28ರ ಬಂದ್‌ ಬೆಂಬಲಿಸಲು ಮನವಿ


Team Udayavani, Sep 26, 2020, 4:48 PM IST

28ರ ಬಂದ್‌ ಬೆಂಬಲಿಸಲು ಮನವಿ

ಮಧುಗಿರಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಇದೇ ಸೆ.28 ಸೋಮವಾರ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದು, ಹಲವಾರು ಸಂಘಟನೆಗಳು ರೈತರಿಗೆ ಬೆಂಬ ವ್ಯಕ್ತಪಡಿಸಿದೆ ಎಂದು ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಜೆ.ಸಿ. ಶಂಕರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾರ್ಪೋರೆಟ್‌ ಸಂಸ್ಥೆಗಳಿಗೆ ಅನುಕೂಲವಾಗುವ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದು, ಕಾರ್ಮಿಕರೂ ಸಹ ಬೀದಿಯಲ್ಲಿ ಬಿದ್ದಿದ್ದಾರೆ ಹಾಗೂ ವಿದ್ಯುತ್‌, ಎಪಿಎಂಸಿ, ಬೀಜ ಕಾಯ್ದೆ ತಿದ್ದುಪಡಿ ಹಾಗೂ ಭೂ ಸುಧಾರಣಾ ಕಾಯ್ದೆಯಿಂದ ರೈತರ ಮಾರಣ ಹೋಮ ನಡೆಸಲು ಹಾಗೂ ಕೃಷಿಯನ್ನು ಕಾರ್ಪೋರೆಟ್‌ ಸಂಸ್ಥೆಗೆ ಮಾರಾಟ ಮಾಡಲು ಹೊರಟಿದ್ದಾರೆ ಎಂದು ದೂರಿದರು.

ನೂತನ ವಿದ್ಯುತ್‌ ಕಾಯ್ದೆಯ ಪ್ರಕಾರ ರಾಜ್ಯದ ಸುಮಾರು 30 ಲಕ್ಷ ಕೃಷಿ ಪಂಪ್‌ಸೆಟ್‌ ಗಳು ಉಚಿತ ವಿದ್ಯುತ್‌ ವಿನಾಯಿತಿ ಕಳೆದುಕೊಳ್ಳಲಿವೆ. ಇದರಿಂದ ರೈತರು ಬೀದಿ ಬರಲಿದ್ದು, ಬೆಳೆಗೆ ನಿಗದಿತ ಮೌಲ್ಯವಿಲ್ಲದೆ ಅನ್ನದಾತ ಕೃಷಿಯನ್ನು ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡಿ ಅವರಿಗೆ ಗುಲಾಮರಾಗಬೇಕಾಗುತ್ತದೆ. ಇಂಥ ಪರಿಸ್ಥಿತಿಯು ಈ ಸರ್ಕಾರದ ನೂತನ ಕಾಯ್ದೆಗಳಿಂದ ಬರಲಿದ್ದು, ಸರ್ಕಾರದ ಈ ಎಲ್ಲ ನಿಯಮಗಳ ವಿರುದ್ಧ ರೈತರು ಸೆ.28 ರಂದು ಬೀದಿಗಿಳಿದು ಹೋರಾಟ ಮಾಡಿ ರಾಜ್ಯ ಬಂದ್‌ ಗೆ ಕರೆ ನೀಡಿದ್ದೇವೆ. ಅಂದು ಹಲವಾರು ಸಂಘ ಸಂಸ್ಥೆಗಳು ನಮ್ಮ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಸಾರ್ವಜನಿಕರು ಸಹ ರೈತರ ಈ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೊಡ್ಡಮಾಳಯ್ಯ, ಜಿಲ್ಲಾ ಮಹಿಳಾಧ್ಯಕ್ಷೆ ನಾಗರತ್ನಮ್ಮ, ತಾ. ಅಧ್ಯಕ್ಷ ರಾಜಶೇಖರ್‌, ತಾ. ಮಹಿಳಾಧ್ಯಕ್ಷೆ ಭಾಗ್ಯಮ್ಮ, ಜಿಲ್ಲಾ ಡಿಎಸ್‌ಎಸ್‌ ಸಂಚಾಲಕ ದೊಡ್ಡೇರಿ ಕಣಿಮಯ್ಯ, ಸಂಜೀವಯ್ಯ, ಮುಖಂಡರಾದ ನಾಗರಾಜು, ಚಿನ್ನಪ್ಪರೆಡ್ಡಿ, ಚಿಕ್ಕಣ್ಣ, ನಾಗಭೂಷಣ್‌, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಬೆಟ್ಟಪ್ಪ, ನರಸಿಂಹಮೂರ್ತಿ ಇದ್ದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.