ಸಿದ್ಧಗಂಗಾ ಶ್ರೀಗಳಿಗೆ ಕೃತಕ ಉಸಿರಾಟ ವ್ಯವಸ್ಥೆ 

Team Udayavani, Jan 14, 2019, 12:30 AM IST

ತುಮಕೂರು: ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಆಗಾಗ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ.

ಶ್ರೀಗಳ ಶ್ವಾಸಕೋಶದ ಎರಡೂ ಭಾಗದಲ್ಲೂ ನೀರು ತುಂಬಿಕೊಂಡಿದ್ದು ಹೊರತೆಗೆಯಲಾಗಿದೆ. ಸದ್ಯ ದ್ರವ ಆಹಾರ ಮುಂದುವರಿಸಲಾಗಿದೆ ಎಂದು ಶ್ರೀಗಳ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ ಆಪ್ತ ವೈದ್ಯ ಡಾ. ಪರಮೇಶ್‌ ಹೇಳಿದ್ದಾರೆ.

ಶ್ರೀಗಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಮಲಗಿದ್ದಲ್ಲಿಯೇ ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಕೈಕಾಲುಗಳಲ್ಲಿ ಚಲನವಲನ ಇದೆ. ಆದರೆ ಪೂಜೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕೆಲಕಾಲ ಕೃತಕ ಉಸಿರಾಟದ ಸಾಧನ ತೆರುವುಗೊಳಿಸಿ ಸಹಜ ಉಸಿರಾಟಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎರಡು ಗಂಟೆಗಳ ಕಾಲ ಸಹಜ ಉಸಿರಾಟದ ನಂತರ ಮತ್ತೆ ತೊಂದರೆ ಕಂಡು ಬಂದರೆ ಕೃತಕ ಉಸಿರಾಟ ಸಾಧನ ಅಳವಡಿಸುತ್ತಿದ್ದೇವೆ. 

ಶನಿವಾರ ಶ್ರೀಗಳ ದೇಹದಲ್ಲಿ ಪ್ರೋಟಿನ್‌ ಅಂಶ 3.1 ಮಿಲಿ ಗ್ರಾಂ ಇತ್ತು. ಭಾನುವಾರ 2.6 ಮಿಲಿ ಗ್ರಾಂಗೆ ಇಳಿಕೆಯಾಗಿದೆ ಎಂದು ಡಾ. ಪರಮೇಶ್‌ ಹೇಳಿದ್ದಾರೆ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಹೊಸದಿಲ್ಲಿ:'ಮಗನ ಸೋಲಿನ ಬಳಿಕ  ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ' ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...

  • ಬೆಂಗಳೂರು: 'ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಈ ರಾಜ್ಯದಲ್ಲಿ ಕಾನೂನಿನ ಆಡಳಿತದ ಬದಲು...

  • ಬೆಂಗಳೂರು/ರಾಮನಗರ: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳಿಂದ ಬಂಧಿತನಾಗಿರುವ ಜಮಾತ್‌ ಉಲ್ ಮುಜಾಹಿದ್ದೀನ್‌ ಬಾಂಗ್ಲಾದೇಶ್‌ (ಜೆಎಂಬಿ) ಉಗ್ರ ಹಬೀಬುರ್‌...

  • ರಾಯಚೂರು/ಬೆಂಗಳೂರು: ವೋಟ್ ಮಾತ್ರ ಮೋದಿಗೆ ಹಾಕ್ತೀರಿ, ಸಮಸ್ಯೆ ಮಾತ್ರ ನನ್ನತ್ರ ಹೇಳ್ತೀರಿ... ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಟ್ಟಿನಲ್ಲಿ ಹೇಳಿದ...

  • ಬೆಂಗಳೂರು: ಜಿಂದಾಲ್‌ಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಗೃಹ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಸಚಿವರಾದ...

ಹೊಸ ಸೇರ್ಪಡೆ