2 ತಿಂಗಳಿನಿಂದ ನಿರಂತರ ರೇಪ್: 7 ನೇ ತರಗತಿ ಬಾಲಕಿ ಗರ್ಭಿಣಿ
Team Udayavani, Jul 19, 2017, 10:50 AM IST
ತುಮಕೂರು: ಬಿಹಾರ ಮೂಲದ ಕಾರ್ಮಿಕನೊಬ್ಬ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳ ಮೇಲೆ 2 ತಿಂಗಳುಗಳ ಕಾಲ ನಿರಂತರ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಹೇಯ ಪ್ರಕರಣ ಬೆಳಕಿಗೆ ಬಂದಿದೆ.
7 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಬಿಹಾರ ಮೂಲದ ಗ್ರಾನೈಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ದಿನೇಶ್ ಪಾಸ್ವಾನ್(29)ಎಂಬಾತ ಅತ್ಯಾಚಾರ ಎಸಗಿದ್ದಾನೆ.
ಬಾಲಕಿಯ ದೇಹ ಸ್ಥಿತಿ ನೋಡಿ ಅನುಮಾನಗೊಂಡ ಪೋಷಕರು ಮಹಿಳಾ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕ್ಯಾತ್ಸಂದ್ರ ಪೊಲೀಸರು ದಿನೇಶ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.