ಕೇಂದ್ರ ಸರ್ಕಾರದ್ದು ಜನವಿರೋಧಿ ನೀತಿ

Team Udayavani, Apr 24, 2022, 3:50 PM IST

23bptph-2-2304bg-2

ಕುಣಿಗಲ್‌: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲೂಕು ಯುವ ಕಾಂಗ್ರೆಸ್‌ನಿಂದ ಪಟ್ಟಣದಲ್ಲಿ ಎತ್ತಿನಗಾಡಿ ಜಾಥಾ ನಡೆಸಿದರು.

ಜನಸಾಮಾನ್ಯರ ಮೇಲೆ ಬಿಜೆಪಿ ಸರ್ಕಾರ ಬೆಲೆ ಏರಿಕೆ ಹೇರಿ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಕೂಡಲೇ ದರಗಳನ್ನು ಇಳಿಸುವಂತೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶಾಸಕ ಡಾ.ಎಚ್‌.ಡಿ.ರಂಗನಾಥ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌.ಲೋಹಿತ್‌, ಟೌನ್‌ ಅಧ್ಯಕ್ಷ ಕೆ.ಆರ್‌.ಮಾರುತಿ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಎನ್‌.ಹುಚ್ಚಮಾಸ್ತಿ ಗೌಡ ಸರ್ಕಲ್‌ ವರೆಗೆ ಎತ್ತಿನಗಾಡಿ ಮೂಲಕ ಪ್ರತಿಭಟನೆ ನಡೆಸಿ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧಿಕ್ಕಾರ ಕೂಗಿ ಖಾಲಿ ಸಿಲಿಂಡರ್‌, ಬೈಕ್‌ ಅಣಕು ಶವಯಾತ್ರೆ ಮಾಡಿದರು.

ಬಿಜೆಪಿ ವಿರುದ್ಧ ಕಿಡಿ: ಶಾಸಕ ಡಾ.ಎಚ್‌.ಡಿ. ರಂಗನಾಥ್‌ ಮಾತನಾಡಿ, ಕಾಂಗ್ರೆಸ್‌ ತನ್ನ 56 ವರ್ಷದ ಅಧಿಕಾರದ ಆಡಳಿತ ಅವಧಿಯಲ್ಲಿ ಬಡತನ ನಿರ್ಮೂಲನೆ, ನೀರಾವರಿ, ವಿದ್ಯುತ್‌, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ, ಬಾಹ್ಯಕಾಶದಲ್ಲಿ ಸಾಧನೆ, ಆಹಾರ ಭದ್ರತೆ, ದೇಶದ ಭದ್ರತೆ, ರಸ್ತೆ ಅಭಿವೃದ್ಧಿ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿ ವಿಶ್ವದಲ್ಲಿಯೇ ಗಮನ ಸೆಳೆದಿದೆ. ಆದರೆ, ಬಿಜೆಪಿ ಕಾಂಗ್ರೆಸ್‌ ಸೇವೆ ಶೂನ್ಯವೆಂದು ಟೀಕೆ ಮಾಡುತ್ತಿದೆ ಎಂದು ದೂರಿದರು.

ಅಶಾಂತಿಗೆ ಕಾರಣ: ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌.ಲೋಹಿತ್‌ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದನ್ನು ಮರೆ ಮಾಚಲು ವಿವಾದಗಳನ್ನು ಸೃಷ್ಟಿಸಿ ಹಿಂದೂ, ಮುಸ್ಲಿಮರ ಮಧ್ಯೆ ಧರ್ಮದ ವಿಷ ಬೀಜ ಬಿತ್ತಿ ರಾಜ್ಯದ ಅಶಾಂತಿಗೆ ಕಾರಣ ವಾಗಿದೆ ಎಂದು ಸರ್ಕಾರದ ವಿರುದ್ಧ ಹರಿದಾಯ್ದರು.

ಯುವ ಕಾಂಗ್ರೆಸ್‌ ಟೌನ್‌ ಅಧ್ಯಕ್ಷ ಕೆ.ಆರ್‌. ಮಾರುತಿ ಮಾತನಾಡಿ, ಡಾ.ಮನಮೋಹನ್‌ ಸಿಂಗ್‌ ಆಡಳಿತ ಅವಧಿಯಲ್ಲಿ 350 ರಿಂದ 400 ರೂ.ಗೆ ಸಿಲಿಂಡರ್‌ ಒಂದಕ್ಕೆ ನೀಡುವುದರ ಜತೆಗೆ ಸಹಾಯಧನ ನೀಡಲಾಗುತ್ತಿತ್ತು. ಪೆಟ್ರೋಲ್‌ ಲೀ.ಗೆ 60 ರೂ. ಡೀಸೆಲ್‌ 42 ರೂ. ದರ ಇತ್ತು. ದರ ಹೆಚ್ಚಳವಾಗಿದೆ ಎಂದು ಬಿಜೆಪಿ ಮುಖಂಡರು ದೇಶಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಆದರೆ ಈಗ ಪ್ರಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೇರಿದೆ ಎಂದು ಲೇವಡಿ ಮಾಡಿದರು. ಪ್ರತಿಭಟನೆಯಲ್ಲಿ ಹುಲಿಯೂರುದುರ್ಗ ಯುವ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌, ನಿಶಾಂತ್‌, ಮಹೇಂದ್ರ, ಅರುಣ್‌, ಹನುಮಂತು, ವಿಜಿ, ಹರೀಶ್‌, ಜೀವನ್‌, ಸಂತೋಷ್‌ ಭಾಗವಹಿಸಿದ್ದರು.

ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿ ಹಂಚಿಗೆ ತಲುಪಿದೆ. ದೇಶದ ಇತಿ ಹಾಸದಲ್ಲೇ ಎಂದೂ ಕಂಡರಿಯ ದಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನರ ಬದುಕನ್ನು ಬೀದಿಗೆ ತಳ್ಳಿದೆ.ಡಾ.ಎಚ್‌.ಡಿ.ರಂಗನಾಥ್‌, ಶಾಸಕ

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.