ನಗದು ರಹಿತ ವಹಿವಾಟಿಗೆ ಎಸ್‌ಬಿಐ ಭಿಮ್‌ ಆಧಾರ್‌

ಚಿಕ್ಕನಾಯಕನಹಳ್ಳಿ ಎಸ್‌ಬಿಐ ಬ್ಯಾಂಕ್‌ನಿಂದ ಫಿಂಗರ್‌ ಪ್ರಿಂಟ್ ಕ್ಯಾಶ್‌ಲೆಸ್‌ ಡಿವೈಸ್‌ ಉಚಿತ ವಿತರಣೆ

Team Udayavani, Jul 23, 2019, 2:03 PM IST

tk-tdy-1

ಫಿಂಗರ್‌ ಪ್ರಿಂಟ್ ಕ್ಯಾಶ್‌ಲೆಸ್‌ ಡಿವೈಸ್‌

ಚಿಕ್ಕನಾಯಕನಹಳ್ಳಿ: ಸಣ್ಣ ವಹಿವಾಟಿನ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಚಿಲ್ಲರೆ ಸಮಸ್ಯೆ ಯಾಗುವುದು ಸಾಮಾನ್ಯ. ಇದರಿಂದ ವ್ಯಾಪಾರಿಗಳಿಗೆ ನಷ್ಟ ಅಥವಾ ಗ್ರಾಹಕರು ನಂಬಿಕೆ ಕಳೆದುಕೊಳ್ಳುವ ಮುಜುಗರ. ಹೀಗಾಗಿ ಈ ಸಮಸ್ಯೆ ನಿವಾರಣೆಗೆ ಪಟ್ಟಣದ ಎಸ್‌ಬಿಐ ಬ್ಯಾಂಕ್‌ ಭಿಮ್‌ ಆಧಾರ್‌ ಎಸ್‌ಬಿಐ (ಪಿಬಿ 510) ಎಂಬ ಫಿಂಗರ್‌ ಪ್ರಿಂಟ್ ಕ್ಯಾಶ್‌ಲೆಸ್‌ ಡಿವೈಸ್‌ ಪರಿಚಯಿಸಿದೆ.

2000 ರೂ.ವರೆಗೆ ವಹಿವಾಟು: ಮನೆಯಲ್ಲಿ ಪರ್ಸ್‌, ಮೊಬೈಲ್ ಬಿಟ್ಟು ಬಂದಿದ್ದರೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಈ ಸಾಧನದಿಂದ ಗ್ರಾಹಕರು, ವ್ಯಾಪಾರಸ್ಥರು ಮೊಬೈಲ್, ಜೇಬಿನಲ್ಲಿ ಹಣ ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ಕನಿಷ್ಠ 1 ರೂ.ನಿಂದ 2000 ರೂ.ವರೆಗಿನ ವಹಿವಾಟು ಮಾಡಲು ಅವಕಾಶವಿದೆ. ಸಣ್ಣ ವ್ಯಾಪಾರಸ್ಥರು ಪ್ರತಿದಿನ 5 ಸಾವಿರ ರೂ. ಈ ಡಿವೈಸ್‌ ಮೂಲಕ ಖಾತೆಗೆ ಜಮಾ ಮಾಡಿಕೊಳ್ಳಬಹುದಾಗಿದೆ.

ಬ್ಯಾಂಕ್‌ನಲ್ಲಿ ಆಧಾರ್‌ ನಂಬರ್‌ ನಮೂದಿಸಿದ್ದರೆ ಮಾತ್ರ ವಹಿವಾಟು ನಡೆಸಲು ಸಾಧ್ಯ. ಟೀ ಅಂಗಡಿ , ಚಿಲ್ಲರೆ ಅಂಗಡಿ, ಬೀದಿಬದಿ ವ್ಯಾಪಾರಸ್ಥರು, ಆಟೋ, ಸ್ಟುಡಿಯೋಗಳು ಸೇರಿದಂತೆ ಸಣ್ಣ ಪ್ರಮಾಣದಲ್ಲಿ ವಹಿವಾಟು ನಡೆಸುವ ಅಂದರೆ ಪ್ರತಿದಿನ 5 ಸಾವಿರ ರೂ. ವಹಿವಾಟು ಮಾಡುವ ವ್ಯಾಪಾರಸ್ಥರು ಡಿವೈಸ್‌ನ ಅನುಕೂಲ ಪಡೆದುಕೊಳ್ಳಬಹುದಾಗಿದೆ. ಗ್ರಾಹಕರು ಜೇಬಿನಲ್ಲಿ ಹಣವಿಲ್ಲದಿದ್ದರೂ ಬೆರಳ ತುದಿ ಬಳಸಿ ವಸ್ತು ಕೊಳ್ಳಬಹುದಾಗಿದೆ.

ಡಿವೈಸ್‌ನ ಕಾರ್ಯ ಹೇಗೆ: ಡಿಜಿಟಲ್ ಇಂಡಿಯಾ ಕನಸು ನನಸಾಗುವ ನಿಟ್ಟಿನಲ್ಲಿ ಡಿವೈಸ್‌ ತಯಾರಿಸ ಲಾಗಿದೆ. ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ನಂಬರ್‌ ನೋಂದಣಿ ಮಾಡಿಸಿರಬೇಕು. ಬೆರಳ ತುದಿಯನ್ನು ಈ ಡಿವೈಸ್‌ ಮೇಲೆ ಇಟ್ಟರೆ ನಮ್ಮ ಆಧಾರ್‌ ಕಾರ್ಡ್‌ ಯಾವೆಲ್ಲ ಬ್ಯಾಂಕ್‌ಗಳಲ್ಲಿ ನೋಂದಣಿ ಆಗಿರುತ್ತದೋ ಆ ಬ್ಯಾಂಕ್‌ನ ಖಾತೆ ಮಾಹಿತಿ ತಿಳಿಸುತ್ತದೆ. ಯಾವ ಬ್ಯಾಂಕ್‌ ಖಾತೆಯಲ್ಲಿ ಹಣ ವಿರುತ್ತದೆಯೋ ಅದರಿಂದ ನಾವು ಖರೀದಿಸಿದ ವಸ್ತುವಿಗೆ ಹಣ ನೀಡಬಹುದಾಗಿದೆ.

ಡಿವೈಸ್‌ನ ಅನುಕೂಲಗಳು: ಈ ಉಪಕರಣದ ಮೂಲಕ 1 ರೂ. ಮೌಲ್ಯದ ವಸ್ತು ಕೊಳ್ಳಲು ಅವಕಾಶ ವಿದೆ. ರಾತ್ರಿ ವ್ಯಾಪಾರ ಮಾಡುವ ಆಂಗಡಿಗಳ ಮಾಲೀಕರು ಡಿವೈಸ್‌ ಬಳಸುವುದರಿಂದ ಕಳ್ಳರ ಕಾಟದಿಂದ ತಪ್ಪಿಸಿಕೊಳ್ಳಬಹುದು. ಚಿಲ್ಲರೆ ಹುಡುಕುವ ಸಮಸ್ಯೆ ಇರುವುದಿಲ್ಲ ಹಾಗೂ ಹಣ ಪಡೆಯುವ ಹಾಗೂ ವಸ್ತು ಖರೀದಿಸುವುದಕ್ಕೆ ದಾಖಲೆ ಸಿಗುತ್ತದೆ. ಕ್ಯಾಶ್‌ಲೆಸ್‌ ವಹಿವಾಟಿಗೆ ಈ ಡಿವೈಸ್‌ ಅನುಕೂಲಕರವಾಗಿದೆ.

● ಚೇತನ್‌

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.