ತುಮಕೂರು: ಹೆದ್ದಾರಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಅಡ್ಡಗಟ್ಟಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
Team Udayavani, Jan 9, 2021, 3:20 PM IST
ಕೊರಟಗೆರೆ (ತುಮಕೂರು): ಕಡ್ಡಾಯ ನಿಲುಗಡೆ ಸ್ಥಳದಲ್ಲಿ ಬಸ್ ನಿಲ್ಲಿಸದೇ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಚಾಲಕನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಬೆಳಿಗ್ಗೆ ಜರುಗಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಐ.ಕೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ಸಚಿವ ಸುರೇಶ್ ಕುಮಾರ್ ಅವರು ಬೆಂಗಳೂರಿನಿಂದ ದಾಬಸ್ ಪೇಟೆ ಹಾಗೂ ಕೊರಟಗೆರೆ ಮಾರ್ಗವಾಗಿ ಮಧುಗಿರಿಗೆ ತೆರಳುತ್ತಿದ್ದರು. ಮಧುಗಿರಿಯಲ್ಲಿ ದೂರ ತರಂಗ ಶಿಕ್ಷಣ ಅಭಿಯಾನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಇದನ್ನೂ ಓದಿ:ಡಿಸಿಎಂ ಲಕ್ಷ್ಮಣ ಸವದಿ ಕಾರಿಗೆ ಡೀಸೆಲ್: ಸಿಬ್ಬಂದಿಗೆ ಶೋಕಾಸ್ ನೋಟಿಸ್
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ತೆರಳಲು ಅನುಕೂಲ ಆಗುವಂತೆ ಸಾರಿಗೆ ಸಚಿವರ ಜತೆ ಚರ್ಚಿಸಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೀದರ್ ನ ಏಳು ಜನರ ದುರ್ಮರಣ
ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ನಾಯಕರ ಭೇಟಿಯಾದ ಜೆಡಿಎಸ್ ನ ಕುಪೇಂದ್ರ ರೆಡ್ಡಿ
ದಲಿತ ಸಿಎಂ ವಿಚಾರ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಅವಕಾಶವಿದೆ ಎಂದ ಪರಮೇಶ್ವರ್
ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಜಿ.ಟಿ ದೇವೇಗೌಡ