Udayavni Special

ಅಭಿವೃದ್ಧಿಯತ್ತ ತುಮಕೂರು ನಗರ

Team Udayavani, Jul 4, 2020, 6:51 AM IST

abhivrudiyatta

ತುಮಕೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ, ತೆರಿಗೆ ಸಂಗ್ರಹವಾಗುತ್ತಿಲ್ಲ, ಬಜೆಟ್‌ ನಂತರ ಲಾಕ್‌ಡೌನ್‌ ಆಗಿದ್ದರಿಂದ ಈ ಭಾರಿ ರಾಜಸ್ವ ಸಂಗ್ರಹವೂ ಆಗಿಲ್ಲ, ಬೇರೆ ಕ್ಷೇತ್ರಗಳಿಗೆ ಹೋಲಿಕೆ ಮಾಡಿದರೆ ತುಮ ಕೂರು ನಗರ  ಅಭಿವೃದ್ಧಿ ಅತ್ಯಂತ ವೇಗವಾಗಿ ನಡೆಯುತ್ತಿದೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಹೇಳಿದರು. ನಗರದ 25ನೇ ವಾರ್ಡಿನ ಮುನಿಸಿಪಲ್‌ ಬಡಾವಣೆಯಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ 2.5 ಕಿ.ಮೀ. ಸಿ.ಸಿ. ಚರಂಡಿ ನಿರ್ಮಾಣ ಕಾಮಗಾರಿಗೆ  ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ ವೆಂದರೆ ತೆರಿಗೆ ಸಂಗ್ರಹ ಕಷ್ಟವಾಗಲಿದೆ ಎಂದರು.

ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ: ರಾಜ್ಯ ಬಜೆಟ್‌ನಲ್ಲಿ ಘೋಷ ಣೆಯಾದ ಅನುದಾನ ಬಿಡುಗಡೆ ಮಾಡಲು ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗಬೇಕಿತ್ತು. ಆದರೆ ಮಾ.25 ರಿಂದಲೇ ಲಾಕ್‌ಡೌನ್‌ ಆಗಿದ್ದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ  ಎಂದು ನುಡಿದರು.

ಆರ್ಥಿಕ ಚಟುವಟಿಕೆ ಕುಸಿತ: ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಒಂದೆಡೆ ನೆರೆಹಾವಳಿಯಿಂದ ತತ್ತರಿಸಿದ ಉತ್ತರ ಕರ್ನಾಟಕದ ಭಾಗಕ್ಕೆ ಸಾವಿರಾರು  ಕೋಟಿ ರೂ. ಖರ್ಚಾಗಿದ್ದು, ಈಗ ಕೋವಿಡ್‌ 19ದಿಂದ ರಾಜ್ಯದ ಆರ್ಥಿಕ ಚಟುವಟಿಕೆ ಶೇ.80 ರಷ್ಟು ಕುಸಿದಿದೆ. ಕೇವಲ 20 ರಷ್ಟು ಮಾತ್ರ ಆರ್ಥಿಕ ಚಟುವಟಿಕೆ ನಡೆಯುತ್ತಿವೆ ಎಂದರು.

25 ಕೋಟಿ ಅನುದಾನ: ತೆರಿಗೆ ಸಂಗ್ರಹದಲ್ಲೂ ಭಾರಿ ಇಳಿಕೆ ಕಂಡಿದೆ. ಇಂತಹ ಸಂದರ್ಭದಲ್ಲಿ ಅಭಿವೃದ್ಧಿಗೆ ಅನುದಾನಗಳು ಬಿಡುಗಡೆಯಾಗುವುದು ಕಷ್ಟಸಾಧ್ಯ, ಇಂತಹ ಪರಿಸ್ಥಿತಿಯಲ್ಲಿ ನಮ್ಮ ತುಮಕೂರು ನಗರಕ್ಕೆ ಮುಖ್ಯಮಂತ್ರಿ  ಬಿ.ಎಸ್‌.ಯಡಿಯೂರಪ್ಪ ಅವರು ನಗರದ ಅಭಿವೃದ್ಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ನಮ್ಮ ಅದೃಷ್ಟ ಎಂದೇ ಭಾವಿಸಬೇಕು ಎಂದು ತಿಳಿಸಿದರು.

ಸಿ.ಸಿ. ಚರಂಡಿ ನಿರ್ಮಾಣ: ನಗರದ ಹೃದಯ ಭಾಗದಲ್ಲಿರುವ 25ನೇ ವಾರ್ಡಿನ ಮುನಿಸಿಪಲ್‌ ಬಡಾವಣೆಯಲ್ಲಿ ವಿವಿಧ ಅಭಿ  ವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಮೊದ ಲಿಗೆ ಇಲ್ಲಿ ಚರಂಡಿ ಅವ್ಯವಸ್ಥೆ ಇರುವುದರಿಂದ  ಪ್ರಸ್ತುತ 75 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ. ಚರಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂದರು. ನಿಮ್ಮ ಋಣ ತೀರಿಸುತ್ತಿದ್ದೇವೆ: ಈ ಭಾಗದ ಜನರು ಪ್ರೀತಿ  ಯಿಂದ ನಮ್ಮನ್ನು ಆಶೀರ್ವದಿಸಿದ್ದಾರೆ. ಈ ಬಡಾವಣೆಯ  ಅಭಿವೃದ್ಧಿ ಮಾಡುವ  ಮೂಲಕ ನಿಮ್ಮ ಋಣ ತೀರಿಸುತ್ತಿದ್ದೇವೆ. ಇಲ್ಲಿರುವ ಮಹಾತ್ಮಗಾಂಧಿ ಪಾರ್ಕ್‌ ನಲ್ಲಿ ದೊಡ್ಡ ಮರವಿದ್ದು, ಟ್ರೀಪಾರ್ಕ್‌ ಆಗಿ ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಈ ಪಾರ್ಕ್‌ನಲ್ಲಿ ಜಿಮ್‌ ಮತ್ತು ವಾಯು  ವಿಹಾರ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ  ಎಂದು ಹೇಳಿದರು

ತುಮಕೂರು ನಗರದಲ್ಲಿ ಎಲ್ಲೆಲ್ಲಿ ರಾಜಗಾಲುವೆ ಮತ್ತು ಕನ್ಸರ್‌ವೆನ್ಸಿ ಒತ್ತುವರಿಯಾಗಿದೆಯೋ ಕೂಡಲೇ  ತೆರವುಗೊಳಿಸಿ, ರಾಜಗಾಲುವೆ ಮತ್ತು ಕನ್ಸರ್‌ವೆನ್ಸಿ ಒತ್ತುವರಿ ಮಾಡಿದ್ದರೆ ಮುಂದೊಂದು ದಿನ ಒತ್ತುವರಿ ತೆರವು ಕಟ್ಟಿಟ್ಟ ಬುತ್ತಿ.  
-ಜಿ.ಬಿ.ಜ್ಯೋತಿಗಣೇಶ್‌, ಶಾಸಕ

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಟಗೆರೆ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಸರಕಾರಿ ಶಾಲೆ ಮುಖ್ಯ ಶಿಕ್ಷಕ

ಕೊರಟಗೆರೆ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಸರಕಾರಿ ಶಾಲೆ ಮುಖ್ಯ ಶಿಕ್ಷಕ

DEMAND FOR PURE WATER

ಶುದ್ಧ ಕುಡಿವ ನೀರಿನ ಘಟಕ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ ಪರಿಸರಕ್ಕೆ ಧಕ್ಕೆ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ, ಪರಿಸರಕ್ಕೆ ಧಕ್ಕೆ

ಎತ್ತಿನಹೊಳೆ ಕಾಮಗಾರಿಗೆ ಹಿನ್ನಡೆ

ಎತ್ತಿನಹೊಳೆ ಕಾಮಗಾರಿಗೆ ಹಿನ್ನಡೆ

ರೈತ ಹೋರಾಟಗಾರರಿಗೆ ಶ್ರದ್ಧಾಂಜಲಿ

ರೈತ ಹೋರಾಟಗಾರರಿಗೆ ಶ್ರದ್ಧಾಂಜಲಿ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.