Education ಪ್ರೋತ್ಸಾಹ ನೀಡಿದವರಿಗೆ ಪಾದಕ್ಕೆ ನಮಸ್ಕಾರ ಮಾಡ್ತೀನಿ: ಡಾ.ಜಿ.ಪರಮೇಶ್ವರ್

39 ಕೆರೆಗಳಿಗೆ ಎತ್ತಿನಹೊಳೆ ಯೋಜನೆ ನೀರು.. 32 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ

Team Udayavani, Oct 30, 2023, 10:13 PM IST

1-qeqewew

ಕೊರಟಗೆರೆ: ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ವ್ಯಕ್ತಿಯ ಪಾದಗಳಿಗೆ ನಾನೇ ನಮಸ್ಕಾರ ಮಾಡ್ತೀನಿ.. ವಿಶ್ವಮಟ್ಟದಲ್ಲಿ ಭಾರತ ದೇಶ ಗುರುತಿಸಿರುವುದಕ್ಕೆ ಪ್ರಮುಖ ಕಾರಣವೇ ಶಿಕ್ಷಣ ಕ್ಷೇತ್ರ. ಕೇಂದ್ರ ಮತ್ತು ರಾಜ್ಯ ಸರಕಾರ ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಆಧ್ಯತೆ ನೀಡುತ್ತೀವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ70 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾದ 3 ಪ್ರತ್ಯೇಕ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕ ಕ್ಷೇತ್ರಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಅಭಿವೃದ್ದಿ ಕಾರ್ಯಕ್ರಮ ಕೊಟ್ಟಿದೆ. ನಮ್ಮ ಸರಕಾರದ ಬಿಸಿಯೂಟ ಯೋಜನೆಯು ಇಡೀ ದೇಶಕ್ಕೆ ವಿಸ್ತರಣೆ ಆಗಿದೆ. ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕಾಗಿ ಬಿಸಿಯೂಟ, ಪುಸ್ತಕ, ಬಟ್ಟೆ, ಶೂ ಮತ್ತು ಸಾವಿರಾರು ಕೋಟಿ ವೆಚ್ಚದಲ್ಲಿ ಕೊಠಡಿಗಳು ಅಭಿವೃದ್ದಿ ಆಗುತ್ತೀವೆ. ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರಕಾರ ಕೆಲಸ ಮಾಡ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗೆ ಪ್ರಸ್ತುತ 36 ಸಾವಿರ ಕೋಟಿ ಅನುಧಾನ ಬಳಕೆಯಾಗಿದೆ. ಅದಕ್ಕಾಗಿ ನಿಮ್ಮ ಭಾಗದ ಮೂಲಸೌಲಭ್ಯದ ಕಾಮಗಾರಿಯು ನಿಧಾನ ಆಗ್ತಿದೆ. ತುಮಕೂರು ಜಿಲ್ಲೆಯ ಸರಕಾರಿ ಶಾಲೆಗಳ ಅಭಿವೃದ್ದಿಗೆ ೪೦೦ಕೋಟಿ ರೂ ಮೀಸಲು ಇಡಲಾಗಿದೆ. ತೋವಿನಕೆರೆ ಗ್ರಾಮದಲ್ಲಿ 32 ಕೋಟಿ ರೂ. ವೆಚ್ಚದ ಆಸ್ಪತ್ರೆಯ ಕಾಮಗಾರಿ ನಡೆಯುತ್ತಿದೆ. 9 ಮತ್ತು 10 ನೇ ತರಗತಿಗೆ ಜೂನ್‌ನಿಂದ ಇಂಗ್ಲೀಷ್ ಮಿಡಿಯಂ ಶಾಲೆ ಪ್ರಾರಂಭ ಆಗಲಿದೆ. ಜೂನಿಯರ್ ಕಾಲೇಜು ಪ್ರಾರಂಭಕ್ಕೂ ರೂಪುರೇಷೆ ಸಿದ್ದವಾಗಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್.ಕೆ, ಜಿಪಂ ಸಿಇಓ ಡಾ.ಪ್ರಭು.ಜಿ, ಪೊಲೀಸ್ ವರೀಷ್ಟಾಧಿಕಾರಿ ಅಶೋಕ್, ಕೊರಟಗೆರೆ ತಹಶೀಲ್ದಾರ್ ರಂಜಿತ್, ತಾಪಂ ಇಓ ಡಾ.ದೊಡ್ಡಸಿದ್ದಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್, ಅಶ್ವತ್ಥನಾರಾಯಣ್, ಮುಖಂಡರಾದ ಪ್ರಸನ್ನಕುಮಾರ್, ಎಂಎನ್‌ಜೆ ಮಂಜು ಸೇರಿದಂತೆ ಇತರರು ಇದ್ದರು.

39 ಕೆರೆಗಳಿಗೆ ಎತ್ತಿನಹೊಳೆ ನೀರು
ಬಯಲುಸೀಮೆ ಪ್ರದೇಶದ ರೈತರ ಕನಸಿನ ಕೂಸಾದ ಎತ್ತಿನಹೊಳೆ ಯೋಜನೆಯ ಕಾಮಗಾರಿ ಇನ್ನೆರಡು ವರ್ಷದಲ್ಲಿ ಪೂರ್ಣ ಆಗಲಿದೆ. ಕೊರಟಗೆರೆ ಕ್ಷೇತ್ರದ 39 ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸಲು ಈಗಾಗಲೇ ರೂಪುರೇಷು ಸಿದ್ದಗೊಂಡಿದೆ. ಎತ್ತಿನಹೊಳೆ ಯೋಜನೆಯಡಿ ಕೊರಟಗೆರೆ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದೇನೆ. ಕೊರಟಗೆರೆಯ ಇನ್ನೂಳಿದ ಕೆರೆಗಳಿಗೆ ನೀರು ಹರಿಸುವ ಚಿಂತನೆಯು ನಡೆಯುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಮಾಹಿತಿ ನೀಡಿದರು.

ಯಶಸ್ಸು ಕಂಡ ಜನ ಸಂಪರ್ಕ ಸಭೆ
ತೋವಿನಕೆರೆಯಲ್ಲಿ ಗ್ರಾಮದಲ್ಲಿ ಸೋಮವಾರ ನಡೆದ ಹೋಬಳಿಮಟ್ಟದ ಜನಸಂಪರ್ಕ ಸಭೆಯು ಯಶಸ್ವಿಯಾಗಿ ನಡೆಯಿತು. ತೋವಿನಕೆರೆ, ಕುರಂಕೋಟೆ, ಬುಕ್ಕಾಪಟ್ಟಣ ಮತ್ತು ಬೂದಗವಿ ಗ್ರಾಪಂ ನಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಸಮಸ್ಯೆಯ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು. ಹಲವಾರು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿ ಇನ್ನೂಳಿದ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಶಾಸಕ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು.

ಶಿಕ್ಷಣದಿಂದ ಮಾತ್ರ ಬಡತನ ನಿವಾರಣೆ
ವಿಶ್ವಕ್ಕೆ ಅತಿಹೆಚ್ಚು ಮಾನವ ಸಂಪನ್ಮೂಲ ಪೂರೈಕೆ ಮಾಡುವ ದೇಶ ನಮ್ಮ ಭಾರತ. ತೋವಿನಕೆರೆಯಲ್ಲಿ 70 ಲಕ್ಷ ರೂ. ವೆಚ್ಚದಲ್ಲಿ ಹೈಟೆಕ್ ಸರಕಾರಿ ಶಾಲೆಯ ಕೊಠಡಿ ನಿರ್ಮಾಣ ಆಗಿವೆ. ವಿದ್ಯೆ ಕಲಿಯುವ ಶಾಲೆಗಳು ದೇವಾಲಯವಿದ್ದಂತೆ. ಶಿಕ್ಷಣದಿಂದ ಮಾತ್ರ ಬಡತನ ನಿವಾರಣೆ ಮತ್ತು ದೇಶದ ಅಭಿವೃದ್ದಿ ಸಾಧ್ಯ ಎಂದು ಸಿದ್ದರಬೆಟ್ಟ ಶ್ರೀಮಠ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.