ರಾಗಿ ಪೈರಿಗೆ ಹುಳುಗಳ ಕಾಟ; ರೈತನಿಗೆ ಆಘಾತ


Team Udayavani, Sep 23, 2019, 4:03 PM IST

TK-TDY-1

ಹುಳಿಯಾರು: ಹುಳಿಯಾರು ಹೋಬಳಿಯ ಕುರಿಹಟ್ಟಿ ಪ್ರದೇಶದಲ್ಲಿ ರಾಗಿ ಪೈರು ತಿನ್ನುವ ಹುಳುಗಳ ಕಾಟ ಆರಂಭವಾಗಿದ್ದು, ಉತ್ತಮ ಇಳುವರಿ ಪಡೆಯುವ ನಿರೀಕ್ಷೆಯಲ್ಲಿದ್ದ ರೈತರನ್ನು ಆತಂಕಕ್ಕೀಡು ಮಾಡಿದೆ.

ಗಾಯದ ಮೇಲೆ ಬರೆ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹೆಸರು ಕಾಳು ಬಿತ್ತಲಾಗದೆ ನಿರಾಸೆಗೊಳಗಾಗಿದ್ದ ರೈತನಿಗೆ ರಾಗಿ ಬಿತ್ತನೆಗೆ ಒಳ್ಳೆಯ ಮಳೆಯಾಗಿತ್ತು. ಪರಿಣಾಮ ಹುಳಿಯಾರು ಮತ್ತು ಹಂದನಕೆರೆ ಹೋಬಳಿಯ ಬಹುತೇಕ ರೈತರು ರಾಗಿ ಬಿತ್ತಿದ್ದರು. ನಂತರದ ದಿನಗಳಲ್ಲೂ ಆಗಾಗ ಮಳೆ ಬಿದ್ದ ಪರಿಣಾಮ ರಾಗಿ ರೈತನ ಕೈ ಹಿಡಿಯುವ ಭರವಸೆ ಮೂಡಿಸಿತ್ತು. ಸಾಲ ಸೋಲ ಮಾಡಿ ಸರದಿಯಲ್ಲಿ ನಿಂತು ಕಿತ್ತಾಡಿ ಗೊಬ್ಬರ ತಂದು ಉತ್ತಮ ಇಳುವರಿ ಎದುರು ನೋಡುತ್ತಿದ್ದ. ರಾಗಿಯೂ ಉತ್ತಮ ಫಸಲು ಬಂದೇ ಬರುವ ಲಕ್ಷಣದಂತೆ ಎತ್ತ ನೋಡಿದರೂ ಹುಲುಸಾಗಿ ಬೆಳೆದಿತ್ತು. ಈ ಬಾರಿ ರಾಗಿ ರೈತನ ಕೈ ಹಿಡಿಯುತ್ತದೆ ಎನ್ನುವಷ್ಟರಲ್ಲಿ ಹುಳುಗಳ ಕಾಟ ಆರಂಭವಾಗಿ ಗಾಯದ ಮೇಲೆ ಬರೆಹಾಕಿದಂತಾಗಿದೆ.

ರಾಗಿ ಪೈರಿನಲ್ಲಿ ಶಕ್ತಿ ಕುಂಠಿತ: ಗಾಣಧಾಳು ಗ್ರಾಪಂ ವ್ಯಾಪ್ತಿಯ ಕುರಿಹಟ್ಟಿ ಭಾಗದ ರಾಗಿ ಬೆಳೆಗೆ ಹಸಿರು ಹುಳು ಕಾಟ ಹೆಚ್ಚಾಗಿ ಕಂಡು ಬಂದಿದೆ. ರಾಗಿ ಬೆಳೆಯಲ್ಲಿ ಕಾಣಿಸಿದ್ದ ಈ ಹುಳು ಕಾಂಡದಿಂದ ಗರಿ ತಿನ್ನುತ್ತ ಬರುತ್ತಿದೆ. ಪರಿಣಾಮ ಗರಿಗಳು ತುಂಡಾಗಿ ಬಿದ್ದು, ರಾಗಿ ಪೈರಿನಲ್ಲಿ ಶಕ್ತಿ ಕುಂಠಿತವಾಗುತ್ತಿದೆ. ಹೀಗೆ ಹುಲ್ಲಿನ ಪ್ರಮಾಣ ಕಡಿಮೆಯಾಗಿ ತೆನೆ ನಿರೀಕ್ಷಿತ ಪ್ರಮಾಣದಲ್ಲಿ ಕಾಳು ಕಟ್ಟದೆ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಇಷ್ಟಲ್ಲದೆ ಹೊಲದಿಂದ ಹೊಲಕ್ಕೆ ಇವುಗಳ ಹಾವಳಿ ಹೆಚ್ಚಾಗುತ್ತಿದೆ. ಈ ಭಾಗದಲ್ಲಿ ಬಿತ್ತಿರುವ ನೂರಾರು ಹೆಕ್ಟೇರ್‌ ಪ್ರದೇಶಕ್ಕೆ ಹರಡುವ ಆತಂಕವೂ ರೈತರಲ್ಲಿದೆ. ಈ ಹುಳುಗಳು ರಾತ್ರಿ ಸಮಯದಲ್ಲಿ ಮಾತ್ರ ರಾಗಿ ಗರಿ ತಿನ್ನುತ್ತಿದ್ದು, ಹಗಲಿನಲ್ಲಿ ಹುಳುಗಳು ಕಾಣುವುದಿಲ್ಲ. ಹಾಗಾಗಿ ಇವುಗಳ ಹತೋಟಿ ಕ್ರಮ ತಿಳಿಯದೆ ರೈತ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ.

ಹತೋಟಿ ಕ್ರಮ ಗೊತ್ತಿಲ್ಲ!: ರಾಗಿ ಬೆಳೆ ಬೆಳೆಯುವುದು ನಮಗೇನು ಹೊಸದೇನಲ್ಲ. ಸುಮಾರು ವರ್ಷಗಳಿಂದ ರಾಗಿ ಬೆಳೆಯುತ್ತಿದ್ದು, ಇದುವರೆಗೆ ರಾಗಿ ಬೆಳೆಗೆ ಯಾವುದೇ ಕೀಟಗಳು ಹಾಗೂ ರೋಗಗಳು ಬಂದಿರಲಿಲ್ಲ, ಔಷಧ ಸಿಂಪಡಿಸುತ್ತಿರಲಿಲ್ಲ. ಇದೇ ಮೊದಲ ಬಾರಿಗೆ ನಮ್ಮ ಭಾಗದಲ್ಲಿ ರಾಗಿಗೆ ಹುಳುಗಳ ಕಾಟ ಶುರುವಾಗಿದ್ದು, ಹತೋಟಿ ಕ್ರಮ ತಿಳಿಯದಾಗಿದ್ದು, ಕೃಷಿ ಅಧಿಕಾರಿಗಳು ಇತ್ತ ಭೇಟಿ ನೀಡಿ ಔಷಧೋಪಚಾರದ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಕುರಿಹಟ್ಟಿ ರಾಗಿ ಬೆಳೆಗಾರ ಲಕ್ಷ್ಮೀ ಕಾಂತ್‌ ಹೇಳಿದ್ದಾರೆ.

 

-ಎಚ್‌.ಬಿ. ಕಿರಣ್‌ ಕುಮಾರ್‌

ಟಾಪ್ ನ್ಯೂಸ್

Sam Sung Galaxy M52 5G: Slim and Power Full – tech

ಸ್ಯಾಮ್‍ ಸಂಗ್‍ ಗೆಲಾಕ್ಸಿ ಎಂ52 5ಜಿ: ಸ್ಲಿಮ್‍ ಮತ್ತು ಪವರ್ ಫುಲ್‍

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿಪಟೂರು: ಬಳುವನೇರಲು ಗೇಟ್ ಬಳಿ ಬೈಕಿಗೆ ಜೀಪು ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಳುವನೇರಲು ಗೇಟ್ ಬಳಿ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು ;ಗ್ರಾಮಸ್ಥರ ಪ್ರತಿಭಟನೆ

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

ಪಾಲಿಕೆಗೆ ಬರಬೇಕಿದೆ 18.81 ಕೋಟಿ ನೀರಿನ ಕರ „ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡರೆ ಎಲ್ಲರ ಮನೆಗೂ ನೀರು

ತುಮಕೂರಲ್ಲಿ 15 ಸಾವಿರಕ್ಕೂ ಹೆಚ್ಚು ಅಕ್ರಮ ನಲ್ಲಿ

ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂಬ ಹೇಳಿಕೆ ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಾಗಿದೆ: ಸುರೇಶ್‌ಗೌಡ ವಾಗ್ದಾಳಿ

ನೀರಾವರಿ ಯೋಜನೆಗೆ ಗೌರಿಶಂಕರ್‌ ಅಡ್ಡಗಾಲು

MUST WATCH

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

ಹೊಸ ಸೇರ್ಪಡೆ

22film

ವರ್ಷಾಂತ್ಯಕ್ಕೆ ಮದುವೆಯಾಗಲಿದ್ದಾರಾ ಕತ್ರಿನಾ ಕೈಫ್, ವಿಕ್ಕಿ ಕೌಶಲ್?!

Sam Sung Galaxy M52 5G: Slim and Power Full – tech

ಸ್ಯಾಮ್‍ ಸಂಗ್‍ ಗೆಲಾಕ್ಸಿ ಎಂ52 5ಜಿ: ಸ್ಲಿಮ್‍ ಮತ್ತು ಪವರ್ ಫುಲ್‍

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಶಾಲೆ, ಟೀಸಿ, TC, udayavanipaper, kannadanews,

ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.