12 ಕೋ.ರೂ. ಅನುದಾನ: ಸಚಿವ ಸಂಪುಟ ಅನುಮೋದನೆ

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ದುರಸ್ತಿ

Team Udayavani, Feb 20, 2020, 5:35 AM IST

1702KDPP14

ಕುಂದಾಪುರ: ಗಂಗೊಳ್ಳಿಯ ಮೀನುಗಾರಿಕಾ ಬಂದರಿನ 2ನೇ ಹರಾಜು ಪ್ರಾಂಗಣದ ಜೆಟ್ಟಿ ಪುನರ್‌ ನಿರ್ಮಾಣ ಕಾಮಗಾರಿಗೆ 12 ಕೋ.ರೂ. ಗಳ ಅನುದಾನ ಮಂಜೂರಾತಿಗೆ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೀನುಗಾರರ ಬಹು ಸಮಯದ ಬೇಡಿಕೆ ಈಡೇರಿಕೆಗೆ ಅನುದಾನ ಮಂಜೂರಾಗಿದೆ. ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಕುಸಿದ ಜೆಟ್ಟಿಯ ಪುನರ್‌ ನಿರ್ಮಾಣಕ್ಕೆ ಮುಖ್ಯಮಂತ್ರಿ, ಸಚಿವರು, ಸಂಸದರ ಸಹಿತ ಸಂಬಂಧಪಟ್ಟ ಎಲ್ಲರಿಗೂ ಹೆಚ್ಚುವರಿ ಅನುದಾನಕ್ಕಾಗಿ ಮನವಿ ಮಾಡಿಕೊಂಡಿದ್ದರು.

ಜೆಟ್ಟಿ ಕುಸಿದಿದ್ದರಿಂದ ಮೀನುಗಾರರಿಗೆ ಬೋಟ್‌, ದೋಣಿಗಳನ್ನು ನಿಲ್ಲಿಸಲು ನಿತ್ಯ ಸಮಸ್ಯೆಯಾಗುತ್ತಿದೆ. ಗಂಗೊಳ್ಳಿ ಬಂದರಿನಲ್ಲಿ 300ಕ್ಕೂ ಅಧಿಕ ಪರ್ಸಿನ್‌ ಬೋಟುಗಳು, 600ಕ್ಕೂ ಮಿಕ್ಕಿ ಮೀನುಗಾರಿಕಾ ಬೋಟು ಹಾಗೂ 500ಕ್ಕೂ ಅಧಿಕ ನಾಡದೋಣಿಗಳಿದ್ದು, ಸಾವಿರಾರು ಮಂದಿ ಮೀನುಗಾರಿಕಾ ವೃತ್ತಿಯನ್ನೇ ಅವಲಂಬಿಸಿದ್ದಾರೆ. ಕಳೆದ ವರ್ಷ ಇಲ್ಲಿನ ಬಂದರಿನ ಜೆಟ್ಟಿಯ ಸ್ಲಾ$Âಬ್‌ ಕುಸಿದಿತ್ತು. ಆ ಕಾರಣಕ್ಕೆ ಇಡೀ ಕಟ್ಟಡವೇ ಕುಸಿಯುವ ಭೀತಿಯಿಂದ ಎರಡನೇ ಹರಾಜು ಪ್ರಾಂಗಣದ ವಠಾರದಲ್ಲಿ ಮೀನುಗಾರಿಕಾ ಚಟುವಟಿಕೆ ಹಾಗೂ ಜನಸಂಚಾರ ನಿರ್ಬಂಧಿಸಲಾಗಿದೆ.

ಉದಯವಾಣಿಯು ಈ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿ ಸರಕಾರದ ಗಮನ ಸೆಳೆದಿತ್ತು.

ಶೀಘ್ರ ಕಾಮಗಾರಿ
ಜಿಲ್ಲೆಯ ಪ್ರಮುಖ ಮೀನುಗಾರಿಕಾ ನೆಲೆಯಾದ ಗಂಗೊಳ್ಳಿಯಲ್ಲಿ ಈ ಹಿಂದೆ ನಡೆದ ಕಳಪೆ ಕಾಮಗಾರಿಯಿಂದಾಗಿ ಈ ಬಂದರಿನಲ್ಲಿ ಮೀನುಗಾರರು ಸಂಕಷ್ಟಪಡುವಂತಾಗಿದೆ. ದುರಸ್ತಿಗೆ 8 ಕೋ.ರೂ. ಮಂಜೂರಾಗಿದ್ದರೂ, ಇದರಿಂದ ಪ್ರಯೋಜನ ವಾಗುವುದಿಲ್ಲವೆಂದು ಪುನರ್‌ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನಕ್ಕೆ ಅಂದಾಜು ಪಟ್ಟಿ ತಯಾರಿಸಿ, ಬೇಡಿಕೆ ಸಲ್ಲಿಸಲಾಗಿತ್ತು. ಮೀನುಗಾರರ ಬಹುದಿನ ಬೇಡಿಕೆ ಈಡೇರಿಸಿದ ಸಿಎಂ ಬಿಎಸ್‌ವೈ, ಪೂರಕವಾಗಿ ಸ್ಪಂದಿಸಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೃತಜ್ಞತೆಗಳು. ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು.
– ಬಿ.ಎಂ. ಸುಕುಮಾರ್‌ ಶೆಟ್ಟಿ,
ಬೈಂದೂರು ಶಾಸಕರು

ಶಾಸಕರಿಗೆ ಶ್ಲಾಘನೆ
ಕಳೆದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಸಮಸ್ಯೆಯನ್ನು ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿಯವರು ಶಾಸಕರಾಗಿ ಆಯ್ಕೆಯಾದ ಕೆಲವೇ ದಿನಗಳಲ್ಲಿ ಈಡೇರಿಸುವುದಾಗಿ ಆಶ್ವಾಸನೆ ನೀಡಿದ್ದರು. ಅನಂತರ ನಿರಂತರವಾಗಿ ಈ ಬಗ್ಗೆ ಪ್ರಯತ್ನಿಸಿದ ಶಾಸಕರು, ಕಳೆದ ಸರಕಾರದ ಅವಧಿಯಲ್ಲಿ ಸಚಿವ ನಾಡಗೌಡರಿಗೂ ಕೂಡ ಮನವಿ ಸಲ್ಲಿಸಿದ್ದರು. ಈಗ ಪುನರ್‌ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸುವಲ್ಲಿ ಶ್ರಮಿಸಿದ ಶಾಸಕರಿಗೆ ಗಂಗೊಳ್ಳಿಯ ಮೀನುಗಾರರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.