ಆರನೇ ಬಜೆಟ್: ಜನರ ನಿರೀಕ್ಷೆ ಹುಸಿ

Team Udayavani, Feb 2, 2019, 7:09 AM IST

arane.jpg

ಲೋಕಸಭಾ ಚುನಾವಣೆ ಸನಿಹದಲ್ಲಿ ಇರುವಾಗ ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ ಬಗ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅನ್ನು ವಿತ್ತ ಸಚಿವ ಪಿಯೂಷ್‌ ಗೋಯಲ್‌ ಮಂಡಿಸಿದ್ದು, ಈ ಬಜೆಟ್‌ನಲ್ಲಿ ಜಿಲ್ಲೆಗೆ, ರಾಜ್ಯಕ್ಕೆ ಯಾವುದೇ ಬಂಪರ್‌ ಕೊಡುಗೆ ನೀಡದಿದ್ದರೂ, ಸದಾ ಬರಗಾಲದಲ್ಲಿರುವ ಜಿಲ್ಲೆಯ ರೈತರಿಗೆ ಅನುಕೂಲವಾಗುವಂಥ ಹಲವು ಯೋಜನೆ ಪ್ರಕಟಿಸಿದ್ದಾರೆ.

ತುಮಕೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಆರನೇ ಬಜೆಟ್ ಅನ್ನು ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಶುಕ್ರವಾರ ಸಂಸತ್‌ ಭವನದಲ್ಲಿ ಮಂಡಿಸಿದ 2019ರ ಬಜೆಟ್‌ನಲ್ಲಿ ಕಲ್ಪತರು ನಾಡಿಗೆ ಬಂಪರ್‌ ಕೊಡುಗೆ ನೀಡುತ್ತಾರೆ ಎಂದು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ.

ಜಿಲ್ಲೆಯ ರೈತರ ಪಾಲಿಗೆ ತುಸು ಸಂತಸ ಉಂಟು ಮಾಡಿದ್ದರೂ, ಜಿಲ್ಲೆಯ ಅಭಿವೃದ್ಧಿಗಾಗಿ ನಿರೀಕ್ಷಿಸಿದಂತೆ ಬಜೆಟ್‌ನಲ್ಲಿ ಘೋಷಣೆ ಆಗದೆ ಇರುವುದು ನಿರಾಶೆ ಯಾಗಿದೆ. ರಾಜಧಾನಿ ಬೆಂಗಳೂರಿಗೆ ಉಪನಗರ ವಾಗಿ ಬೆಳವಣಿಗೆ ಯಾಗುತ್ತಿರುವ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಲ್ಲಿ ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಕಲ್ಪತರು ನಾಡಿಗೆ ಕೈಗಾರಿಕಾ ಕಾರಿಡಾರ್‌ ಮತ್ತು ಬೆಂಗಳೂರು-ಮುಂಬೈ ಇಂಡಸ್ಟ್ರಿಯಲ್‌ ಕಾರಿಡಾರ್‌ ಯೋಜನೆಗಳಿಗೆ ಹೆಚ್ಚಿನ ಅನುದಾನ ಘೋಷಣೆ ಮಾಡುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಅದು ಹುಸಿಯಾದಂತೆ ಕಾಣುತ್ತಿದೆ.

ಅಪಾರ ನಿರೀಕ್ಷೆ ಇತ್ತು: ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚು ಬೆಳವಣಿಗೆಗೆ ಪೂರಕವಾಗುವಂತೆ ವಿಶ್ವ ಮಟ್ಟದಲ್ಲಿ ತುಮಕೂರು ಬೆಳವಣಿಗೆಯಾಗು ವಂತೆ ಗುಡಿ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ ನೀಡುವಂಥ ಯೋಜನೆಗಳು ಚುನಾವಣೆಯ ಹೊಸ್ತಿಲಿನ ಈ ಬಜೆಟ್‌ನಲ್ಲಿ ಘೋಷಣೆ ಆಗುತ್ತದೆ ಎಂದು ಜಿಲ್ಲೆಯ ಜನರಲ್ಲಿ ಅಪಾರ ನಿರೀಕ್ಷೆ ಇತ್ತು. ಆದರೆ, ಬಜೆಟ್‌ನಲ್ಲಿ ರಾಜ್ಯದ ಯೋಜನೆಗಳು ಹಾಗೂ ಜಿಲ್ಲೆಯ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಆಗದೇ ಇರುವುದು ನಿರಾಸೆಯಾಗಿದೆ.

ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ರೈತರಿಗೆ ಅನುಕೂಲವಾಗುವಂತೆ 2 ಹೆಕ್ಟೇರ್‌ವರೆಗಿನ ಜಮೀನು ಹೊಂದಿರುವ ರೈತರ ಖಾತೆಗೆ ನೇರ ವಾಗಿ ಕೇಂದ್ರ ಸರ್ಕಾರವೇ 6000 ರೂ.ಹಣ ಭರಿಸುವ ಮಹತ್ವದ ಯೋಜನೆ, ಡಿ. 2018 ರಿಂದಲೇ ಜಾರಿಗೊಳಿಸುತ್ತಿದೆ. ರೈತರು ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಯೋಜನೆ ಜಾರಿ, ಸಕಾಲಕ್ಕೆ ಸಾಲ ಪಾವತಿಸುವವರಿಗೆ ಶೇ.2 ಬಡ್ಡಿ ರಿಯಾಯಿತಿ ನೀಡುವುದಾಗಿ ಘೋಷಿ ಸಿರುವುದು ರೈತರಿಗೆ ಅನುಕೂಲವಾಗುತ್ತದೆ ಎನ್ನುವ ಮಾತು ರೈತ ವಲಯದಿಂದ ಕೇಳಿ ಬರುತ್ತಿದೆ.

ಆದಾಯ ಮಿತಿ ಹೆಚ್ಚಳ: ಎಲ್ಲಾ ವರ್ಗದವರಿಗೂ ಆದಾಯ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿರುವುದು ಬಹುಜನರಿಗೆ ಅನೂಕೂಲವಾಗ ಲಿದೆ. ಗೃಹ ಸಾಲದ 2ಲಕ್ಷ, ಶೈಕ್ಷಣಿಕ ಸಾಲಕ್ಕೂ ತೆರಿಗೆ ವಿನಾಯಿತಿ. ಹಿರಿಯ ಕಾರ್ಮಿಕರಿಗೆ ಮಾಸಿಕ ರೂ 3000, ಗ್ರಾಚ್ಯುಯಿಟಿ 10 ಲಕ್ಷ ದಿಂದ 20 ಲಕ್ಷಕ್ಕೆ ಹೆಚ್ಚಳ. ಕೆಲಸದ ಸಮಯ ದಲ್ಲಿ ಕಾರ್ಮಿಕ ಮೃತಪಟ್ಟರೆ 6 ಲಕ್ಷ ರೂ., ಇಎಸ್‌ಐ ಮಿತಿ 15 ಸಾವಿರದಿಂದ 21 ಸಾವಿರಕ್ಕೆ ಹೆಚ್ಚಳ ವಾಗಿದ್ದು, ಸಮಾಜದ ಎಲ್ಲಾ ವರ್ಗ ದವರಿಗೆ ಖುಷಿತಂದಿದೆ.

ಸಣ್ಣ ಕೈಗಾರಿಕೆಗಳ ಒಂದು ಕೋಟಿ ಸಾಲದವರೆಗೆ ಶೇ.2 ಬಡ್ಡಿ ರಿಯಾಯಿತಿ. ಟಿಡಿಎಸ್‌ ಮಿತಿ 10 ಸಾವಿರದಿಂದ 40 ಸಾವಿರ ರೂ. ವರಿಗೆ ಹೆಚ್ಚಳ. ಕ್ಯಾಪಿಟೈಲ್‌ ಗೇಯಿನ್‌ ಮಿತಿ 2 ಕೋಟಿ ರೂ.ನಿಗದಿ. ಅಲೆಮಾರಿ ಸಮು ದಾಯದ ಅಭಿವೃದ್ಧಿ ನಿಗಮ, ಕಾಮಧೇನು ಆಯೋಗ, ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿರುವುದು ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಿಲ್ಲೆಯ ಜನ ಸ್ವಾಗತಿಸಿದ್ದಾರೆ.

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.