರಶೇಖರ್‌, ಗುತ್ತಿಗೆದಾರ ಮಂಜುನಾಥ್‌ ಇದ್ದರು.

ಕೊರೊನಾ ಭಯಬೇಡ: ನಾನು ಶಾಸಕನಾಗಿದ್ದರೂ ವೃತ್ತಿಯಲ್ಲಿ ವೈದ್ಯನಾಗಿದ್ದೇನೆ. ಕೊರೊನಾ ವೈರಸ್‌ ಎದುರಿಸುವ ಶಕ್ತಿ ಆಧುನಿಕ ಜಗತ್ತಿಗೆ ಇದೆ. ರೋಗ ತಡೆಗಟ್ಟಲು ರಾಜ್ಯ ಸರ್ಕಾರ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಈ ಸಂಬಂಧ ಎಲ್ಲಾ ರೀತಿ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಅಲ್ಲದೆ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ತಾಲೂಕಿನಾದ್ಯಂತ ಹಮ್ಮಿಕೊಂಡಿದೆ. ಇದಕ್ಕೆ ಜನರು ಸಹಕಾರ ನೀಡುವುದರ ಜತೆಗೆ ನಿಮ್ಮ ಸುತ್ತಮುತ್ತಲಿನ ಪರಿಸರ ಸ್ವತ್ಛವಾಗಿಟ್ಟುಕೊಂಡು ರೋಗ ತಡೆಗಟ್ಟುವ ಕೆಲಸ ಮಾಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.