ಉಡುಪಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ 10 ವರ್ಷ ಜೈಲು

Team Udayavani, Nov 18, 2022, 6:45 AM IST

ಉಡುಪಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ 10 ವರ್ಷ ಜೈಲು

ಉಡುಪಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕೊÕ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆದೇಶಿಸಿದ್ದು, ಅಪರಾಧಿಗೆ 10 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಕುಂದಾಪುರದ ಅಮಾಸೆಬೈಲು ನಿವಾಸಿ ಸುರೇಶ್‌ ಕೊಠಾರಿ ಎಂಬಾತ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದು ಈತ ಶಾಲೆಯೊಂದರ ಬಸ್‌ ಚಾಲಕನಾಗಿದ್ದ.

ಘಟನೆ ವಿವರ: ತಾನು ಕೆಲಸ ಮಾಡುತ್ತಿದ್ದ ಶಾಲಾ ಬಸ್‌ನಲ್ಲಿ ಆಯಾ ವೃತ್ತಿ ಮಾಡುತ್ತಿದ್ದ 17 ವರ್ಷದ ಅಪ್ತಾಪ್ತೆಯನ್ನು ದುರ್ಬಳಕೆ ಮಾಡಿಕೊಂಡ ಆರೋಪಿಯು ಆಕೆ ಮೊಬೈಲ್‌ ನಂಬರ್‌ ಪಡೆದುಕೊಂಡಿದ್ದ. ಘಟನೆ ದಿನ ಶಾಲಾ ಮಕ್ಕಳನ್ನು ಬಿಟ್ಟ ಬಳಿಕ ಆಕೆಯಲ್ಲಿ ಮಾತನಾಡಲು ಇದೆಯೆಂದು ಹೇಳಿ ಬೈಕಿನಲ್ಲಿ ಕಾಡು ಪ್ರದೇಶಕ್ಕೆ ಕರೆದೊಯ್ದು ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದು ಅನಂತರದ ದಿನಗಳಲ್ಲಿಯೂ ಆಕೆ ಇಚ್ಛೆಗೆ ವಿರುದ್ಧ ದೌರ್ಜನ್ಯವೆಸಗಿದ್ದ. ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿದ್ದು ತನ್ನ ಮನೆಯ ಬಚ್ಚಲು ಕೋಣೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ತದನಂತರ ಆಕೆ, ಮಗುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ನೊಂದ ಬಾಲಕಿ ತಾಯಿ ನೀಡಿದ ದೂರಿನ ಅನ್ವಯ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅನಂತರ ಆರೋಪಿಯನ್ನು ಬಂಧಿಸಲಾಗಿದ್ದು ಆತ ನ್ಯಾಯಾಲಯದಿಂದ ಜಾಮೀನು ಕೂಡ ಪಡೆದಿದ್ದ.

ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್‌. ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣೆ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆ ನಡೆದಿತ್ತು. ನೊಂದ ಬಾಲಕಿ ಸಾಕ್ಷಿ, ಪ್ರಕರಣಕ್ಕೆ ಸಂಬಂಧಿಸಿದ ಪೂರಕ ಸಾಕ್ಷಿಗಳ ಸಹಿತ ಡಿಎನ್‌ಎ ವರದಿಯು ಆರೋಪಿ ಸುರೇಶ್‌ ದೋಷಿ ಎಂಬುದನ್ನು ಸಾಭೀತುಪಡಿಸುವಲ್ಲಿ ಅಭಿಯೋಜನೆಗೆ ಸಹಕಾರಿಯಾಗಿತ್ತು.

ಪ್ರಾಸಿಕ್ಯೂಶನ್‌ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.

ಶಿಕ್ಷೆ ಪ್ರಮಾಣ..

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಕಠಿಣ ಜೈಲು, 10 ಸಾವಿರ ದಂಡ, ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೊ ಕಾಯ್ದೆಯಡಿ 10 ವರ್ಷ ಜೈಲು (ಎರಡು ಜೈಲು ಶಿಕ್ಷೆ ಏಕಕಾಲಕ್ಕೆ ಅನುಭವಿಸಲು ಆದೇಶ), 10 ಸಾವಿರ ದಂಡ. ದಂಡ ತೆರಲು ತಪ್ಪಿದಲ್ಲಿ 1 ವರ್ಷ ಹೆಚ್ಚುವರಿ ಶಿಕ್ಷೆ, ಸಂತ್ರಸ್ತೆಗೆ 1 ಲಕ್ಷ ಹಣ ಪರಿಹಾರ ನೀಡಲು ಸರ್ಕಾರಕ್ಕೆ ಆದೇಶಿಸಿದ ನ್ಯಾಯಾಲಯವು ಆರೋಪಿಗೆ ವಿಧಿಸಿದ 20 ಸಾವಿರ ದಂಡದಲ್ಲಿ ಸಂತ್ರಸ್ತೆಗೆ 15 ಸಾವಿರ ಹಾಗೂ 5 ಸಾವಿರ ಹಣ ಸರ್ಕಾರಕ್ಕೆ ಪಾವತಿಸಲು ಆದೇಶಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.