ಚೆಂಡು ಹೂ ಸಂಸ್ಕರಣೆ ಕಾರ್ಖಾನೆ ವಿರುದ್ಧ ಪ್ರತಿಭಟನೆ


Team Udayavani, Feb 6, 2019, 6:39 AM IST

chendu.jpg

ತಿಪಟೂರು: ವಿಷಮಿಶ್ರಿತ ರಾಸಾಯನಿಕ ನೀರಿನಿಂದ ಜನ ಜಾನುವಾರಗಳ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೂಡಲೇ ಚೆಂಡು ಹೂವಿನ ಕಾರ್ಖಾನೆ ಮುಚ್ಚಬೇಕೆಂದು ತಾಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕಾರ್ಖಾನೆಯ ಪರಿಸರ ವಿರೋಧಿ ಧೋರಣೆಯ ವಿರುದ್ಧ ಸಿಡಿದೆದ್ದ ರೈತರು ಮತ್ತು ಗಮಸ್ಥರು ಹಾಲ್ಕುರಿಕೆ ಮೂಲಕ ಕೊಳೆತ ಚೆಂಡು ಹೂವಿನ ತ್ಯಾಜ್ಯವನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮತ್ತು ಕಾರ್ಮಿಕರನ್ನು ಕೊಂಡೊ ಯ್ಯತ್ತಿದ್ದ ವಾಹನ ತಡೆದು ಗ್ರಾಮ ಪಂಚಾಯಿತಿ ಮುಂಭಾಗ ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಗ್ರಾಮಸ್ಥರು, ಎವಿಟಿ ಕಾರ್ಖಾನೆಯಿಂದ ದುರ್ವಾಸನೆ ಹೊರಹೊಮ್ಮುತ್ತಿದ್ದು, ಹಾಲ್ಕುರಿಕೆ, ಬಸವರಾಜಪುರ, ಮಾಯಗೊಂಡನ ಹಳ್ಳಿ, ಗೊಲ್ಲರಹಟ್ಟಿ ಸೇರಿದಂತೆ ಚಿಕ್ಕ ನಾಯಕನಹಳ್ಳಿ ತಾಲೂಕಿನ ಕೆಲವು ಹಳ್ಳಿ ಜನ ತತ್ತರಿಸಿದ್ದಾರೆ. ದುರ್ನಾತದಿಂದ ಗ್ರಾಮದಲ್ಲಿ ವಾಸ ಮಾಡಲಾಗದೇ ಜನರ ಉಸಿರುಗಟ್ಟಿಸುತ್ತಿದೆ. ಅನೇಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೆ, ಕಲುಷಿತ ನೀರು ಅಂತರ್ಜಲ ಹಾಳು ಮಾಡುತ್ತಿದೆ. ಸಮಸ್ಯೆಗಳ ವಿರುದ್ಧ ದೂರು ನೀಡಿದರೆ ಸ್ಥಳಕ್ಕೆ ಬರುವ ಅಧಿಕಾರಿಗಳು ನಂತರ ನಮಗೂ ಅದಕ್ಕೂ ಸಂಬಂಧವಿಲ್ಲವೆಂಬಂತೆ ನಡೆದುಕೊಳ್ಳುತ್ತಾರೆ ಎಂದು ದೂರಿದರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸಂಬಂಧಿತ ಇಲಾಖೆಗಳು ಕಾರ್ಖಾನೆಯೊಂದಿಗೆ ಶಾಮೀಲಾಗಿ ಮಾಲಿನ್ಯ ನಿಯಂತ್ರಣ ತಡೆಗಟ್ಟುವಲ್ಲಿ ವಿಫ‌ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಗ್ರಾಪಂ ಸದಸ್ಯ ಎಚ್.ವಿ.ನಾಗರಾಜು, ಮಳೆಗಾಲ ಬಂದರೆ ತ್ಯಾಜ್ಯದ ನೀರನ್ನು ರೈತರ ಜಮೀನುಗಳಿಗೆ ಹರಿಸಿ ಬೆಳೆ ನಷ್ಟ ಮಾಡುವ ಜೊತೆಗೆ ಭೂಮಿ ಫ‌ಲವತ್ತತೆ ಹಾಳುಮಾಡಿ ಭೂಮಿ ಬರಡು ಮಾಡುವ ಹುನ್ನಾರವು ನಡೆಯುತ್ತಿದೆ.

ವಾಸನೆಯಿಂದ ಜನರಲ್ಲಿ ತೀವ್ರ ತಲೆನೋವು, ವಾಕರಿಕೆ, ಉಸಿ ರಾಟದ ತೊಂದರೆ, ಕೆಮ್ಮು ಮುಂತಾದ ಮಾರಣಾಂತಿಕ ರೋಗಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಹೇಳಿದರು. ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌ ಹಾಗೂ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿ ಕಾರಿಗಳು ಆಗಮಿಸಿ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿ ಸಿದರು. ಮುಖಂಡರಾದ ನಾಗ ಭೂಷಣ, ಗುರುಮೂರ್ತಿ, ಹೋಟೆಲ್‌ ಮಲ್ಲಿಕಾರ್ಜುನ್‌, ಚಂದ್ರಶೇಖರ್‌, ಅಶ್ವತ್ಥನಾರಾಯಣ, ಪರಮೇಶ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.