ಪೌರತ್ವ ತಿದ್ದುಪಡಿ ಕಾನೂನಿಗೆ ವ್ಯಾಪಕ ವಿರೋಧ


Team Udayavani, Dec 25, 2019, 3:00 AM IST

pow-tum

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್‌ಅರ್‌ಸಿ ವಿರೋಧಿಸಿ ನಗರದಲ್ಲಿ ಮಂಗಳವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್‌ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಹಿಂದೂ-ಮುಸ್ಲಿಮರು ಒಂದೇ ಎಂದು ಘೋಷಣೆ ಮೊಳಗಿಸಿದರು. ಪೌರತ್ವ ತಿದ್ದುಪಡಿ ಕಾನೂನು ರದ್ದಾಗುವವರೆಗೆ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.

ತುಮಕೂರು: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್‌ಆರ್‌ಸಿ ವಿರೋಧಿಸಿ ವಿವಿಧ ಸಂಘಟನೆ ಒಳಗೊಂಡ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾವಿರಾರು ಹಿಂದೂ-ಮುಸ್ಲಿಮರು ಸೇರಿ ಬೃಹತ್‌ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್‌ ಶಾ ವಿರುದ್ಧ ಹರಿಹಾಯ್ದರು.

ನಗರದ ನಾಲ್ಕು ದಿಕ್ಕಿನಿಂದಲೂ ರಾಷ್ಟ್ರಧ್ವಜ ಹಿಡಿದು ನಾವು ಭಾರತೀಯರೆಂದು ಘೋಷಣೆ ಕೂಗುತ್ತ ತಂಡೋಪತಂಡವಾಗಿ ಬಂದಿದ್ದ ಸಾವಿರಾರು ಮುಸ್ಲಿಮರು ಕೇಂದ್ರದ ವಿರುದ್ಧ ಘೋಷಣೆ ಕೂಗುತ್ತ ಎನ್‌ಆರ್‌ಸಿ ಮತ್ತು ಸಿಎಎ ಕಾನೂನು ವಿರೋಧಿಸಿ ಪ್ರತಿಭಟನಾ ಧರಣಿ ನಡೆಸಿ, ದೇಶದ ಐಕ್ಯತೆ ಘೋಷಣೆ ಮೊಳಗಿಸಿದರು.

ಕಾಯ್ದೆ ವಾಪಸ್‌ ಪಡೆಯಿರಿ: ಧರಣಿ ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಡಾ.ಎಸ್‌.ರಫೀಕ್‌ ಅಹಮದ್‌, ಇರುವ ಕಾನೂನುಗಳಲ್ಲೇ ನುಸುಳುಕೋರರ ತಡೆಯಲು ಅವಕಾಶವಿದ್ದರ ಅಲ್ಪಸಂಖ್ಯಾತರಲ್ಲಿ ಆತಂಕ ಮೂಡಿಸುವ ಕಾನೂನು ಜಾರಿಗೆ ತಂದಿರುವುದು ಸರಿಯಲ್ಲ. ಈ ಹೋರಾಟ ಕೇಂದ್ರ ಸರ್ಕಾರ ಕಾಯ್ದೆ ವಾಪಸ್‌ ತೆಗೆದುಕೊಳ್ಳುವವರೆಗೂ ಮುಂದುವರಿಯಬೇಕು. ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶಾಂತಿ ಭಂಗಕ್ಕೆ ಅವಕಾಶ ಕೊಡದಂತೆ ಸರ್ಕಾರದ ತಪ್ಪು ನೀತಿ ವಿರುದ್ಧ ಪ್ರತಿಭಟನೆ ಮಾಡಿರುವುದು ಮಾದರಿ.

ಯಾವುದೇ ಕಾರಣಕ್ಕೂ ನಡೆದ ಹೋರಾಟ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ ಎಂದು ಹೇಳಿದರು. ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿ, ದೇಶದಲ್ಲಿ ಹಲವು ಸಮಸ್ಯೆಗಳಿದ್ದರೂ ಅವುಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಮುಂದಾಗದೆ ಇಂತಹ ಕಾಯ್ದೆಗಳ ಮೂಲಕ ಜನರ ಒಗ್ಗಟ್ಟು ಒಡೆಯಲು ಮುಂದಾಗಿದೆ ಎಂದು ಆರೋಪಿಸಿದರು.

ಸಂವಿಧಾನದ ತತ್ವಕ್ಕೆ ಧಕ್ಕೆ: ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್‌ ಮಾತನಾಡಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳುಗಳ ಭರವಸೆ ನೀಡಿ ದೇಶದ ಅಭಿವೃದ್ಧಿ ಕಡೆಗಣಿಸಿದೆ. ಸಂವಿಧಾನದ ತತ್ವಕ್ಕೆ ಧಕ್ಕೆ ತರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ದಲಿತ ಸಂಘಟನೆ ಮುಖಂಡ ಪಿ.ಎನ್‌.ರಾಮಯ್ಯ ಮಾತನಾಡಿ, ಮುಸ್ಲಿಮರು ಮಾತ್ರವಲ್ಲದೇ ದಲಿತ ಸಮುದಾಯವೂ ಈ ಕಾನೂನಿನಿಂದ ಕಷ್ಟಕ್ಕೆ ಸಿಲುಕಲಿದ್ದು, ಶಾಂತಿ ಸೌಹಾರ್ದತೆ ನಾಡಲ್ಲಿ ಅಂಬೇಡ್ಕರ್‌ ಅವರ ಸಂವಿಧಾನ ಬದ್ಧ ಹಕ್ಕು ಕಸಿಯಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್‌ ಮಾತನಾಡಿ, ಕೇಂದ್ರ ಸರ್ಕಾರ ಅಲ್ಪಸಂಖ್ಯಾತರನ್ನಷ್ಟೇ ಅಲ್ಲ, ನೋಟು ಅಮಾನ್ಯಿಕರಣ, ಅವೈಜ್ಞಾನಿಕ ಜಿಎಸ್‌ಟಿ ಜಾರಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮಾಡುವ ಮೂಲಕ ಜನರಿಗೆ ದ್ರೋಹ ಬಗೆದಿದೆ. ಆ ಮೂಲಕ ತಮ್ಮ ಗುಪ್ತ ಅಜೆಂಡಾ ಅನುಷ್ಠಾನಕ್ಕೆ ತಂದಿದೆ. ಆದ್ದರಿಂದ ದುಡಿಯುವ ಜನ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

ಪಾಲಿಕೆ ಸದಸ್ಯ ಕುಮಾರ್‌ ಗೌಡ ಮಾತನಾಡಿ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಗಡಿಪಾರಾಗಿದ್ದ ಅಮಿತ್‌ ಶಾ ಗೃಹಮಂತ್ರಿಯಾಗಿರುವುದು ದೇಶದ ದುರ್ದೈವ. ಹಿಂದೂ, ಮುಸ್ಲಿಮರನ್ನು ಒಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಮುಖಂಡ ನಿರಂಜನ್‌ ಮಾತನಾಡಿ, ಪಂಕ್ಚರ್‌ ಹಾಕುವ ಎದೆಗಳಲ್ಲಿ ಇರುವುದು ಪ್ರೀತಿಯೇ ಹೊರತು ಅಕ್ಷರ ಮಾತ್ರವಲ್ಲ. ಬಡವರ ತುತ್ಛವಾಗಿ ಕಾಣುವುದು ಮತ್ತು ದುರಂಹಕಾರದ ಮಾತು ಕೇಂದ್ರದಲ್ಲಿರುವವರು ಬದಲಿಸಿಕೊಳ್ಳಬೇಕು ಎಂದರು.

ಶಾಸಕ ಡಿ.ಸಿ ಗೌರೀಶಂಕರ್‌, ಮಾಜಿ ಮೇಯರ್‌ ಅಸ್ಲಾಂ ಪಾಷಾ, ಪಾಲಿಕೆ ಸದಸ್ಯ ನಯಾಜ್‌ ಅಹಮದ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌. ರಾಮಕೃಷ್ಣ, ಫಾ. ರೆವರೆಂಡ್‌ ಎಲಿಸ್‌ ದೇವನ್‌, ಮೌಲ್ವಿ ಉಮರ್‌ ಅನ್ಸಾರಿ ಮಾತನಾಡಿದರು. ವೇಲ್ಫೆರ್‌ ಪಾರ್ಟಿಯ ತಾಜುದ್ದೀನ್‌, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ ಮುಜೀಬ್‌, ಮುಖಂಡ ಸಾಕೇತ್‌ ರಾಜನ್‌, ಜಿಯಾಉರ್‌ ರೆಹಮಾನ್‌, ಮುದಾಸೀರ್‌, ಶಮೀಲ್‌, ರಾಯಿಲ್‌, ಕನ್ನಡ ಸಂಘಟನೆಯ ಅರುಣ್‌,

ಭೀಮಸೇನೆ ಗಣೇಶ್‌ ಮುಸ್ಲಿಂ ಅಲ್ಪಸಂಖ್ಯಾತ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅತೀಕ್‌ ಅಹಮದ್‌ ಕಾರ್ಯದರ್ಶಿ ಅಯಾಜ್‌ ಉಬೇದುಲ್ಲಾ, ಇನಾಮುಲ್ಲಾ, ಅನೀಫ್ ಉಲ್ಲಾ, ಹಿಂದೂಸ್ತಾನ ಫ‌ಯಾಜ್‌ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಮುಜೀಬ್‌ ಮಾಡಿದ್ದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಡಾ. ಕೆ ರಾಕೇಶ್‌ಕುಮಾರ್‌ಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಅಭಿನಂದಿಸಿದರು. ನಿಮ್ಮ ಮನವಿ ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.

ಅರೇ ಸುನ್‌ಲೇ ಮೋದಿ, ಶಾ…: ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಸಾವಿರಾರು ಜನರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿ ಕಾಯ್ದೆ ವಾಪಸ್‌ ತೆಗದುಕೊಳ್ಳುವಂತೆ ಆಗ್ರಹಿಸಿದರು. ಅರೇ ಸುನ್‌ಲೇ ಮೋದಿ, ಅರೇ ಸುನ್‌ಲೇ ಅಮಿತ್‌ ಶಾ (ಕೇಳಿಸಿಕೋ ಮೋದಿ, ಕೇಳಿಸಿಕೋ ಅಮಿತ್‌ ಶಾ) ಎಂದು ಏಕವಚನದಲ್ಲಿ ವಾಗ್ಧಾಳಿ ನಡೆಸಿದರು. ಸುಮಾರು ಎರಡು ಗಂಟೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾರಾಜಿಸಿದ ರಾಷ್ಟ್ರಧ್ವಜ: ಪ್ರತಿಭಟನೆಯಲ್ಲಿ ರಾಷ್ಟ್ರಧ್ವಜ ರಾರಾಜಿಸುತ್ತಿದ್ದದ್ದು ವಿಶೇಷವಾಗಿತ್ತು. ಹಿಂದೂ-ಮುಸ್ಲಿಂ ಏಕ್‌ ಹೈ ಎಂದು ಘೋಷಣೆ ಕೂಗುತಿದ್ದರು. ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬರೀ ರಾಷ್ಟ್ರಧ್ವಜಗಳೇ ಕಣ್ಣಿಗೆ ಕಾಣಿಸುತಿತ್ತು.

ಅತ್ಯಂತ ಶಾಂತಿ ಮತ್ತು ಶಿಸ್ತಿಗೆ ಪ್ರತಿಭಟನೆ ಸಾಕ್ಷಿಯಾಗಿತ್ತು. ಪ್ರಧಾನಿ ಮತ್ತು ಗೃಹ ಸಚಿವರಿಗೆ ಏಕ ವಚನದಲ್ಲಿ ವಾಗ್ಧಾಳಿ ನಡೆಸಿದ್ದು ಹೊರತು ಪಡಿಸಿದರೆ ಬಹುತೇಕ ಶಾಂತಿಯುತವಾಗಿ ನಡೆಯಿತು. ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಪೊಲೀಸರು ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದರು. ಸಮಯಕ್ಕೆ ಸರಿಯಾಗಿ ಪ್ರತಿಭಟನೆ ಅಂತ್ಯಗೊಳಿಸಿದರು. ಪ್ರತಿಭಟನೆ ಸುತ್ತ ಮುತ್ತ ಅಲ್ಲಲ್ಲಿ ಸ್ವಯಂ ಸೇವಕರ ನೇಮಿಸಿಕೊಂಡು ಗಲಾಟೆ, ನೂಕುನುಗ್ಗಲು ಉಂಟಾಗಂದಂತೆ ಜಾಗೃತಿ ವಹಿಸಿದ್ದರು. ಪೊಲೀಸರು ನಗರದ ಎಲ್ಲಾ ಕಡೆ ಬಿಗಿ ಭದ್ರತೆ ಒದಗಿಸಿದ್ದರು. 500ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಭದ್ರತಾ ಕಾರ್ಯದಲ್ಲಿ ತೊಡಗಿದ್ದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೋ. ನಂ.ವಂಶಿಕೃಷ್ಣ, ಎಎಸ್‌ಪಿ ಉದೇಶ್‌, ಡಿವೈಎಸ್‌ಪಿ ತಿಪ್ಪೇಸ್ವಾಮಿ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ವಹಿಸಿದ್ದರು.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಅರ್‌ಸಿಯನ್ನು ಜಾರಿಗೆ ತರುವ ಮುನ್ನ ಸರ್ವಧರ್ಮ ಗುರುಗಳನ್ನು ಕರೆದು ಚರ್ಚಿಸಬೇಕಾಗಿತ್ತು. ಮೋದಿ ಮತ್ತು ಅಮಿತ್‌ ಶಾ ಜನರ ಮೇಲೆ ಕಾಯ್ದೆ ಮೂಲಕ ದರ್ಪ ಮಾಡುತ್ತಿದ್ದಾರೆ. ಕೂಡಲೇ ಕಾಯ್ದೆ ವಾಪಸ್‌ ಪಡೆಯಬೇಕು. ಸಂಸದ ತೇಜಸ್ವಿ ಸೂರ್ಯ ಬಡವರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಎದೆ ಸೀಳಿದರೆ ಒಂದಕ್ಷರ ಇಲ್ಲ, ಪಂಕ್ಚರ್‌ ಹಾಕುವವರು ಎಂದು ಮುಸ್ಲಿಂರ ಬಗ್ಗೆ ಕೀಳು ಮಾತನಾಡಿದ್ದಾರೆ. ಬಡವರ ನೋವು ಅವರಿಗೆ ತಿಳಿದಿಲ್ಲ.
-ಡಿ.ಸಿ.ಗೌರಿಶಂಕರ್‌, ಗ್ರಾಮಾಂತರ ಶಾಸಕ

ದೇಶದಲ್ಲಿ ತರುತ್ತಿರುವ ಕಾನೂನುಗಳು ಜನಪರವಾಗಿರದೆ ಜನರ ಒಡೆದು ಆಳುವ ನೀತಿಗೆ ಪೂರಕವಾಗಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಗಮನಿಸಿದರೆ ಸರ್ಕಾರದ ದ್ವಂದ್ವ ತಿಳಿಯುತ್ತದೆ.
-ಸಿ.ಯತಿರಾಜ್‌, ಪರಿಸರವಾದಿ

ಒಂದು ಕೋಮಿನ ಜನರಷ್ಟೇ ಅಲ್ಲ, ದೇಶದ ಬುಡಕಟ್ಟು, ಆದಿವಾಸಿಗಳು ಬಡವರೂ ಸಂಕಟಕ್ಕೆ ಒಳಗಾಗುವ ಪರಿಸ್ಥಿತಿ ಬಂದಿರುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಸರ್ಕಾರ ನಿಷೇಧಾಜ್ಞೆ ಜಾರಿ ಮಾಡಿ ಹೋರಾಟದ ಹಕ್ಕು ಕಸಿದುಕೊಳ್ಳುವುದು ಸಂವಿಧಾನ ವಿರೋಧಿಯಾಗಿದೆ. ಜನರು ಆತಂಕದಲ್ಲಿ ಬದುಕುವಂತೆ ಮಾಡಿ ಅಧಿಕಾರ ಭದ್ರಪಡಿಸಿಕೊಳ್ಳುವವರನ್ನು ಜನತೆ ಹಿಮ್ಮೆಟ್ಟಿಸಬೇಕು.
-ಕೆ.ದೊರೈರಾಜು, ಜನಪರ ಚಿಂತಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.