ಕುಣಿಗಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು: 6 ಮಂದಿ ಗಂಭೀರ
Team Udayavani, May 10, 2022, 9:56 AM IST
ಕುಣಿಗಲ್: ಕಾರು ಡಿವೈಡರ್ಗೆ ಢಿಕ್ಕಿ ಹೊಡೆದ ರಭಸಕ್ಕೆ, ಕಾರು ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಮೂವರು ಸ್ಥಳದಲ್ಲೇ ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ಬೇಗೂರು ಸಮೀಪ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
ರಾಮಯ್ಯ, ರಘು (38), ಹೆಬ್ಬಾಳ ಬಿ.ಎಲ್ ಸರ್ಕಲ್ ನ ವಿಜಯ್ (36), ಹಾಗೂ ಸಂತೋಷ ಮೃತಪಟ್ಟ ದುರ್ದೈವಿಗಳು.
ಕಾರು ಚಾಲಕ ಲೋಕೇಶ್ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ವಸಂತ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ವೈಯಕ್ತಿಕ ದ್ವೇಷಕ್ಕೆ ಪ್ರತಿಕಾರ ಯತ್ನ: ಐವರ ಸೆರೆ
ಘಟನೆ ವಿವರ: ನಾಲ್ಕು ಮಂದಿ ಸ್ನೇಹಿತರು ಹಾಸನ ಕಡೆಗೆ ತೆರಳುತ್ತಿರಬೇಕಾದರೆ, ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದು, ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್