Udayavni Special

ಸಿದ್ಧಗಂಗೆಯಲ್ಲಿ ನಡೆದಾಡುವ ದೇವರ ಸ್ಮರಣೆ


Team Udayavani, Feb 1, 2019, 7:04 AM IST

sidda.jpg

ಆಧುನಿಕ ಬಸವಣ್ಣನವರ ಕಾಯಕ, ದಾಸೋಹವನ್ನು ಇಡೀ ವಿಶ್ವಕ್ಕೆ ಸಾರಿರುವ ಭಕ್ತರೆಲ್ಲರ ಪಾಲಿನ ನಡೆದಾಡುವ ದೇವರಾಗಿ ಪವಾಡ ಸೃಷ್ಟಿಸಿರುವ ಕರ್ನಾಟಕ ರತ್ನ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾ ಸ್ವಾಮೀಜಿಯವರ ಪುಣ್ಯ ಸ್ಮರಣೆಗೆ ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಭಾಗವಹಿಸಿ, ಗುರುವಿಗೆ ಭಕ್ತಿನಮನ ಸಲ್ಲಿಸಿದರೆ, ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮಿ ಅವರು ಭಕ್ತಿ ಭಾವದಿಂದ ಶ್ರೀಗಳ ಗದ್ದುಗೆ ಪೂಜೆ ನೆರೆವೇರಿಸಿ, ನಂತರ ಶ್ರೀಗಳ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಇಟ್ಟು ಮಾಡಿದ ಮೆರವಣಿಗೆ ಶ್ರೀ ಮಠದಲ್ಲಿ ಇತಿಹಾಸ ಸೃಷ್ಟಿಸಿತು.

ತುಮಕೂರು: ಸಿದ್ಧಗಂಗೆಯ ಸಿದ್ಧಿ ಪುರುಷ ನಡೆದಾಡುವ ದೇವರ 11ನೇ ದಿನದ ಪುಣ್ಯ ಸ್ಮರಣೆಯಲ್ಲಿ ಭಕ್ತಿ ಸಂಗಮ ಮೇಳೈಸಿತು. ನಾಡಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತ ಸಮೂಹ ಶ್ರೀಗಳ ಪುಣ್ಯ ಸ್ಮರಣೆಗೆ ಸೇರಿದ್ದ ಜನಸ್ತೋಮ ಕಂಡು ಪುಳಕಿತರಾದರು. ಸಿದ್ಧಗ ಂಗಾ ಮಠಾಧ್ಯಕ್ಷರು, ಶ್ರೀಗಳ ಅನನ್ಯ ಸೇವೆ ನೆನೆದು ವೇದಿಕೆಯಲ್ಲಿಯೇ ಭಾವುಕರಾದರು. ಬೆಳಗ್ಗೆ ಭಕ್ತಿಯಿಂದ ಶ್ರೀಗಳ ಗದ್ದುಗೆ ಪೂಜೆ ನರವೇರಿಸಿ, ಶ್ರೀಗಳ ಪ್ರೀತಿಗೆ ಪಾತ್ರರಾದರು.

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿವೈಕ್ಯರಾಗಿ ಇಂದಿಗೆ 11 ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರದಲ್ಲಿ ಗುರುವಾರ ನಡೆದ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಮಠಾ ಧೀಶರು, ಹರ ಗುರು ಚರಮೂರ್ತಿಗಳು, ಲಕ್ಷಾಂತರ ಭಕ್ತ ಸಮೂಹ ಹಾಗೂ ಅನೇಕ ಗಣ್ಯಾತಿ ಗಣ್ಯರು ಸಾಕ್ಷಿಯಾದರು.

ನಾಡಿನ ಭಕ್ತಾದಿಗಳ ಮನ ಮನೆಗಳ ದೈವಿ ಸ್ವರೂಪವಾಗಿರುವ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋ ಗಿ ಮಂದಿರದ ಗದ್ದುಗೆಯಲ್ಲಿ ಮುಂಜಾ ನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.

ಹಿರಿಯ ಶ್ರೀಗಳ ಅಪೇಕ್ಷೆಯಂತೆ ನಸುಕಿನಲ್ಲೇ ಇಷ್ಟಲಿಂಗ ಪೂಜೆ ನೆರವೇರಿಸಿದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ನಂತರ ಉದ್ದಾನ ಶಿವಯೋಗಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬೆಳಗ್ಗೆ 5.30ಕ್ಕೆ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಪೂಜಾ ವಿಧಿ ವಿಧಾನಗಳು ಸಾಂಗೋಪಸಾಂಗವಾಗಿ ನೆರವೇರಿದವು. ಹಲವು ಮಠಾಧೀಶರು, ಹರಗುರುಚರಮೂರ್ತಿಗಳು ಶ್ರೀಗಳ ಗದ್ದುಗೆ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ಸಿದ್ಧ್ದಲಿಂಗ ಸ್ವಾಮೀಜಿಯವರು ಗದ್ದುಗೆ ಪೂಜೆ ನೆರವೇರಿಸಿದ ಬಳಿಕ ನಾಡಿನ ಮೂಲೆ ಮೂಲೆಗಳಿಂದ ಹರಿದು ಬರುತ್ತಿದ್ದ ಲಕ್ಷಾಂತರ ಮಂದಿ ಭಕ್ತಾದಿಗಳಿಗೆ ಗದ್ದುಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಮುಂಜಾನೆ ಯೇ ನಗರದ ವಿವಿಧ ಶಾಲಾ ಮಕ್ಕಳು ಸಮ ವಸ್ತ್ರ ಧರಿಸಿ ಸರದಿಯ ಸಾಲಿನಲ್ಲಿ ಶ್ರೀಗಳ ಗದ್ದು ಗೆ ದರ್ಶನ ಪಡೆದದ್ದು ಗಮನ ಸೆಳೆಯಿತು.

ಸುತ್ತೂರು ಮಠದ ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಸಿದ್ದರಾಮಯ್ಯ, ಮಾಜಿ ಸಚಿವರಾದ ವಿ. ಸೋಮಣ್ಣ, ಸೊಗಡು ಶಿವಣ್ಣ ಸೇರಿದಂತೆ ಸಚಿವರು, ಶಾಸಕರು ಶಿವ ಯೋಗಿ ಮಂದಿರಕ್ಕೆ ತೆರಳಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

* ಚಿ. ನಿ. ಪುರುಷೋತ್ತಮ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಅಶೋಕ್‌

ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಅಶೋಕ್‌

ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ

ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ

ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ

ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ

ಗ್ರಾಮೀಣ ಭಾಗದಲ್ಲೂ ಕ್ವಾರಂಟೈನ್‌ ವ್ಯವಸ್ಥೆ: ಡಾ.ಕೆ.ಸುಧಾಕರ್‌

ಗ್ರಾಮೀಣ ಭಾಗದಲ್ಲೂ ಕ್ವಾರಂಟೈನ್‌ ವ್ಯವಸ್ಥೆ: ಡಾ.ಕೆ.ಸುಧಾಕರ್‌

ಧಾರವಾಡ: 2 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ: 2 ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hariyuva-neeru

ಹರಿಯುವ ನೀರು ಇಂಗಿಸಿ ಅಂತರ್ಜಲ ವೃದ್ಧಿಸಿ

jameenu-padeda

ಜಮೀನು ಪಡೆದ ರೈತರಿಂದ ವಸೂಲಿ: ಆರೋಪ

palike-vyapti

ಪಾಲಿಕೆ ವ್ಯಾಪ್ತಿ ಆಸ್ತಿ ತೆರಿಗೆ ಶೇ.5 ರಿಯಾಯಿತಿ

virudda krama

ಕಳಪೆ ಯಂತ್ರೋಪಕರಣ ವಿತರಕರ ವಿರುದ್ಧ ಕ್ರಮ

sonku tmk drudha

ತುಮಕೂರು: ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆ

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

Sleep-Fusion

ಇನ್‌ಲ್ಯಾಂಡ್‌ ಲೆಟರ್‌: ಪ್ರಯಾಣದಲ್ಲಿ ಕನಸಿನ ಸಂಭಾಷಣೆಯಲ್ಲಿ

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಡ್ರಾಪ್ ಬಾಕ್ಸ್‌ : ಹೆಡ್‌ಫೋನ್‌ಗಿಂತ ಒಳ್ಳೆಯ ಗೆಳೆಯನಿಲ್ಲ

ಡ್ರಾಪ್ ಬಾಕ್ಸ್‌ : ಹೆಡ್‌ಫೋನ್‌ಗಿಂತ ಒಳ್ಳೆಯ ಗೆಳೆಯನಿಲ್ಲ

ಮನೋರಂಜನೆ ಅಸ್ತ್ರವಾದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ನಾನು ನೋಡಿದಂತೆ ಸಿನೆಮಾ : ಮನೋರಂಜನೆ ಅಸ್ತ್ರವಾದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.