ಕೃಷಿಯಲ್ಲಿರಲಿ ಆಧುನಿಕ ತಂತ್ರಜ್ಞಾನ

ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ರಥಕ್ಕೆ ಜಿಪಂ ಸದಸ್ಯೆ ರೇಣುಕಾ ಚಾಲನೆ

Team Udayavani, Aug 18, 2019, 4:54 PM IST

TK-TDY-2

ತುರುವೇಕೆರೆ ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಅಭಿಯಾನದಡಿ 'ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ' ರಥಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ಚಾಲನೆ ನೀಡಿದರು.

ತುರುವೇಕೆರೆ: ರೈತರು ಕೃಷಿ ಇಲಾಖೆಗಳಿಂದ ಸಿಗುವ ವಿವಿಧ ಸವಲತ್ತು ಪಡೆದುಕೊಳ್ಳು ವುದರ ಜೊತೆಗೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಆರ್ಥಿಕವಾಗಿ ಲಾಭ ಹೊಂದಬೇಕು ಎಂದು ಕಸಬಾ ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ಹೇಳಿದರು.

ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಕೃಷಿ ಇಲಾಖೆ, ತಾಲೂಕು ಪಂಚಾಯಿತಿ, ತೋಟಗಾರಿಕೆ, ಕಂದಾಯ ಹಾಗು ಹಲವು ಇಲಾಖೆಗಳ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಅಭಿಯಾನದಡಿ ‘ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ’ಮಾಹಿತಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೃಷಿಗೆ ಶಾಶ್ವತ ಯೋಜನೆ ರೂಪಿಸಿ: ಪ್ರತಿಯೊಂದು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪ್ರಾಮಾಣಿಕವಾಗಿ ಹಾಗೂ ಜವಾ ಬ್ದಾರಿಯಿಂದ ಸರ್ಕಾರದ ವಿವಿಧ ಯೋಜನೆ ಫ‌ಲಾನುಭವಿಗಳಿಗೆ ತಲುಪಿಸಿದರೆ ದೇಶ ಅಭಿವೃದ್ಧಿಯಾಗುವಲ್ಲಿ ಎರಡು ಮಾತಿಲ್ಲ. ಗ್ರಾಮದ ಕಟ್ಟಕಡೆಯ ರೈತನ ಮನೆ ಬಾಗಿಲಿಗೆ ತಲುಪದೆ ಸರ್ಕಾರದ ಎಷ್ಟೋ ಯೋಜನೆ ಗಳು ಹಳ್ಳ ಹಿಡಿದಿರುವ ನಿದರ್ಶನಗಳಿವೆ. ಪ್ರಕೃತಿಯ ಮುನಿಸಿನಿಂದ ಇಂದು ರೈತರ, ಸಾಮಾನ್ಯರ ಬದುಕು ತಳಹೊಡೆದ ದೋಣಿ ಯಂತಾಗಿದೆ. ಇಂತಹ ದಯನೀಯ ಸ್ಥಿತಿಯಲ್ಲಿರುವ ರೈತರಿಗೆ ಸರ್ಕಾರಗಳು ಕೃಷಿಗೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಹೇಳಿದರು.

ರೈತರಿಗೆ ಮಾಹಿತಿ ತಿಳಿಸಿ: ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಚ್.ಆರ್‌. ಪ್ರಮೋದ್‌ ಕುಮಾರ್‌ ಮಾತನಾಡಿ, ನಮ್ಮ ಕೃಷಿ ಇಲಾಖೆಯಲ್ಲಿ ಕೃಷಿಗೆ ಸಂಬಂಧಪಟ್ಟ ನೂರಾರು ಯೋಜನೆಗಳಿದ್ದು, ಅವುಗಳ ಬಗ್ಗೆ ಕೂಲಂಕಷ ಮಾಹಿತಿ ಹಳ್ಳಿಯ ಪ್ರತಿಯೊಬ್ಬ ರೈತರಿಗೂ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ರೈತರು ಹವಾಮಾನ ಆಧಾರಿತ ಹಾಗೂ ಕಡಿಮೆ ನೀರಿನಿಂದ ಬೆಳೆಯುವ ಬೆಳೆಗಳನ್ನು ಕೃಷಿ ಪದ್ಧತಿಯಲ್ಲಿ ಅಳವಡಿಸಿಕೊಳ್ಳಬೇಕು. ಈ ಮಾಹಿತಿ ರಥಯಾತ್ರೆ ತಾಲೂಕಿನ ನಾಲ್ಕು ಹೋಬಳಿ ಕೇಂದ್ರಗಳಲ್ಲಿಯೂ ಸಂಚರಿಸಲಿದೆ ಎಂದು ಹೇಳಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಜಿಲ್ಲಾ ಕೃಷಿಕ ಸಮಾಜದ ಚನ್ನಕೇಶವ, ಕಸಬಾ ಕೃಷಿ ಅಧಿಕಾರಿ ಎಸ್‌.ನರಸಿಂಹರಾಜು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.