ಅಂಗನವಾಡಿಯಿಂದಲೇ ಆಂಗ್ಲ ಮಾಧ್ಯಮ ಆರಂಭಿಸಿ

ಶಿರಾ ತಾಲೂಕು ಕಚೇರಿ ಮುಂದೆ ಕಾರ್ಯಕರ್ತೆಯರ ಪ್ರತಿಭಟನೆ

Team Udayavani, Jul 8, 2019, 1:29 PM IST

ಶಿರಾದ ತಾಲ್ಲೂಕು ಕಛೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿಗಳಲ್ಲೆ ಎಲ್ಕೆಜಿ, ಯುಕೆಜಿ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಿದರು.

ಶಿರಾ: ರಾಜ್ಯ ಸರ್ಕಾರ ಪ್ರಾಥಮಿಕ ಶಿಕ್ಷಣದಲ್ಲಿ ಇಂಗ್ಲಿಷ್‌ ಮೀಡಿಯಂ ಯೋಜನೆ ಅಂಗನವಾಡಿಗಳ ಮೂಲಕವೇ ಕಾರ್ಯಗತಗೊಳಿಸಲಿ ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಕಾರ್ಯಕರ್ತೆ ಕಲಾವತಮ್ಮ ರಾಷ್ಟ್ರೀಯ ಶಿಶು ಅಭಿವೃದ್ಧಿ ಯೋಜನೆ ಕಳೆದ 40 ವರ್ಷದಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ಯೋಜನೆ ಅಡಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಕಲಿಸಲು ತಕ್ಕ ಮಟ್ಟಿನ ಜ್ಞಾನ ಹೊಂದಿದ್ದಾರೆ. ತರಬೇತಿ ನೀಡಿ, ಈಗ ನೀಡುತ್ತಿರುವ ವೇತನ ಮೊದಲಾದ ಸೌಲಭ್ಯ ಸ್ವಲ್ಪ ಹೆಚ್ಚಿಸುವ ಮೂಲಕ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯವಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಸಂಘದ ಸದಸ್ಯೆ ಸರಳಾದೇವಿ ಮಾತ ನಾಡಿ, ಎಲ್ಕೆಜಿಗೆ ಸೇರಿಸಲು ಮಗುವಿಗೆ 3 ವರ್ಷ 10 ತಿಂಗಳಾಗಬೇಕಿದ್ದು, ನಾವು 3 ವರ್ಷಕ್ಕೆ ಮಕ್ಕಳನ್ನು ಅಂಗನವಾಡಿಗೆ ಸೇರಿಸಿಕೊಳ್ಳುತ್ತೇವೆ. ಅಂಗನವಾಡಿಗಳ ಬಗ್ಗೆ ಕೀಳರಿಮೆ ಹೋಗಲಾಡಿಸಲು, ಅವುಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ಅಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು. ವಿವಿಧ ಬೇಡಿಕೆ ಈಡೇರಿಸುವಂತೆ ಚುನಾವಣಾ ಶಿರಸ್ತೆದಾರ್‌ ಲಕ್ಷಿ ್ಮೕಕಾಂತ್‌ಗೆ ಮನವಿ ಸಲ್ಲಿಸಲಾಯಿತು. ಎಐಟಿಯುಸಿಯ ವಿವಿಧ ಪದಾಧಿಕಾರಿಗಳು, ನೂರಾರು ಕಾರ್ಯಕರ್ತೆಯರು, ಸಹಾಯಕಿ ಯರು ಇತರರಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ