ಹಾರನ್ ಹೊಡೆದ ಎಂಬ ಕ್ಷುಲ್ಲಕ ಕಾರಣಕ್ಕೆ ಮನಸೋ ಇಚ್ಛೆ ಚಾಕು ಇರಿತ

ಕೊರಟಗೆರೆಯಲ್ಲಿ ನಡೆದ ಬೆಚ್ಚಿ ಬೀಳುವ ಘಟನೆ

Team Udayavani, Nov 28, 2022, 7:30 PM IST

1-ADDSDASD

ಕೊರಟಗೆರೆ: ಕ್ಷುಲ್ಲಕ ಕಾರಣಕ್ಕೆ ಕಾರಿನವರು ಹಾರನ್ ಹೊಡೆದರು ಎಂದು  ಅಡ್ಡ ಗಟ್ಟಿ ದ್ವಿಚಕ್ರ ವಾಹನ ಸವಾರರಿಬ್ಬರು ವ್ಯಕ್ತಿಗೆ ಚಾಕುವಿನಿಂದ ಮನಸೋ ಇಚ್ಚೆ  ಇರಿದಿರುವ ಘಟನೆಯೊಂದು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ತಾಲೂಕಿನ ಬೈರೇನಹಳ್ಳಿ ಬಳಿ ಭಾನುವಾರ ಸಂಜೆ 7 ಗಂಟೆ ವೇಳೆ ಸಂದರ್ಭದಲ್ಲಿ ಈ ದುರ್ಘಟನೆ ಜರುಗಿದ್ದು, ಕೊರಟಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರಿನ ಸವಾರರಿಗೆ ಹಾರನ್ ಹೊಡೆದರು ಎಂಬ ಕಾರಣಕ್ಕೆ ದ್ವಿಚಕ್ರ ವಾಹನದ ಇಬ್ಬರು ಯುವಕರು ಕಾರನ್ನು ಅಡ್ಡಗಟ್ಟಿ ಮನಸೋ ಇಚ್ಚೆ ಮೂರ್ನಾಲ್ಕು ಕಡೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಮೂಲದ ಅಮೃತಹಳ್ಳಿಯ ನಾಲ್ಕು ಜನ ತನ್ನ ಅಕ್ಕನ ಮನೆಗೆ ಬಂದು ಕೊರಟಗೆರೆ ತಾಲೂಕಿನ ಬಿದಲೋಟಿ ಗ್ರಾಮದಿಂದ ಬೆಂಗಳೂರಿನ ಕಡೆ ಹೋಗುತ್ತಿರುವಾಗ ಮಾರ್ಗ ಮಧ್ಯೆ ಬೈರೇನಹಳ್ಳಿ ಕ್ರಾಸ್ ನಲ್ಲಿ ಇಬ್ಬರು ಕಾರಿನ ಮುಂದೆ ಹೋಗುತ್ತಿರುವಾಗ ಕಾರಿಗೆ ಎರಡು ಮೂರು ಬಾರಿ ಅಡ್ಡ ಬಂದ ಕಾರಣ ಕಾರಿನವರು ಎರಡು ಮೂರು ಬಾರಿ ಹಾರನ್‌ ಹೊಡೆದ ಕಾರಣಕ್ಕೆ ಅಡ್ಡಗಟ್ಟಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಕೊರಟಗೆರೆ ತಾಲೂಕಿನ ಬಿದಲೋಟಿ ಗ್ರಾಮದ ಅಕ್ಕನ ಮನೆಗೆ ಬಂದಿದ್ದ ಮಾಲಿಂಗಯ್ಯ ಹಾಗೂ ಅವರ ಅಣ್ಣ ತಮ್ಮಂದಿರಾದ ಮಂಜುನಾಥ್, ಹೇಮಂತ್, ಯೋಗೇಶ್ ವಾಪಸ್ ಬೆಂಗಳೂರಿಗೆ ಹೋಗುತ್ತಿರುವಾಗ ಬೈರೇನಹಳ್ಳಿ ಬಳಿ ಈ ಘಟನೆ ಜರಗಿದ್ದು, ಬೈರೇನಹಳ್ಳಿ ಕ್ರಾಸ್‌ನ ಬಳಿ ಕಾರಿನ ಸವಾರ ಹೇಮಂತ್ ಮೇಲೆ ಎರಡು ಮೂರು ಬಾರಿ ಚಾಕುವಿನಿಂದ ಕುತ್ತಿಗೆ, ಎದೆ,ಭುಜಕ್ಕೆ ಇರಿಯಲಾಗಿದ್ದು, ಹೇಮಂತ್ ತೀವ್ರ ರಕ್ತಸ್ರಾವದಿಂದ ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡು ಚಾಕುವಿನಲ್ಲಿ ಮನಸೋ ಇಚ್ಚೆ ಇರಿಯುತ್ತಾರೆ ಎನ್ನುವುದಾದರೆ ನಾಗರಿಕ ಸಮಾಜದಲ್ಲಿ ಮುಂದಿನ ದಿನದಲ್ಲಿ ಜನ ಯಾವ ರೀತಿ ಬದುಕಬೇಕು ಸಣ್ಣಪುಟ್ಟ ವಿಚಾರಗಳು ಮನುಷ್ಯನ ಪ್ರಾಣಕ್ಕೆ ಕುತ್ತು ತರುತ್ತದೆ ಎಂದರೆ ಗತಿ ಯಾರು ಎಂಬುದೇ ಕೆಲವು ಸ್ಥಳೀಯ ನಾಗರಿಕರ ಆತಂಕವಾಗಿದೆ.

ಗಾಯಾಳು ಕುರಿತು ಆಸ್ಪತ್ರೆಯ ಮಾಹಿತಿಯ ಮೇರೆಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮಾಹಿತಿ ಕಲೆಹಾಕಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.