ಕಾಮಗಾರಿಗಳಿಂದ ಸಮಸ್ಯೆ ಸೃಷಿ

Team Udayavani, Sep 23, 2019, 4:09 PM IST

ತುಮಕೂರು: ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಂದ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದರಿಂದ ನಾಗರಿಕರಿಗೆ ತೀವ್ರ ಸಮಸ್ಯೆಗಳು ಎದುರಾಗುತ್ತಿವೆ ಎಂದು 15ನೇ ವಾರ್ಡ್‌ ಪಾಲಿಕೆ ಸದಸ್ಯೆ ಗಿರಿಜಾ ಧನಿಯಾ ಕುಮಾರ್‌ ಆರೋಪಿಸಿದರು.

ನಗರದಲ್ಲಿ ಮಾಡಲಾಗುತ್ತಿರುವ ಗ್ಯಾಸ್‌ ಲೈನ್‌, 24 ಗಂಟೆಗಳ ಕುಡಿಯುವ ನೀರಿನ ಯೋಜನೆ ಹಾಗೂ ಯುಟಿಲಿಟಿ ಚೇಂಬರ್‌ ಗಳ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು, ಇದರಿಂದ ಸ್ಥಳೀಯ ನಾಗರಿಕರಿಗೆ ತೊಂದರೆ ಗಳಾಗುತ್ತಿವೆ. ಚೇಂಬರ್‌ಗಳಿಗೆ ತೆಗೆದ ಹಳ್ಳಗಳಲ್ಲಿ ಮಣ್ಣು ಕುಸಿಯುತ್ತಿದ್ದು, ಇದರಿಂದ ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಕಾರು, ದ್ವಿಚಕ್ರ ವಾಹನಗಳು ಹಳ್ಳಗಳಲ್ಲಿ ಕುಸಿಯುತ್ತಿವೆ. ಈಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಮಗಾರಿ ಪ್ರಾರಂಭ ಮಾಡುವ ಮುನ್ನ ಕಾರ್ಯಾದೇಶ ಪತ್ರ ನೀಡಲಾಗುತ್ತದೆ. ಅದರಲ್ಲಿ ನಿರ್ದಿಷ್ಟ ಸಮಯ ನಿಗದಿ ಮಾಡಿರುತ್ತಾರೆ. ಆದರೆ ಇಲ್ಲಿ ಯಾವುದೇ ಕಾರ್ಯಾದೇಶ ಪತ್ರ ತೋರಿಸದೆ, ಕೆಲಸವೂ ಸಂಪೂರ್ಣವಾಗಿ ಮಾಡದೆ ಅರ್ಧಂಬರ್ದ ಮಾಡಿ ಬಿಡುತ್ತಿದ್ದಾರೆ. ಕಾನೂನು ಪ್ರಕಾರ ಯಾವುದೇ ಕಾಮಗಾರಿ ಮಾಡಿದ ನಂತರ ಅದನ್ನು ಯಥಾಸ್ಥಿತಿ ಮಾಡಬೇಕು ಎಂದು ಇದೆ. ಆದರೆ ಇಲ್ಲಿ ಮಾಡುತ್ತಿರುವ ಕಾಮಗಾರಿಗಳಿಂದ ನಿತ್ಯ ನರಕ ಅನುಭಸು ವಂತಾ ಗಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಇತ್ತೀಚೆಗೆ ಸಾರ್ವಜನಿಕರು ಪಾಲಿಕೆ ಸದಸ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಬಗ್ಗೆ ಸ್ಮಾರ್ಟ್‌ ಸಿಟಿ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಹಳ್ಳಮುಚ್ಚಲು ಮುಂದಾದರೆ ಸ್ಮಾರ್ಟ್‌ ಸಿಟಿಯವರು ನಿಮಗೂ ಇದಕ್ಕೂ ಏನು ಸಂಬಂಧ ಎಂದು ಗದುರಿಸುತ್ತಾರೆ. ಸಮಸ್ಯೆಗಳ ಬಗ್ಗೆ ಯಾರಿಗೆ ಕೇಳಬೇಕು ಎಂದು ಪ್ರಶ್ನಿಸಿದರು. ಸ್ಮಾರ್ಟ್‌ಸಿಟಿ ಅಧಿಕಾರಿಗಳು ಕಾಮಗಾರಿ ಪರಿಶೀಲಿಸುತ್ತಿಲ್ಲ. ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಗಳ ಪರಿಸ್ಥಿತಿ ಹೇಗಿದೆ ಎಂಬುದೂ ಗೊತ್ತಿಲ್ಲ. ಕಾಮಗಾರಿ ವೇಳೆ ಒಡೆಯುವ ಪೈಪು ಸರಿಪಡಿಸದೆ ಅದನ್ನು ರಬ್ಬರ್‌ಗಳಿಂದ ಮುಚ್ಚಿ ಬಿಟ್ಟುಬಿಡುತ್ತಾರೆ ಎಂದರು.

ಸ್ಮಾರ್ಟ್‌ಸಿಟಿ ಕಾಮಗಾರಿ ಮಾಡುವವರು ಗುಣಮಟ್ಟದಲ್ಲಿ ಪೂರ್ಣ ಮಾಡಬೇಕು. ಅದನ್ನು ಹೊರತುಪಡಿಸಿ ಕಾಲ ವ್ಯಯ ಮಾಡಬಾರದು. ಸಮಸ್ಯೆ ಉಂಟು ಮಾಡುತ್ತಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ