ಕೋವಿಡ್ ಹೆಚ್ಚಳಕ್ಕೆ ಜನರ ನಿರ್ಲಕ್ಷ್ಯವೇ ಕಾರಣ

ಜಿಲ್ಲೆಯಲ್ಲಿ ಇದುವರೆಗೂ 11 ಸಾವಿರ ದಾಟಿದ ಸೋಂಕಿತರು: 267ಕ್ಕೇರಿದ ಮೃತರ ಸಂಖ್ಯೆ

Team Udayavani, Sep 24, 2020, 6:04 PM IST

ಕೋವಿಡ್ ಹೆಚ್ಚಳಕ್ಕೆ ಜನರ ನಿರ್ಲಕ್ಷ್ಯವೇ ಕಾರಣ

ಸಾಂದರ್ಭಿಕ ಚಿತ್ರ

ತುಮಕೂರು: ಕಲ್ಪತರುನಾಡಿನಲ್ಲಿ ಕೋವಿಡ್ ನಿಯಮಗಳನ್ನು ಸರಿಯಾಗಿ ಪಾಲಿಸದೆ ಸಾರ್ವಜನಿಕರ ನಿರ್ಲಕ್ಷ್ಯ ದಿಂದಲೇ ಕೋವಿಡ್ ಸೋಂಕು ವೇಗವಾಗಿ ಹರಡುತ್ತಿದೆ. ಮಾಸ್ಕ್ ಧರಿಸದೆ ಇರುವುದು. ಧರಿಸಿದರೂ ಮೂಗು, ಬಾಯಿ ಮುಚ್ಚದಂತೆ ಹಾಕಿಕೊಳ್ಳುವುದು. ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು. ಕಾರಂಟೈನ್‌ ಉಲ್ಲಂಘಿಸುವ ಪ್ರಕರಣಗಳು ಹೆಚ್ಚಾಗಿವೆ. ಆಗಾಗ್ಗೆ ಕೈತೊಳೆಯದಿರುವುದು, ಸ್ಯಾನಿಟೈಸರ್‌ ಬಳಸದಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ.

267 ಮಂದಿ ಸಾವು: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ತನ್ನ ತೀವ್ರತೆ ಹೆಚ್ಚಿಸಿಕೊಳ್ಳುತ್ತಾ ಎಲ್ಲಾ ಜನರಲ್ಲಿ ಹರಡುತ್ತಾ ವೇಗವನ್ನು ದಿನೇ ದಿನೆ ಹೆಚ್ಚಳ ಮಾಡಿಕೊಳ್ಳುತ್ತಲೇ ಇದ್ದು. ಈ ಸೋಂಕಿನಿಂದ ಮೃತಪಡುವವರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಈವರೆಗೆ ಈ ಸೋಂಕಿಗೆ ಜಿಲ್ಲೆಯಲ್ಲಿ 267 ಜನ ಮೃತಪಟ್ಟಿರುವುದು ಆತಂಕ ಮೂಡಿಸಿದೆ.

20 ಸಾವಿರ ಸಾಧ್ಯತೆ: ದಿನೇ ದಿನೆ ಬರುತ್ತಿರುವ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಒಂದು ದಿನಕ್ಕೆ ಕನಿಷ್ಠ ಇನ್ನೂರು- ಮುನ್ನೂರು ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಂಗಳವಾರದ ವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು 11,570 ಇದ್ದು ಇದೇ ರೀತಿ ಜಿಲ್ಲೆಯಲ್ಲಿ ಕೋವಿಡ್ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಾ ಹೋದರೆ ಅಕ್ಟೋಬರ್‌ ಅಂತ್ಯಕ್ಕೆ ಜಿಲ್ಲೆಯಲ್ಲಿ 20 ಸಾವಿರಕ್ಕೂ ಹೆಚ್ಚು ಸೋಂಕಿತರಾಗುವ ಸಾಧ್ಯತೆ ನಿಶ್ಚಳವಾಗಿದೆ.

ಜನರಲ್ಲಿ ತೀವ್ರ ಆತಂಕ: ವಿವಿಧೆಡೆ ಸರ್ಕಾರಿ ನೌಕರರು ಮತ್ತು ಅನೇಕ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಕೋವಿಡ್ ವಾರಿಯರ್ ಆಗಿ ಕೆಲಸ ಮಾಡುವ ವೈದ್ಯರಿಗೂಈ ಮಹಾಮಾರಿ ಕಾಣಿಸಿಕೊಳ್ಳುತ್ತಿರುವುದು ಈ ರೋಗದಿಂದ ವೈದ್ಯರೂ ಮೃತಪಟ್ಟಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡುತ್ತಿದೆ.

9232 ಜನ ಗುಣಮುಖ: ತುಮಕೂರು ಕೋವಿಡ್‌ -19 ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಲ್ಲಿ ಜಿಲ್ಲೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಈವರೆಗೆ ಒಟ್ಟು 11,570 ಜನ ಆಸ್ಪತ್ರೆಗೆ ಸೇರಿರುವ ಸೋಂಕಿತರಲ್ಲಿ 9232 ಜನ ಗುಣಮುಖರಾಗಿ ತಮ್ಮ ಮನೆಗೆ ತೆರಳಿದ್ದಾರೆ ಎನ್ನುವುದು ಸಮಾಧಾನದ ವಿಷಯವಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಕೊಳ್ಳಿ: ಜಿಲ್ಲೆಯಲ್ಲಿ ಈವರೆಗೂ 9232 ಮಂದಿ ಕೋವಿಡ್‌-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಗುಣಮುಖರಾದ ಸೋಂಕಿತರಲ್ಲಿ ಮತ್ತೂಮ್ಮೆ ಸೋಂಕು ದೃಢಪಡುವ ಸಾಧ್ಯತೆಯಿರುವುದರಿಂದ ಅವರೂ ಮುಂಜಾಗ್ರತೆಯಿಂದಿರಬೇಕು. ತಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು, ಸರ್ಕಾರದ ಮಾರ್ಗಸೂಚನೆಗಳನ್ನು ಅನುಸರಿಸುವುದರಿಂದ ರೋಗ ಹರಡುವಿಕೆಯನ್ನು ನಿಯಂತ್ರಿಸಬಹುದು ಎನ್ನುತ್ತಾರೆ ಜಿಲ್ಲಾ ಆರೋಗ್ಯಾಧಿಕಾರಿಗಳು.

ಹಾಸಿಗೆಗಳು ಸಾಕಾಗುತ್ತಿಲ್ಲ :  ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯದಕೊರತೆ ಎದ್ದು ಕಾಣುತ್ತಿದೆ ಜಿಲ್ಲಾಕೇಂದ್ರ ತುಮಕೂರಿನಲ್ಲಿ 200 ಹಾಸಿಗೆ ಗಳು ಉಳಿದಂತೆ ಸಿದಾರ್ಥ ಆಸ್ಪತ್ರೆಯಲ್ಲಿ 110 ಶ್ರೀದೇವಿ ಆಸ್ಪತ್ರೆಯಲ್ಲಿ 125, ಅಶ್ವಿ‌ನಿ ಆಯುರ್ವೇದಿಕ್‌ ಆಸ್ಪತ್ರೆಯಲ್ಲಿ 150, ಸೂರ್ಯ ಆಸ್ಪತ್ರೆಯಲ್ಲಿ 30, ಪೃಥ್ವಿ ಆಸ್ಪತ್ರೆಯಲ್ಲಿ 30 ಹಾಸಿಗೆಗಳು ಇದ್ದು ಇಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಪ್ರತಿ ತಾಲೂಕಿನಲ್ಲಿ 50 ಹಾಸಿಗಳು ಲಭ್ಯವಿದೆ ಆದರೆ ಈಗ ಬರುತ್ತಿರುವ ಸೋಂಕಿತರ ಸಂಖ್ಯೆಗೆ ಈ ಹಾಸಿಗೆ ಗಳು ಸಾಕಾಗುತ್ತಿಲ್ಲ ಎನ್ನುವ ಮಾತುಕೇಳಿಬರುತ್ತಿದೆ.

ಮೂವರು ವೈದ್ಯರು ಸಾವು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದೆ ಅದರಲ್ಲಿಯೂ ಉಸಿರಾಟ ಸಮಸ್ಯೆಯಿಂದ ಬರುವವರ ಸಂಖ್ಯೆಯೂ ಹೆಚ್ಚಿದೆ ಎಲ್ಲಾ ಆಸ್ಪತ್ರೆಗಳನ್ನು ಸೇರಿಸಿದರೆ70 ಮಾತ್ರಐಸಿಯು ಸೌಲಭ್ಯವಿದೆ. ಜಿಲ್ಲೆಯಲ್ಲಿ200ಕ್ಕೂ ಹೆಚ್ಚು ವೈದ್ಯರು ನೂರಾರು ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ಕೋವಿಡ್‌ಕೆಲಸ ಮಾಡುತ್ತಿದ್ದಾರೆ. ಎಲ್ಲಾ ತಾಲೂಕುಗಳಲ್ಲಿ ಕೋವಿಡ್‌ಕೇರ್‌ ಸೆಂಟರ್‌ ಗಳಿವೆ ಇಲ್ಲಿಯವರೆಗೆ ಮೂರು ಜನ ವೈದ್ಯರು ಕೋವಿಡ್ ಗೆ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ.

ತುಮಕೂರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆ ಅಧಿಕಾರಿಗಳುಕೋವಿಡ್‌-19 ನಿಯಂತ್ರಣವನ್ನು ಸಮರ್ಪಕವಾಗಿ ಮಾಡುತ್ತಿದೆ, ಜನರು ಮುನ್ನೆಚ್ಚರಿಕೆಯಿಂದಕೋವಿಡ್‌ ಜೊತೆಯಲ್ಲಿಯೇ ಬದುಕಲುಕಲಿಯಬೇಕು. ಸಾರ್ವಜನಿಕರು ತೀವ್ರತರವಾದ ಆರೋಗ್ಯ ಸಮಸ್ಯೆ ಉಂಟಾಗುವವರೆಗೂ ಕಾಯದೆ ರೋಗಿಯನ್ನು ಪ್ರಾಥಮಿಕ ಹಂತದಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾತ್ರ ಸಾವಿನ ಪ್ರಮಾಣ ತಗ್ಗಿಸಬಹುದು. ಡಾ.ಕೆ.ರಾಕೇಶ್‌ಕುಮಾರ್‌, ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಅದೇ ರೀತಿ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮರಣ ಪ್ರಮಾಣ ಶೇ.3ರಷ್ಟು ಮಾತ್ರವಿದ್ದು, ಜನರು ಭಯಭೀತರಾಗಬಾರದು. ಜನರು ಎಚ್ಚೆತ್ತು ರೋಗಲಕ್ಷಣ ಕಂಡ ಕೂಡಲೇ ವೈದ್ಯಕೀಯ ತಪಾಸಣೆಗೊಳಗಾಗಬೇಕು. ಡಾ.ಎಂ.ಬಿ.ನಾಗೇಂದ್ರಪ್ಪ, ಡಿಎಚ್‌ಒ

ಜಿಲ್ಲಾಸ್ಪತ್ರೆಯಲಿ ಕೋವಿಡ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿದೆ, ಜನರು  ಕೋವಿಡ್ ರೋಗ ‌ ಲಕ್ಷಣ ಬಂದ ತಕ್ಷಣ ತಪಾಸಣೆ ಮಾಡಿಸಿ ಕೊಂಡು ಚಿಕಿತೆ ಪಡೆಯಿರಿ, ಈವರೆಗೆ 9232 ಜನರು ‌ ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಡಾ.ವೀರಭದ್ರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ

­ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.