ತೈಲಬೆಲೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ


Team Udayavani, Jun 23, 2020, 6:54 AM IST

tyla-pratibhatane

ತುಮಕೂರು: ನಿರಂತರವಾಗಿ ತೈಲಬೆಲೆ ಹೆಚ್ಚಳವನ್ನು ಖಂಡಿಸಿ ಸೋಮವಾರ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿ  ಮುಂದೆ ಸಮಾ ವೇಶಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.

ಹೋರಾಟ ಅನಿವಾರ್ಯ: ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಮಾತನಾಡಿ, ಕೋವಿಡ್‌ 19 ಸಂಕಷ್ಟದಲ್ಲಿ ಜನರು ಜೀವನ ನಡೆಸುವುದೇ ಕಷ್ಟವಾಗಿರುವಾಗ ಸರ್ಕಾರ ನಿರಂತರವಾಗಿ ತೈಲ ಬೆಲೆ ‌ ಹೆಚ್ಚಳ ಮಾಡುವ ಮೂಲಕ ಜನ  ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಕಷ್ಟಗಳಿಗೆ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಸಂದೇಶ ರವಾನಿಸಿ: ಮಾಜಿ ಶಾಸಕ ಡಾ.ಎಸ್‌. ರಫೀಕ್‌ ಅಹಮದ್‌ ಮಾತನಾಡಿ, ಕಳೆದ ಒಂದು ತಿಂಗಳಿಂದ ಕಚ್ಚಾ ತೈಲ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ಬ್ಯಾರಲ್‌ಗೆ 40 ಡಾಲರ್‌ ಇದೆ. ಆದರೆ ಡಿಸೇಲ್‌ ಮತ್ತು ಪೆಟ್ರೋಲ್‌ ಬೆಲೆ ಕಳೆದ 14 ದಿನಗಳಲ್ಲಿ 6-10 ರೂ.ಗಳಿಗೆ ಹೆಚ್ಚಳವಾಗಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಅವಕಾಶ ಕೇಳಿದರೂ ಸರ್ಕಾರಗಳು ಅನುಮತಿ ನೀಡದೇ ಪ್ರತಿರೋಧದ ಧ್ವನಿಗಳನ್ನು ಅಡಗಿಸುವ ಕೆಲಸ ಮಾಡುತ್ತಿವೆ. ನಮ್ಮ ಈ  ಹೋರಾಟದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒಂದು ಸಂದೇಶ ರವಾನೆಯಾಗಬೇಕಿದೆ ಎಂದರು.

ಜನರು ವಿರೋಧಿಸಬೇಕು: ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪ ಮಾತನಾಡಿ, 2012ರಲ್ಲಿ ಅಂದಿನ ಮನಮೋಹನ್‌ಸಿಂಗ್‌ ಸರಕಾರ ತೈಲ ಬೆಲೆಯನ್ನು 12 ಪೈಸೆಗಳಷ್ಟು ಹೆಚ್ಚಳ ಮಾಡಿದ್ದನ್ನು ಖಂಡಿಸಿ, ಅಂದಿನ ಗುಜರಾತ್‌  ಮುಖ್ಯಮಂತ್ರಿಯಾಗಿದ್ದ ಇಂದಿನ ಪ್ರಧಾನಿ ನರೇಂದ್ರಮೋದಿ 24 ಗಂಟೆಗಳ ಕಾಲ ಗುಜರಾತ್‌ ಬಂದ್‌ ನಡೆಸಿ, ಪ್ರಬಲವಾಗಿ ವಿರೋಧಿಸಿದ್ದರು.

ಕಳೆದ 14 ದಿನ ಗಳಲ್ಲಿ ತೈಲ ಬೆಲೆ ಶೇ. 10-12ರಷ್ಟು ಹೆಚ್ಚಳ ವಾದರೂ ಜನರು  ವಿರೋಧಿಸುತ್ತಿಸುತ್ತಿಲ್ಲ. ಕಳೆದ 2014ರಿಂದ ಇಲ್ಲಿಯವರೆಗೂ ತೈಲ ಬೆಲೆಗಳ ಮೇಲೆ ವಿಧಿಸುವ ಸೆಸ್‌ನಿಂದಲೇ 17.80 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಸಂಗ್ರಹಿಸಿದೆ. ಕಚ್ಚಾತೈಲದ ಬೆಲೆ ಕಡಿಮೆ ಯಾದರೂ ಅದರ ಲಾಭ ಜನ  ಸಾಮಾನ್ಯರಿಗೆ ದೊರೆಯುತ್ತಿಲ್ಲ. ಇದು ಜನ ಸಾಮಾನ್ಯರಿಗೆ ತಲುಪಬೇಕು ಎಂದು ಆಗ್ರಹಿಸಿದರು.

ಮುಂದಿನ ಪೀಳಿಗೆಗೆ ಉಳಿಗಾಲವಿಲ್ಲ:ಜಿಪಂ ಸದಸ್ಯ ಕೆಂಚಮಾರಯ್ಯ ಮಾತನಾಡಿ, ನಿರಂ ತರವಾಗಿ ತೈಲಬೆಲೆ ಹೆಚ್ಚಳವಾದರೂ ಜನ ಸಾಮಾನ್ಯರಿಗೆ ಅದು ತಿಳಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವ ಮೂಲಕ ಬಿಜೆಪಿ ಕಾರ್ಯಕರ್ತರು ಬಡವರಿಗೆ ಆಗುತ್ತಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದನ್ನು ದಿಟ್ಟವಾಗಿ ಎದುರಿಸದಿದ್ದರೆ ಬಡವರಿಗೆ ಉಳಿಗಾಲವಿಲ್ಲ.

ಕೇಂದ್ರದ ಅನ್ಯಾಯ ಜನಸಾಮಾನ್ಯರಿಗೆ ತಿಳಿಯಬೇಕೆಂದರೆ, ಅದರ ವೈಫ‌ಲ್ಯಗಳನ್ನು ಜನರ ಮುಂದೆ ಬಿಚ್ಚಿಡಬೇಕು ಎಂದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್‌.ಷಫಿ ಅಹಮದ್‌, ಮುಖಂಡರಾದ ಆರ್‌. ನಾರಾಯಣ್‌, ಡಿ.ಟಿ.ವೆಂಕಟೇಶ್‌, ನರಸೀ ಯಪ್ಪ, ಪಾಲಿಕೆ ಸದಸ್ಯರಾದ ನೈಯಾಜ್‌, ಮಹೇಶ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಗೀತಾರುದ್ರೇಶ್‌ ಮೊದಲಾದವರು ಪಾಲ್ಗೊಂಡಿದ್ದರು.

ಬೆಲೆ ಹೆಚ್ಚಳ ಸಮಂಜಸವಲ್ಲ: ನಗರ ಪಾಲಿಕೆ ಮೇಯರ್‌ ಫ‌ರೀದಾ ಬೇಗಂ ಮಾತನಾಡಿ, ದೇಶವೇ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಇರುವಂತಹ ಸಂದರ್ಭದಲ್ಲಿ ನಿರಂತರವಾಗಿ ತೈಲ ಬೆಲೆಗಳ ಹೆಚ್ಚಳ ಸಮಂಜಸವಲ್ಲ. ಇದನ್ನು  ಜನಸಾಮಾನ್ಯರಿಗೆ ತಿಳಿಸುವ ಮೂಲಕ ಅವರಿಗೆ ಆಗುತ್ತಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಡುವ ಮೂಲಕ ಅವರನ್ನು ಎಚ್ಚರಿಸುವ ಕೆಲಸ ಕಾಂಗ್ರೆಸ್‌ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮಾಡಬೇಕಿದೆ ಎಂದರು.

ಟಾಪ್ ನ್ಯೂಸ್

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

1

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದ ಭಟ್ರು ಟೀಮ್ : ಶೀಘ್ರದಲ್ಲೇ ಬಾಕಿ ಸುದ್ದಿ

ಯಾರು ಹೊಣೆ? ಆಟೋ ಬಾಡಿಗೆ 100 ರೂ., ತೆತ್ತ ದಂಡ 6000 ರೂ.: ಆಟೋ ಚಾಲಕನ ನತದೃಷ್ಟ ಕಥೆಯಿದು

ಯಾರು ಹೊಣೆ? ಆಟೋ ಬಾಡಿಗೆ 100 ರೂ., ತೆತ್ತ ದಂಡ 6000 ರೂ.: ಆಟೋ ಚಾಲಕನ ನತದೃಷ್ಟ ಕಥೆಯಿದು

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಐದು ಮಂದಿ ಆರೋಪಿಗಳ ಬಂಧನ

ಹಲ್ಲೆ: ನಾಳೆ ತುಮಕೂರು ಬಂದ್‌

thumakuru news

ಗರಡಿ ಮನೆ ಉಳಿವಿಗೆ ಬೇಕು ಮೂಲಸೌಕರ್ಯ

Untitled-2

45ರ ವ್ಯಕ್ತಿ, 25ರ ಯುವತಿ ನಡುವೆ ವಿವಾಹ; ಏನಿದು ವೈರಲ್ ಫೋಟೋ ಹಿಂದಿನ ಕಹಾನಿ

representative image

ಭಾರೀ ಮಳೆಗೆ ಅಪಾರ ಬೆಳೆ ನಷ್ಟ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

MUST WATCH

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

ಹೊಸ ಸೇರ್ಪಡೆ

Anarchy if the police stop duty

ಪೊಲೀಸರು ಕರ್ತವ್ಯ ನಿಲ್ಲಿಸಿದರೆ ಅರಾಜಕತೆ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

police14

ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡಿ

police14

ಪೊಲೀಸರು-ಸೈನಿಕರು ದೇಶದ ಕಣ್ಣುಗಳಿದ್ದಂತೆ

ತೆಪ್ಪೋತ್ಸವ, ದೇವಿಗೆ ತೀರ್ಥ ಸ್ನಾನ, udayavanipaper, kannadanews,

ತೆಪ್ಪೋತ್ಸವ ಬದಲು ದೇವಿಗೆ ತೀರ್ಥ ಸ್ನಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.