4 ತಿಂಗಳಲ್ಲಿ ದಿಬ್ಬೂರಿನ ಚಿತ್ರಣ ಬದಲು

Team Udayavani, Dec 27, 2022, 4:42 PM IST

4 ತಿಂಗಳಲ್ಲಿ ದಿಬ್ಬೂರಿನ ಚಿತ್ರಣ ಬದಲು

ತುಮಕೂರು: ನಗರದ ಪ್ರಮುಖ ಪ್ರದೇಶ ಆಗಿರುವ ದಿಬ್ಬೂರಿನ ರಸ್ತೆಗಳ ಅಭಿವೃದ್ಧಿಗಾಗಿ ಬಹಳ ಬೇಡಿಕೆ ಇತ್ತು. ಮುಂದಿನ 3-4 ತಿಂಗಳಲ್ಲಿ ದಿಬ್ಬೂರಿನ ಚಿತ್ರಣ ಬದಲಾಗಲಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದರು.

ನಗರದ ದಿಬ್ಬೂರಿನಲ್ಲಿ 309 ಲಕ್ಷ ರೂ. ವೆಚ್ಚದಲ್ಲಿ 2.08 ಕಿ.ಮೀ. ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ದಿಬ್ಬೂರಿನ ಬಗ್ಗೆ ತೆಗಳಿಕೆಯ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಈಗ ಅದೆಲ್ಲ ಮುಗಿದ ಅಧ್ಯಾಯ. ಮುಂದಿನ 3-4 ತಿಂಗಳೊಳಗೆ ಈ ವಾರ್ಡ್‌ನಲ್ಲಿ ರಸ್ತೆ, ಚರಂಡಿ ಸೇರಿ ಅಗತ್ಯ ಸೌಕರ್ಯಗಳು ಜನತೆಗೆ ಸಿಗಲಿದ್ದು, ದಿಬ್ಬೂರಿನ ಚಿತ್ರಣವೇ ಬದಲಾಗುತ್ತದೆ ಎಂದು ಭರವಸೆ ನೀಡಿದರು.

ರಸ್ತೆ, ಚರಂಡಿ ಕಾಮಗಾರಿ: ಈ ಭಾಗದಲ್ಲಿ ಮಳೆ ಬಂದಾಗ ರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿತ್ತು. ದಿಬ್ಬೂರು ಸರ್ಕಲ್‌ನಿಂದ ಸಿರಾಗೇಟ್‌ವರೆಗೂ ಜನರ ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ಮನಗಂಡು ಸ್ಮಾರ್ಟ್‌ಸಿಟಿ ಯೋಜನೆ ಹಾಗೂ ಪಿಡಬ್ಲ್ಯೂಡಿ ಇಲಾಖೆಯಿಂದ ರಸ್ತೆ, ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ರಸ್ತೆ ನಿರ್ಮಾಣಕ್ಕೆ ಹಣ: ದಿಬ್ಬೂರು ಸರ್ಕಲ್‌ನಿಂದ ಹಳೇ ಚೆಕ್‌ಪೋಸ್ಟ್‌ ವರೆಗೂ ಸ್ಮಾರ್ಟ್‌ಸಿಟಿ ವತಿಯಿಂದ ರಸ್ತೆ ನಿರ್ಮಾಣಕ್ಕೆ ಹಣ ಕೊಡಲಾಗಿದೆ. ಹಾಗೆಯೇ, ಸರ್ಕಾರದಿಂದ ಶಾಸಕರಿಗೆ ನೀಡಿರುವ ಅನುದಾನದ ಹಣವನ್ನು ಎಲ್ಲೆಲ್ಲಿ ಸಮಸ್ಯೆ ಜಾಸ್ತಿ ಇದೆಯೋ ಅಲ್ಲಿಗೆ ನೀಡಲಾಗಿದೆ ಎಂದ ಅವರು, ಪಿಡ ಬ್ಲ್ಯೂಡಿ ಇಲಾಖೆಯಿಂದ ಗುಣಮಟ್ಟದ ರಸ್ತೆ ಮಾಡಲಾಗುತ್ತಿದೆ. ಮುಂದಿನ ಒಂದೂವರೆ ತಿಂಗಳೊಳಗಾಗಿ ಈ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದರು.

ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ: ಈಗಾಗಲೇ ಸ್ಮಾರ್ಟ್‌ಸಿಟಿ ಯೋಜನೆಯಿಂದ ಅಂಗನವಾಡಿ ಕೇಂದ್ರಗಳು, ಶಾಲೆಗಳ ನಿರ್ಮಾಣ ಸಹ ಮಾಡ ಲಾಗುತ್ತಿದೆ. ಹಾಗೆಯೇ ಇನ್ನೊಂದು ತಿಂಗಳಲ್ಲಿ ಈ ಭಾಗದಲ್ಲಿ ಸರ್ಕಾರದಿಂದ ನಮ್ಮ ಕ್ಲಿನಿಕ್‌ ಸಹ ತೆರೆಯಲಾಗುತ್ತದೆ. ಈ ನಮ್ಮ ಕ್ಲಿನಿಕ್‌ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ತೆರೆದಿರುತ್ತದೆ. ಹೊರ ರೋಗಿಗಳಿಗೆ ಚಿಕಿತ್ಸೆ ದೊರೆಯಲಿದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡವೂ ಕಡಿಮೆಯಾಗಲಿದೆ ಎಂದು ವಿವರಿಸಿದರು.

ನಮ್ಮ ಕ್ಲಿನಿಕ್‌ ತೆರೆಯುತ್ತೇವೆ: ತುಮಕೂರು ನಗರಕ್ಕೆ 7 ನಮ್ಮ ಕ್ಲಿನಿಕ್‌ಗಳು ದೊರೆತಿದ್ದು, ಈಗಾಗಲೇ ಮರಳೂರು, ಮೆಳೇಕೋಟೆಯಲ್ಲಿ ಸ್ಥಾಪಿಸಲಾಗಿದೆ. ಹಾಗೆಯೇ ಅಗತ್ಯ ಇರುವ ವಾರ್ಡ್‌ ಗಳಲ್ಲಿ ಈ ನಮ್ಮ ಕ್ಲಿನಿಕ್‌ ತೆರೆಯಲಾಗು ವುದು ಎಂದು ಅವರು ಹೇಳಿದರು. ಮುಖಂಡ ಮನೋಹರಗೌಡ ಮಾತ ನಾಡಿ, ನಮ್ಮ ವಾರ್ಡ್‌ನಲ್ಲಿ 4 ಅಶ್ವತ್ಥಕಟ್ಟೆ, 4 ಅಂಗನವಾಡಿ ಕೇಂದ್ರಗಳು, 6 ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್‌ಸಿಟಿ ವತಿಯಿಂದ ನಿರ್ಮಿಸಲಾಗಿದೆ. ಶಾಸಕರು ನಮ್ಮ ಒಂದೇ ವಾರ್ಡ್‌ಗೆ 3 ಕೋಟಿ ರೂ. ಹಣ ವನ್ನು ನೀಡಿದ್ದು, ರಸ್ತೆ, ಚರಂಡಿಗಳ ಅಭಿ ವೃದ್ಧಿಗೆ ಸಹಕರಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆ ಉಪ ಮೇಯರ್‌ ನರಸಿಂಹಮೂರ್ತಿ, ಪಾಲಿಕೆ ಸದಸ್ಯರಾದ ವೀಣಾ ಮನೋಹರಗೌಡ, ಜೆ. ಕುಮಾರ್‌, ಟೂಡಾ ಮಾಜಿ ಅಧ್ಯಕ್ಷರಾದ ಬಾವಿಕಟ್ಟೆ ನಾಗಣ್ಣ, ಈ ಭಾಗದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.