ತಾಂತ್ರಿಕ ಬೆಳವಣಿಗೆ-ಕೌಶಲ್ಯ ಅಭಿವೃದ್ಧಿಗೆ ‘ಕ್ಲೌಡ್‌ ಹಬ್‌

ಸಾಫ್ಟ್ವೇರ್‌ನಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲ ಪಠ್ಯದ ಜೊತೆಗೆ ಹೊಸ ಸಂಶೋಧನೆಗೆ ಉಪಯೋಗ: ತ್ರಿವಿಕ್ರಂ

Team Udayavani, May 4, 2019, 3:45 PM IST

tumkur-tdy-3..

ತಿಪಟೂರಿನ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ಲಾಟಿಫೈ ಸೆಲ್ಯೂಷನ್‌ ಕಂಪನಿ ಸಂಸ್ಥಾಪಕರಾದ ವಿ.ತ್ರಿವಿಕ್ರಂ ರಾವ್‌ ಮಾತನಾಡಿದರು.

ತಿಪಟೂರು: ವಿದ್ಯಾರ್ಥಿಗಳ ತಾಂತ್ರಿಕ ಬೆಳವಣಿಗೆ ಹಾಗೂ ಕೌಶಲ್ಯ ಅಭಿವೃದ್ಧಿಗಾಗಿ ಮೈಕ್ರೋಸಾಫ್ಟ್ ಪ್ಲಾಟಿಫೈ ಸೆಲ್ಯೂಷನ್‌ ಕಂಪನಿ ‘ಕ್ಲೌಡ್‌ ಹಬ್‌’ ಎಂಬ ಹೊಸ ಆ್ಯಪ್‌ ಹೊರತರಲಾಗಿದ್ದು ಇದರ ಪ್ರಯೋ ಜನ ಪಡೆದು ಹೊಸ ಹೊಸ ಸಂಶೋಧನೆಗಳತ್ತ ಚಿಂತನೆ ನಡೆಸಬೇಕೆಂದು ಪ್ಲಾಟಿಫೈ ಸೆಲ್ಯೂಷನ್‌ ಕಂಪನಿ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿ.ತ್ರಿವಿಕ್ರಂ ರಾವ್‌ ತಿಳಿಸಿದರು.

ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲ ಯದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅನುಕೂಲ:ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗುತ್ತಿರುವ ಇಂತಹ ಸಂದರ್ಭದಲ್ಲಿ ಹೊಸ ಹೊಸ ತಂತ್ರಜ್ಞಾನದ ಅವಶ್ಯಕತೆ ಬಹಳಷ್ಟಿದೆ. ನಮ್ಮ ಕ್ಲೌಡ್‌ ಹಬ್‌ ಆ್ಯಪ್‌ನಲ್ಲಿ ಎಂಜಿನಿಯರಿಂಗ್‌, ಎಲೆಕ್ಟ್ರಾನಿಕ್ಸ್‌, ಬಿಎ, ಬಿಕಾಂ, ಡಿಪ್ಲೋಮಾ, ಬಿಬಿಎಂ, ಬಿಎಸ್ಸಿ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂ ಲವಾಗುವಂತೆ ಸಾಫ್ಟ್ವೇರ್‌ ಅಳವಡಿಸಲಾಗಿದೆ ಎಂದು ತಿಳಿಸಿದರು.

ಸೌಲಭ್ಯ ಪಡೆದುಕೊಳ್ಳಿ: ನಮ್ಮ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಲಾಗಿನ್‌ ಮಾಡಿಕೊಂಡು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಇಡೀ ಇಂಡಿಯಾದಲ್ಲಿಯೇ ನಮ್ಮ ಆ್ಯಪ್‌ ಕೆಲಸ ನಿರ್ವಹಿ ಸುತ್ತಿದ್ದು, ಕರ್ನಾಟಕದಲ್ಲಿ ಮೊದಲು ತಿಪಟೂರಿನ ಕೆಐಟಿ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಮತ್ತು ಮೆಷಿನ್‌ ಲರ್ನಿಂಗ್‌ ಲ್ಯಾಬ್‌ಗಳನ್ನು ನಿರ್ಮಿಸಲಾಗುತ್ತಿದೆ. ಈ ಕಾಲೇಜಿನ ವಿದ್ಯಾರ್ಥಿ ಗಳಲ್ಲದೆ ಸುತ್ತಮುತ್ತಲ ಗ್ರಾಮೀಣ ಹಾಗೂ ಇತರ ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು ಸೌಲಭ್ಯ ಪಡೆದುಕೊಳ್ಳಬಹುದು ಎಂದು ಹೇಳಿದರು.

ಪಠ್ಯದ ಜೊತೆಗೆ ಹೊಸ ಹೊಸ ಸಂಶೋಧನೆಗಳಿಗೆ ನಮ್ಮ ಆ್ಯಪ್‌ ಉಪಯೋಗವಾಗಲಿದೆ. ಈಗಾಗಲೇ 1ಲಕ್ಷ ವಿದ್ಯಾರ್ಥಿಗಳು ಲಾಗಿನ್‌ಆಗಿದ್ದು, ಕಲ್ಕತ್ತಾ, ಮುಂಬೈ ಹೀಗೆ ವಿವಿಧ ಕಡೆ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಲಾಗಿನ್‌ ಮಾಡಿಕೊಂಡು ಎಲ್ಲಿ ಬೇಕಾದರೂ ಲ್ಯಾಬ್‌ಗಳ ಬಳಕೆ ಮಾಡಿಕೊಂಡು ಸಂಶೋಧನೆ ಮಾಡಬಹುದು. ಅಲ್ಲದೆ ಚಾಟ್ಬಾಟ್ ಎಂಬ ಹೊಸ ಆ್ಯಪ್‌ ತೆರೆದು ಅದಕ್ಕೆ ಗಾರ್ಗಿ ಎಂಬ ಹೆಸರಿಡಲಾಗಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾ ಸಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಇಲ್ಲಿ ಉತ್ತರ ಸಿಗಲಿದೆ. 1ಲಕ್ಷ ವಿದ್ಯಾರ್ಥಿಗಳು ಇದರಲ್ಲಿ ಲಾಗಿನ್‌ ಮಾಡಿಕೊಂಡಿದ್ದಾರೆ. ಹೀಗಾಗಿ ನಮ್ಮ ಪ್ಲಾಟಿಫೈ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಆ್ಯಪ್‌ ತೆರೆದಿದ್ದು ಪ್ರಯೋಜನ ಪಡೆದುಕೊಳ್ಳಬೇಕೆಂದರು.

ಎಲ್ಲಾ ಕ್ಷೇತ್ರಗಳ ಮಾಹಿತಿಯೂ ಲಭ್ಯ: ಕೆಐಟಿ ಪ್ರಾಂಶುಪಾಲ ಡಾ.ನಂದೀಶಯ್ಯ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ತಾಂತ್ರಿಕತೆ ಕೌಶಲ್ಯ ಮುಖ್ಯವಾಗಿ ದ್ದು ಉದ್ಯೋಗಾವಕಾಶಕ್ಕೆ ದಾರಿದೀಪವಾಗಲಿದೆ. ಅದಕ್ಕಾಗಿಯೇ ನಮ್ಮ ಸಂಸ್ಥೆ ಕೆಐಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹಾಗೂ ಪ್ರಾಧ್ಯಾಪಕರಿಗಾಗಿ ಟೆಕ್ನಿಕಲ್ ಲ್ಯಾಬ್‌ಗಳನ್ನು ನಿರ್ಮಿಸಲಾಗುತ್ತಿದೆ. ಎಂಜಿನಿಯ ರಿಂಗ್‌ ವಿದ್ಯಾರ್ಥಿಗಳಲ್ಲದೆ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೂ ಅತ್ಯವಶ್ಯಕ. ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಲಾಗಿನ್‌ ಆಗಿ ಅಭಿರುಚಿಗೆ ತಕ್ಕಂತೆ ಸಂಶೋಧನೆ ಮಾಡಲು ಟಾಲ್ಗಳು ಸಿಗಲಿದೆ. ಅಲ್ಲದೆ ಇದು ಶಿಕ್ಷಣ ಕ್ಷೇತ್ರಕ್ಕೆ ಸೀಮಿತವಾಗದೆ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದುಕೊಳ್ಳಬಹುದೆಂದರು.

ಡೆವಲಪ್‌ಮೆಂಟ್ ಮೈಕ್ರೋಸಾಫ್ಟ್ನ ನಿರ್ದೇ ಶಕ ಅಭಿಮ್‌ ಎ.ರಂಗನಾಥ್‌, ಕೆವಿಎಸ್‌ ಉಪಾಧ್ಯಕ್ಷ ಎಸ್‌.ಎಸ್‌.ನಟರಾಜು, ಖಜಾಂಚಿ ಟಿ.ಎಸ್‌.ಶಿವ ಪ್ರಸಾದ್‌, ಕಾರ್ಯದರ್ಶಿಗಳಾದ ಪ್ರೊ.ರಾಜಕು ಮಾರ್‌, ಕೆ.ಪಿ. ರುದ್ರಮುನಿಸ್ವಾಮಿ, ಟಿ.ಯು.ಜಗದೀಶಮೂರ್ತಿ, ಸದಸ್ಯರಾದ ಬಾಗೇಪಲ್ಲಿ ನಟರಾಜು, ಸುಮನ್‌, ಸ್ವರ್ಣಗೌರಿ ಇದ್ದರು.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

3-koratagere

Koratagere: ಅಮರ ಪ್ರೀತಿಗೆ ಯುವತಿ ಸಾವು; ಶವ ಪತ್ತೆ

police

Kunigal;ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ಏಳು ಮಂದಿ ಬಂಧನ

PDOಗಳಿಗೆ ಒಂದೇ ದಿನ ಸೇವೆ ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸಲು ಬಿ.ಸುರೇಶ್ ಆಗ್ರಹ

PDOಗಳಿಗೆ ಒಂದೇ ದಿನ ಸೇವೆ ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸಲು ಬಿ.ಸುರೇಶ್ ಆಗ್ರಹ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.