ಬೈಪಾಸ್‌ ರಸ್ತೆ ಸುರಕ್ಷತೆಗಾಗಿ ರಸ್ತೆ ಪರಿಶೀಲನೆ

Team Udayavani, Mar 10, 2019, 7:47 AM IST

bypass.jpg

ಕೊರಟಗೆರೆ: ಕೊರಟಗೆರೆ ಬೈಪಾಸ್‌ ರಸ್ತೆ ಸುರಕ್ಷತೆ ಮತ್ತು ಅಪಘಾತ ತಡೆಗಟ್ಟುವ ಮುನ್ನಚ್ಚರಿಕೆ ನಾಮಫ‌ಲಕ ಹಾಗೂ ರಸ್ತೆ ಉಬ್ಬುಗಳ ಬಗ್ಗೆ ಕೆಶಿಪ್‌ ಮತ್ತು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೊರಟಗೆರೆ ಆರಕ್ಷಕ ವೃತ್ತ ನಿರೀಕ್ಷಕ ನದಾಫ್ ಕೆಶಿಪ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಹೊರವಲಯದ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯ ಬೈಪಾಸ್‌ ರಸ್ತೆಯ ಸುರಕ್ಷತೆ ಪೊಲೀಸ್‌ ಇಲಾಖೆ, ಪಿಡಬ್ಲ್ಯೂಡಿ ಮತ್ತು ಕೆಶಿಪ್‌ ಅಧಿಕಾರಿಗಳ ತಂಡ ಜಂಟಿಯಾಗಿ ಬೈಪಾಸ್‌ ರಸ್ತೆ ಪರಿಶೀಲಿಸಿದ ವೇಳೆ ಮಾತನಾಡಿದರು.

ವಾಹನ ಸವಾರರಿಗೆ ತೊಂದರೆ: ಬೈಪಾಸ್‌ ರಸ್ತೆಯ ಕಾಮಗಾರಿ ವಿಳಂಬದಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾಮಗಾರಿ ಅಪೂರ್ಣ ಆಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಕೆಶಿಪ್‌ ರಸ್ತೆಯ ಅಪಘಾತ ಸ್ಥಳಗಳನ್ನು ಮೂರು ಇಲಾಖೆಯ ಅಧಿಕಾರಿ ವರ್ಗ ಜಂಟಿಯಾಗಿ ಅಪಘಾತ ಸ್ಥಳಗಳನ್ನು ಗುರುತಿಸಿರುವ ವರದಿಯನ್ನು ಡಿಸಿಎಂ ಮತ್ತು ಜಿಲ್ಲಾಧಿಕಾರಿಗಳಿಗೆ ಪೊಲೀಸ್‌ ಇಲಾಖೆ ನೀಡಲಿದೆ ಎಂದು ಹೇಳಿದರು. 

ಮೇಲಧಿಕಾರಿಗಳಿಗೆ ಮಾಹಿತಿ: ಕೊರಟಗೆರೆ ಆರಕ್ಷಕ ಉಪನಿರೀಕ್ಷಕ ಮಂಜುನಾಥ ಮಾತನಾಡಿ, ಬೈಪಾಸ್‌ ರಸ್ತೆಯಲ್ಲಿ ರಸ್ತೆ ಸುರಕ್ಷತೆ ಇಲ್ಲದಿರುವ ಪರಿಣಾಮ ಈಗಾಗಲೇ ಸಾಕಷ್ಟು ಅಪಘಾತಗಳು ನಡೆದಿವೆ. ಪೊಲೀಸ್‌ ಇಲಾಖೆಯಿಂದ ಈಗಾಗಲೇ ಎರಡು ಬಾರಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರೂ ಪ್ರಯೋಜನವಾಗಿಲ್ಲ. ಇನ್ನೊಂದು ವಾರದಲ್ಲಿ ಬೈಪಾಸ್‌ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

ಇಲ್ಲದಿದ್ದರೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ ಅವರು, ಬೈಪಾಸ್‌ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ಹೈಮಾಸ್ಟ್‌ ದೀಪ, ರಸ್ತೆ ಉಬ್ಬುಗಳ ಕಾಮಗಾರಿ ವಿಳಂಬವಾಗಿದೆ. ಅಪಘಾತ ನಡೆಯುವ ಸ್ಥಳಗಳಲ್ಲಿ ಎಚ್ಚರಿಕೆ ನಾಮಫ‌ಲಕ ಮತ್ತು ರಸ್ತೆ ಲೈಟ್‌ಗಳ ವ್ಯವಸ್ಥೆ ಮಾಡಬೇಕು. ರಸ್ತೆ ಉಬ್ಬುಗಳ ಕಾಮಗಾರಿ ಪ್ರಾರಂಭವಾಗಿ ಹಲವು ದಿನಗಳಾದರೂ ಮುಕ್ತಾಯವಾಗಿಲ್ಲ. ರಸ್ತೆ ಸುರಕ್ಷಣೆ ಮತ್ತು ಅಪಘಾತ ತಡೆಯುವ ನಿಟ್ಟಿನಲ್ಲಿ ಕೆಶಿಪ್‌ ಅಧಿಕಾರಿಗಳ ತಂಡ ಪೊಲೀಸ್‌ ಇಲಾಖೆಗೆ ಸಲಹೆ ಪಾಲಿಸಿ ಅಪಘಾತ ತಡೆಯಲು ಸಹಕಾರ ನೀಡಬೇಕು ಎಂದು ಹೇಳಿದರು. 

ಕೊರಟಗೆರೆ ಪಟ್ಟಣದ ಬೈಪಾಸ್‌ ಮೂಲಕ ಹಾದುಹೋಗುವ ಥರಡಿ ಗ್ರಾಮ, ಜಂಪೇನಹಳ್ಳಿ ಕ್ರಾಸ್‌, ಡಿಗ್ರಿ ಕಾಲೇಜು, ಊರ್ಡಿಗೆರೆ ವೃತ್ತ, ಬೋಡಬಂಡೇನಹಳ್ಳಿ, ಮಲ್ಲೇಶಪುರ ಕ್ರಾಸ್‌, ಹೊಳವನಹಳ್ಳಿ ರಸ್ತೆ, ಸಿದ್ದೇಶ್ವರ ಕಲ್ಯಾಣ ಮಂಟಪ ಮತ್ತು ತುಂಬಾಡಿ ಕ್ರಾಸಿನಿಂದ ಸಿದ್ದರಬೆಟ್ಟಕ್ಕೆ ಹೋಗುವ ಮಾರ್ಗದ ಬಳಿ ಕೆಶಿಪ್‌ ಇಲಾಖೆ ರಾಜಣ್ಣ, ಪಿಡಬ್ಲ್ಯೂಡಿ ರಾಘವೇಂದ್ರ ಮತ್ತು ಪೊಲೀಸ್‌ ಇಲಾಖೆ ನದಾಫ್ ಮತ್ತು ಮಂಜುನಾಥ ಜಂಟಿಯಾಗಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.