ಮೇವು, ನೀರು ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಾ.ಶಾಲಿನಿ ರಜನೀಶ್‌ ಅಧಿಕಾರಿಗಳಿಗೆ ಸೂಚನೆ • ಜನರ ಸಮಸ್ಯೆಗೆ ಸ್ಪಂದಿಸಿ

Team Udayavani, May 1, 2019, 3:19 PM IST

tumkur-tdy-1..

ತುಮಕೂರು: ಜಿಲ್ಲೆಯ 10 ತಾಲೂಕುಗಳು ಬರಪೀಡಿತವಾಗಿರುವುದರಿಂದ ಜನ-ಜಾನುವಾರು ಗಳಿಗೆ ಕುಡಿಯುವ ನೀರು ಮೇವಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಯೋಜನೆ ಮತ್ತು ಸಾಂಖ್ಯೀಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತುಮಕೂರು ಜಿಲ್ಲೆಯಲ್ಲಿ ಬರ ಪರಿಹಾರ ಹಾಗೂ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಬರವಿರುವು ದರಿಂದ ಕುಡಿಯುವ ನೀರಿನ ಸಮಸ್ಯೆ ಇರುತ್ತದೆ. ಎಲ್ಲಿ ಸಮಸ್ಯೆ ಇದೆಯೋ ಅಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಮಾಡಬೇಕು. ಅಲ್ಲದೇ ಜನರ ಬಳಿಗೆ ಧಾವಿಸಿ ಅವರ ಸಮಸ್ಯೆಗಳನ್ನು ಆಲಿಸಿ ಅವರ ಸಮಸ್ಯೆಗೆ ಸ್ಪಂದಿಸಬೇಕು. ಜಾನುವಾರುಗಳಿಗೂ ನೀರು ಮತ್ತು ಮೇವು ಕೊರತೆಯಾಗದಂತೆ ನೋಡಿ ಕೊಳ್ಳಿ ಎಂದು ತಿಳಿಸಿದರು.

12 ಮಿ.ಮೀ. ಕೊರತೆ: ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಮಾತನಾಡಿ, ಡಿ.2018ರ ಅಂತ್ಯಕ್ಕೆ ವಾಡಿಕೆ ಮಳೆ 697 ಮಿ.ಮೀ. ಆಗಬೇಕಾಗಿತ್ತು. ಆದರೆ, ವಾಸ್ತ ವಿಕವಾಗಿ 617 ಮಿ.ಮೀ. ಮಳೆಯಾಗಿ 12 ಮಿ.ಮೀ. ಕೊರತೆಯಾಗಿದೆ. ಜಿಲ್ಲೆಯಲ್ಲಿ 10 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಧುಗಿರಿ ತಾಲೂಕಿನ ಕಸಬಾ, ಐಡಿಹಳ್ಳಿ, ಬಡವನಹಳ್ಳಿ, ಕೊಡಿಗೇನಹಳ್ಳಿ, ಮಿಡಿಗೇಶಿ, ಪುರವರ, ಕೊರಟಗೆರೆ ತಾಲೂಕಿನ ಕಸಬಾ, ಕ್ಯಾಮೇನಹಳ್ಳಿ, ತೋವಿನಕೆರೆ, ಪಾವಗಡ ತಾಲೂಕಿನ ಸಿಕೆ ಪುರ, ನಾಗಲಮಡಿಕೆ, ವೈ.ಎನ್‌.ಹೊಸಕೋಟೆ, ಶಿರಾ ತಾಲೂಕಿನ ಚಿಕ್ಕನಹಳ್ಳಿ, ಪಟ್ಟನಾಯಕನಹಳ್ಳಿ, ತಿಪಟೂರು ತಾಲೂಕಿನ ಬಾಗವಾಳೂ ಹಾಗೂ ಚಿಕ್ಕನಾಯಕನಹಳ್ಳಿಯ ಕಸಬಾ ದಲ್ಲಿ 16 ಮೇವು ಬ್ಯಾಂಕ್‌ಗಳು ಕಾರ್ಯ ನಿರ್ವ ಹಿಸುತ್ತಿವೆ. ಮೇವು ವಿತರಿಸಲು ಮೇವು ವಿತರಣೆ ಕಾರ್ಡು ರೈತರಿಗೆ ವಿತರಿಸಿದ್ದು, ಮೇವು ವಿತರಣೆಗೆ ಜಿಲ್ಲೆಯಲ್ಲಿ ಸಹಕಾರಿಯಾಗಿವೆ. ಮೇವನ್ನು ಸಣ್ಣಸಣ್ಣಗೆ ಕತ್ತರಿಸಿ ನೀಡುವಂತೆ ಜನರಿಂದ ಬೇಡಿಕೆ ಇದೆ. ಈ ಬಗ್ಗೆ ಕ್ರಮವಹಿಸುವುದಾಗಿ ತಿಳಿಸಿದರು.

ಹಸಿರು ಮೇವು ಉತ್ಪಾದನೆ: ಜಿಲ್ಲೆಯಲ್ಲಿ 70.8185 ಜಾನುವಾರುಗಳು ಇದ್ದು ರೈತರ ದಾಸ್ತಾನಿನಲ್ಲಿ 28,1482 ಟನ್‌ ಒಣ ಮೇವು ಲಭ್ಯವಿದ್ದು, 11 ವಾರಗಳಿಗೆ ಸಾಕಾಗುತ್ತದೆ. ಮೇವು ಕಿರುಪೊಟ್ಟಣ ಗಳನ್ನು ರೈತರಿಗೆ ವಿತರಿಸಿದ್ದು, 5,99,117 ಟನ್‌ ಹಸಿರು ಮೇವು ಉತ್ಪಾದನೆಯಾಗುವುದೆಂದು ಅಂದಾಜಿಸ ಲಾಗಿದೆ. ಜಿಲ್ಲೆಯಲ್ಲಿ 128 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಅಲ್ಲದೇ ಕೊಳವೆ ಬಾವಿ ಬತ್ತಿ ಹೋಗಿರುವ ಕಡೆ ಖಾಸಗಿ ಬೋರ್‌ವೆಲ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ನೀರು ಒದಗಿಸಲು ಕೊಳವೆ ಬಾವಿ ಮಾಲೀಕರನ್ನು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇಂಜಿನಿಯರ್‌ಗಳು ಮನವೊಲಿ ಸಿದ್ದಾರೆ ಎಂದರು. ಜಿಲ್ಲೆಯಲ್ಲಿ ಇನ್‌ಪುಟ್ ಸಬ್ಸಿಡಿಗಾಗಿ 1.70ಲಕ್ಷ ರೈತರ ಭಾಗಶಃ ಡೇಟಾಎಂಟ್ರಿ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣ ಗೊಳಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಮಾತ ನಾಡಿದ ಜಿಲ್ಲಾ ಪಂಚಾಯತ್‌ ಸಿಇಒ ಶುಭಾ ಕಲ್ಯಾಣ್‌ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಆಗಿರುವ ಪ್ರಗತಿಯ ಬಗ್ಗೆ ವಿವರಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.