ನಾಡಗೀತೆಗೆ ಅಗೌರವ: ಪ್ರೊಬೇಷನರಿಐಎಎಸ್ ಅಧಿಕಾರಿಗೆ ನೋಟಿಸ್
Team Udayavani, Dec 30, 2017, 6:45 AM IST
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ವೇದಿಕೆಯಲ್ಲಿ ಕಾರ್ಯಕ್ರಮ ಆರಂಭಕ್ಕೂ ಮುನ್ನ ನಾಡಗೀತೆ ಹಾಡುವ ವೇಳೆಯಲ್ಲಿ ಚೂಯಿಂಗ್ ಗಮ್ ಅಗಿಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪ್ರೀತಿ ಗೆಲ್ಹೋಟ್ಗೆ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.
ಶಿರಾದಲ್ಲಿ ನಡೆದಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಸರ್ಕಾರದ ಸಾಧನಾ ಸಮಾವೇಶದ ಆರಂಭಕ್ಕೆ ನಾಡಗೀತೆ ಹಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಟಿ.ಬಿ.ಜಯಚಂದ್ರ, ಎಚ್.ಆಂಜನೇಯ ಸೇರಿ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಪೊ›ಬೇಷನರಿ ಐಎಎಸ್ ಅಧಿಕಾರಿ ಪ್ರೀತಿ ಗೆಲ್ಹೋಟ್ ಅವರು ವೇದಿಕೆಯಲ್ಲಿದ್ದರು. ನಾಡಗೀತೆ ಮೊಳಗುತ್ತಿರುವಾಗ ನಾಡಗೀತೆಗೆ ಗೌರವ ನೀಡದೆ ಚೂಯಿಂಗ್ ಗಮ್ ಅಗಿಯುತ್ತಿದ್ದರು. ಇದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಪ್ರೀತಿ ಗೆಲ್ಹೋಟ್ಗೆ ನೋಟೀಸ್ ನೀಡಿ ಅವರಿಂದ ಸ್ಪಷ್ಟೀಕರಣ ಪಡೆಯಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!