ಯಡಮೊಗೆ ಸಂಪರ್ಕ ಸೇತುವೆ ಕಾಮಗಾರಿಗೆ ಗುದ್ದಲಿಪೂಜೆ

2.5 ಕೋ.ರೂ. ವೆಚ್ಚದಲ್ಲಿ ಸೇತುವೆ ಮರು ನಿರ್ಮಾಣ, ರಸ್ತೆ ಅಭಿವೃದ್ಧಿ

Team Udayavani, Jan 23, 2020, 12:32 AM IST

2201KDPP11

ಹೊಸಂಗಡಿ: ಯಡಮೊಗೆಯಿಂದ ಹೊಸಂಗಡಿ, ಸಿದ್ದಾಪುರ, ಕುಂದಾಪುರ ಕಡೆಗೆ ಸಂಪರ್ಕ ಕಲ್ಪಿಸುವ ಹೊಸಬಾಳು ಸೇತುವೆ ಸಂಪೂರ್ಣ ಶಿಥಿಲಗೊಂಡಿದ್ದು, ಸೇತುವೆ ಮರು ನಿರ್ಮಾಣ ಹಾಗೂ ರಸ್ತೆಗೆ 2.5 ಕೋ.ರೂ. ಅನುದಾನ ಮಂಜೂರಾಗಿದ್ದು, ಬುಧವಾರ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು, ಲೋಕೋಪಯೋಗಿ ಇಲಾಖೆಯ ಅಂದಾಜು 2.5 ಕೋಟಿ ಅನುದಾ ನದಲ್ಲಿ ಬಹುಬೇಡಿಕೆಯ ಈ ಸೇತುವೆ ಹಾಗೂ ಹೊಸಂಗಡಿಯಿಂದ ಯಡಮೊಗೆಗೆ ಸಂಪರ್ಕಿಸುವ ಒಂದೂವರೆ ಕಿಲೋಮೀಟರ್‌ ರಸ್ತೆ ಕಾಮಗಾರಿಯೂ ನಡೆಯಲಿದೆ. ಕಳೆದ ಬಾರಿ ಚುನಾವಣೆ ಸಂದರ್ಭ ಇಲ್ಲಿಗೆ ಸೇತುವೆ ಹಾಗೂ ರಸ್ತೆ ನಿರ್ಮಾಣದ ಆಶ್ವಾಸನೆ ನೀಡಿದ್ದು, ಅದರಂತೆಯೇ ಆದ್ಯತೆ ಮೇರೆಗೆ ಇಲ್ಲಿನ ಅಭಿವೃದ್ಧಿ ಕಾರ್ಯಕ್ಕೆ ಕಾಯಕಲ್ಪ ಒದಗಿಸಲಾಗಿದೆ. ಯಡಮೊಗೆಯು ಗ್ರಾಮೀಣ ಭಾಗವಾಗಿದ್ದು ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವಂತಾಗಬೇಕು ಈ ಮೂಲಕ ಊರಿನ ಸರ್ವತೋಮುಖ ಬೆಳವಣಿಗೆಗೆ ತಮ್ಮದೇ ಕೊಡುಗೆ ನೀಡಬೇಕು ಎಂದವರು ತಿಳಿಸಿದರು.

ಬಹು ದಿನದ ಬೇಡಿಕೆ
ಹೊಸಬಾಳು ಬಳಿ ಕುಬಾj ನದಿಗೆ 40 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆ ಶಿಥಿಲಗೊಂಡು 2 ವರ್ಷಕ್ಕೂ ಹೆಚ್ಚು ಕಾಲವಾಗಿದೆ. ಇದಲ್ಲದೆ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿ, 2018 ರಲ್ಲಿ ಪರ್ಯಾಯವಾಗಿ ತಾತ್ಕಲಿಕವಾಗಿ ಮೋರಿ ನಿರ್ಮಿಸಲಾಗಿತ್ತು. ಅದು ಕೂಡ ಮಳೆಗಾಲದಲ್ಲಿ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿತ್ತು. ಯಡಮೊಗೆಯಿಂದ ಹೊಸಂಗಡಿ ಸಂಪರ್ಕಿಸುವ ಈ ಸೇತುವೆಯನ್ನು ಮರು ನಿರ್ಮಾಣ ಮಾಡಬೇಕು ಎನ್ನುವ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು.

ಉದಯವಾಣಿ ವರದಿ
ಯಡಮೊಗೆ – ಹೊಸಂಗಡಿ ಸಂಪರ್ಕಿಸುವ ಹೊಸಬಾಳು ಸೇತುವೆ ಶಿಥಿಲಗೊಂಡ ಬಗ್ಗೆ “ಉದಯವಾಣಿ’ಯು 2018 ರ ಜೂ.10 ರಂದು ಮೊದಲ ಬಾರಿಗೆ ವಿಶೇಷ ವರದಿ ಪ್ರಕಟಿಸಿ ಗಮನಸೆಳೆದಿತ್ತು. ಆ ಬಳಿಕವು ಅನೇಕ ಬಾರಿ ಸೇತುವೆ ದುರಸ್ತಿಗೆ ಅನುದಾನ ಬಿಡುಗಡೆಗೊಳ್ಳದ ಕುರಿತು ಕೂಡ ವಿಶೇಷ ಪ್ರಕಟಿಸಿತ್ತು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ರೋಹಿತ್‌ ಕುಮಾರ್‌ ಶೆಟ್ಟಿ, ಬಿಜೆಪಿ ಬೈಂದೂರು ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್‌, ಯಡಮೊಗೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸಣ್ಣಮ್ಮ ನಾಯ್ಕ, ಸದಸ್ಯ ಗುಂಡು ಶೆಟ್ಟಿ, ಗುತ್ತಿಗೆದಾರ ಸದಾನಂದ ಶೆಟ್ಟಿ ಕೆದೂರು, ಸ್ಥಳೀಯರಾದ ಸುಬ್ರಹ್ಮಣ್ಯ ಕನ್ನಂತ, ಪ್ರಾಣೇಶ ಯಡಿಯಾಳ, ಲೋಕೋಪ ಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ದುರ್ಗಾ ದಾಸ್‌, ಜೂನಿಯರ್‌ ಇಂಜಿನಿಯರ್‌ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು.

ಶೀಘ್ರ ಪೂರ್ಣ
ಯಡಮೊಗೆ ಜನರಿಗೆ ಅತ್ಯಂತ ಅಗತ್ಯವಿರುವ ಹಿನ್ನೆಲೆಯಲ್ಲಿ 2-3 ತಿಂಗಳೊಳಗೆ ಸೇತುವೆ ಹಾಗೂ ರಸ್ತೆ ಕಾಮಗಾರಿ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಯಡಮೊಗೆ ಸೇತುವೆಯಿಂದ ಕಮಲಶಿಲೆ ರಸ್ತೆ ಸಂಪರ್ಕದ ಸುಮಾರು 5 ಕಿ.ಮಿ ರಸ್ತೆ ಅಭಿವೃದ್ಧಿಗೆ ನಮ್ಮ ಗ್ರಾಮ – ನಮ್ಮ ರಸ್ತೆ ಯೋಜನೆಯಡಿ 5 ಕೋ.ರೂ. ಕೂಡ ಈಗಾಗಲೇ ಅನುದಾನ ಮಂಜೂರಾಗಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸರ್ವ ಸಹಕಾರ ನೀಡುತ್ತಿದ್ದಾರೆ.
– ಬಿ.ಎಂ. ಸುಕುಮಾರ್‌ ಶೆಟ್ಟಿ,ಬೈಂದೂರು ಶಾಸಕರು

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.