ನಂದಳಿಕೆ ಶಾಲೆಗೆ ದಾಖಲಾದರೆ 1,000 ರೂ. ಕೊಡುಗೆ

ಸರಕಾರಿ ಶಾಲೆ ಉಳಿಸಲು ಹಿರಿಯ ವಿದ್ಯಾರ್ಥಿಗಳ ಪ್ರಯತ್ನ

Team Udayavani, Apr 28, 2022, 12:09 PM IST

nandalike

ಬೆಳ್ಮಣ್‌: ಕನ್ನಡ ಮಾಧ್ಯಮ ಶಾಲೆಗಳು ಅದರಲ್ಲೂ ಸರಕಾರಿ ಶಾಲೆಗಳು ವಿವಿಧ ಕಾರಣಗಳಿಂದ ಅವನತಿಯತ್ತ ಸಾಗುತ್ತಿರುವಾಗ ನಂದಳಿಕೆ ಸರಕಾರಿ ಶಾಲೆಯ ಹಿರಿಯ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳ ದಾಖಲಾತಿಗೆ ನೂತನ ಕೊಡುಗೆ ಘೋಷಿಸಿದ್ದಾರೆ. ಶಾಲೆಗೆ ನೂತನವಾಗಿ ದಾಖಲಾಗುವ ವಿದ್ಯಾರ್ಥಿ ಗಳಿಗೆ 1,000 ರೂ.ನ ಹೊಸ ಆಫರ್‌ ಘೋಷಿಸಿ ಶೈಕ್ಷಣಿಕ ಕಾಳಜಿ ಮೆರೆದಿದ್ದಾರೆ.

ಒಂದೆಡೆ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳ ಪ್ರಭಾವ ಹಾಗೂ ವಿವಿಧ ಕಾರಣಗಳಿಂದ ನೇಪಥ್ಯಕ್ಕೆ ಸರಿಯುತ್ತಿರುವ ಕನ್ನಡ ಮಾಧ್ಯಮದ ಸರಕಾರಿ ಶಾಲೆಯನ್ನು ಉಳಿಸಲು ನಂದಳಿಕೆಯಲ್ಲಿ ಈ ವಿನೂತನ ಯೋಜನೆಯ ಮೂಲಕ ಮಕ್ಕಳನ್ನು ಸರಕಾರಿ ಶಾಲೆಯತ್ತ ಸೆಳೆಯಲು ವಿಶೇಷ ಪ್ರಯತ್ನ ನಡೆಯುತ್ತಿದೆ.

ಶತಮಾನದ ಹೊಸ್ತಿಲಲ್ಲಿರುವ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಏಕೈಕ ಕನ್ನಡ ಸರಕಾರಿ ಶಾಲೆಯನ್ನು ಉಳಿಸಲು ಇಲ್ಲಿನ ಹಳೆ ವಿದ್ಯಾರ್ಥಿಗಳಿಂದ ವಿಶೇಷ ಯೋಜನೆ ರೂಪಿಸಲಾಗಿದ್ದು. ಮುಂದಿನ ಶೆ„ಕ್ಷಣಿಕ ವರ್ಷದಿಂದ ನಂದಳಿಕೆ ಸರಕಾರಿ ಪ್ರಾಥಮಿಕ ಶಾಲೆಗೆ ಸೇರ್ಪಡೆಗೊಳ್ಳಲಿರುವ ವಿದ್ಯಾರ್ಥಿಗಳಿಗೆ ತಲಾ 1,000 ರೂ. ನೀಡುವುದಾಗಿ ಘೋಷಿಸಿದೆ. ಈ ಮೂಲಕ ಸರಕಾರಿ ಶಾಲೆಯತ್ತ ಮಕ್ಕಳನ್ನು ಸೆಳೆಯಲು ವಿಶೇಷ ಪ್ರಯತ್ನ ನಡೆಯುತ್ತಿದೆ. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಾಲಚಂದ್ರ ಶೆಟ್ಟಿ ಈ ವಿಶೇಷ ಕೊಡುಗೆ ಘೋಷಣೆ ಮಾಡಿದ್ದು ಸಂಘ ಈ ಪರಿಕಲ್ಪನೆಗೆ ಕೈ ಜೋಡಿಸಿದೆ.

ವಿದ್ಯಾರ್ಥಿಗಳಿಗೆ ಬಸ್‌ ಸೌಕರ್ಯ

ಕಳೆದ 5 ವರ್ಷಗಳಿಂದ ಈ ಶಾಲೆಗೆ ಬರುವ ವಿದ್ಯಾರ್ಥಿಗಳಿಗಾಗಿ ಬಸ್‌ ವ್ಯವಸ್ಥೆಯನ್ನು ಹಳೆ ವಿದ್ಯಾರ್ಥಿ ಸಂಘದಿಂದ ಮಾಡಲಾಗಿದ್ದು ಈ ಯೋಜನೆ ಈ ವರ್ಷವೂ ಮುಂದುವರಿಯುತ್ತಿದೆ. ಶತಮಾನ ಕಾಣುತ್ತಿರುವ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಹಾಗೂ ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತೀ ಬಾರಿಯೂ ವಿಶೇಷ ಯೋಜನೆ ರೂಪಿಸುತ್ತಿದೆ.

ಗ್ರಾಮದ ಏಕೈಕ ಕನ್ನಡ ಶಾಲೆ

ಇಲ್ಲಿನ ಪ್ರಾಥಮಿಕ ಶಾಲೆ (ಬೋರ್ಡ್‌ ಶಾಲೆ) ನಂದಳಿಕೆ ಗ್ರಾಮದಲ್ಲಿರುವ ಏಕೈಕ ಸರಕಾರಿ ಕನ್ನಡ ಶಾಲೆಯಾಗಿದ್ದು ಇಲ್ಲಿ ಕಲಿತ ವಿದ್ಯಾರ್ಥಿಗಳು ಇದೀಗ ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ ಅಲ್ಲದೆ ಸರಕಾರಿ ಸೇವೆಯಲ್ಲಿಯೂ ಇದ್ದಾರೆ. ಉತ್ತಮ ಶಿಕ್ಷಕರ ತಂಡವನ್ನು ಹೊಂದಿರುವ ಗ್ರಾಮದ ಏಕೈಕ ಶಾಲೆಯನ್ನು ಉಳಿಸಲು ಇದೀಗ ಹಳೆ ವಿದ್ಯಾರ್ಥಿಗಳು ಶ್ರಮಿಸುತ್ತಿದ್ದು ಪ್ರಸ್ತುತ ವರ್ಷದಲ್ಲಿ ಈ ಶಾಲೆ ಶತಮಾನೋತ್ಸವದ ಸಂಭ್ರಮದಲ್ಲಿದೆ.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.