Udayavni Special

ಸಂಪರ್ಕ ರಸ್ತೆಯಿಲ್ಲದೆ ಬಳ‌ಕೆಯಾಗದ ಸೇತುವೆ

ಮೂಡುಬೆಟ್ಟು: ಸೇತುವೆ ನಿರ್ಮಾಣಗೊಂಡು 35 ವರ್ಷ

Team Udayavani, Sep 18, 2021, 6:54 AM IST

ಸಂಪರ್ಕ ರಸ್ತೆಯಿಲ್ಲದೆ ಬಳ‌ಕೆಯಾಗದ ಸೇತುವೆ

ಮಲ್ಪೆ: ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಬೆಟ್ಟು ಸಮೀಪ 35 ವರ್ಷಗಳ ಹಿಂದೆ ನಿರ್ಮಾಣಗೊಂಡ ಸೇತುವೆಗೆ ಎರಡೂ ಬದಿಯಲ್ಲಿ ಸಂಪರ್ಕ ರಸ್ತೆಯಿಲ್ಲದೆ ಇನ್ನೂ ಉಪಯೋಗಕ್ಕೆ ಬಾರದೇ ಪಾಳು ಬಿದ್ದ ಸ್ಥಿತಿಯಲ್ಲಿದೆ.

ಮಂಡೆಚಾವಡಿ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಇಂದ್ರಾಣಿ ನದಿಗೆ ಅಡ್ಡಲಾಗಿ ಈ ಸೇತುವೆ ನಿರ್ಮಿಸಲಾಗಿತ್ತು. ಇದು ಗರ್ಡೆ, ಲಕ್ಷ್ಮೀನಗರ ಪ್ರದೇಶಕ್ಕೆ ಪ್ರಮುಖ ಸಂಪರ್ಕದ ಕೊಂಡಿಯಾಗಿತ್ತು. ಸೇತುವೆ ಪಕ್ಕದಲ್ಲಿ ಎರಡು ಕಡೆ ಖಾಸಗಿ ಭೂಮಿ ಇದ್ದುದರಿಂದ ಸ್ಥಳೀಯರ ವಿರೋಧ, ಭೂ ವಿವಾದದ ಹಿನ್ನೆಲೆಯಲ್ಲಿ ಸಂಪರ್ಕ ರಸ್ತೆ ನಿರ್ಮಾಣವಾಗದೆ ಸೇತುವೆ ಬಳಕೆ ಇನ್ನೂ ಸಾಧ್ಯವಾಗಿಲ್ಲ.

ಸುಮಾರು 30 ಮೀ. ಉದ್ದ, 6 ಮೀಟರ್‌ ಅಗಲದ ಈ ಸೇತುವೆಗೆ ಲೋಕೋಪಯೋಗಿ ಇಲಾಖೆಯಿಂದ ಮಂಜೂ ರಾತಿ ದೊರೆತು 1985ರಲ್ಲಿ ಅಂದಿನ ಶಾಸಕಿ ಮನೋರಮಾ ಮಧ್ವರಾಜ್‌ ಅವರಿಂದ ಶಿಲಾನ್ಯಾಸಗೊಂಡು ಸೇತುವೆಯ ಕಾಮಗಾರಿಯೂ ಪೂರ್ಣಗೊಂಡಿತ್ತು. ಆ ಬಳಿಕ ಭೂಮಿಯ ತಕರಾರಿನಿಂದಾಗಿ ಹೊಸ ಸೇತುವೆ ಬಳಕೆ ಯಾಗದೆ ಉಳಿದಿದೆ.

ಸೇತುವೆಯ ಒಂದು ಬದಿಯಲ್ಲಿ ಸುಮಾರು 300 ಮೀ., ಇನ್ನೊಂದು ಬದಿಯಲ್ಲಿ ಅರ್ಧ ಕಿ.ಮೀ. ರಸ್ತೆ ಆಗಬೇಕಿದೆ. ಒಂದು ವೇಳೆ ರಸ್ತೆ ಸಂಪರ್ಕ ಇದ್ದಿದ್ದರೆ ಮೂಡುಬೆಟ್ಟು ಮಾರ್ಗದಿಂದ ಈ ಸೇತುವೆ ಮೂಲಕ ಕೊಡವೂರು, ಸಂತೆಕಟ್ಟೆ, ಕಲ್ಯಾಣಪುರ, ತೆಂಕನಿಡಿಯೂರು ಗ್ರಾಮವನ್ನು ಸುಲಭವಾಗಿ ತಲುಪಬಹುದಾಗಿತ್ತು.

ಇದನ್ನೂ ಓದಿ:ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ : ರಾತ್ರಿ 10ರವರೆಗೆ ಸಂಚರಿಸಲಿದೆ ರೈಲು ಸಂಚಾರ

ಸೇತುವೆ ಬಳಕೆ ವಿಚಾರ ಮುನ್ನೆಲೆಗೆ
ಮೂಡುಬೆಟ್ಟು ವಾರ್ಡ್‌ ಸದಸ್ಯ ಶ್ರೀಶ ಕೊಡವೂರು ಅವರು ಇದೀಗ ಸೇತುವೆಯ ಎರಡೂ ಬದಿ ರಸ್ತೆ ಸಂಪರ್ಕ ಕಲ್ಪಿಸಲು ಮುಂದಾಗಿದ್ದಾರೆ. ಈ ಬಗ್ಗೆ ಶಾಸಕರು, ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಶಾಸಕರು, ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೂಮಿ ತಕರಾರು
ಸೇತುವೆಯ ಎರಡೂ ಬದಿಯಲ್ಲಿರುವುದು ಖಾಸಗಿ ಜಾಗ. ಭೂಮಿ ತಕರಾರಿನಿಂದಾಗಿ ಕಳೆದ 35 ವರ್ಷಗಳಿಂದ ಸಂಪರ್ಕ ರಸ್ತೆಯನ್ನು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಇದೀಗ ಶಾಸಕ ರಘುಪತಿ ಭಟ್‌ ಅವರು ಭೂಮಾಲಕರ ಮನ ಒಲಿಸಿ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ನಡೆಯುತ್ತಿದೆ.
-ಶ್ರೀಶ ಕೊಡವೂರು, ನಗರಸಭೆ ಸದಸ್ಯರು, ಮೂಡುಬೆಟ್ಟು ವಾರ್ಡ್‌

ಭೂಮಿ ತಕರಾರು
ಈಗಾಗಲೇ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದೇªನೆ. ಸೇತುವೆಗೆ ಸಂಪರ್ಕ ಕಲ್ಪಿಸುವ ಹಡಿಲು ಗದ್ದೆಯಲ್ಲಿ ನಾಟಿ ಕಾರ್ಯ ಮಾಡಲಾಗಿದೆ. ಇಲ್ಲಿನ ಭತ್ತದ ಕಟಾವು ಕಾರ್ಯ ಮುಗಿದ ಬಳಿಕ ಸ್ಥಳದ ಮಾಲಕರ ಬಳಿ ಹೋಗಿ ಅವರ ಮನ ಒಲಿಸುವ ಪ್ರಯತ್ನ ಮಾಡಲಾಗುವುದು. ಅವರು ಒಪ್ಪಿಗೆ ಸೂಚಿಸಿದ ಮೇಲೆ ಅವರಿಂದ ಒಪ್ಪಿಗೆ ಪತ್ರ ಪಡೆದು ಮುಂದೆ ಲೋಕೋಪಯೋಗಿ ಇಲಾಖೆ ಅಥವಾ ಬೇರೆ ಯಾವುದಾರರೂ ನಿಧಿಯನ್ನು ಬಳಸಿಕೊಂಡು ಅತೀ ಶೀಘ್ರದಲ್ಲಿ ಸೇತುವೆಯ ಎರಡೂ ಬದಿಯಲ್ಲಿ ರಸ್ತೆಯನ್ನು ನಿರ್ಮಿಸಿ ಸಾರ್ವಜನಿಕರಿಗೆ ಸೇತುವೆ ಬಳಕೆಯಾಗುವಂತೆ ಎಲ್ಲ ರೀತಿಯಲ್ಲಿ ಪ್ರಯತ್ನಿಸಲಾಗುವುದು.
-ಕೆ. ರಘುಪತಿ ಭಟ್‌, ಶಾಸಕರು, ಉಡುಪಿ

ಟಾಪ್ ನ್ಯೂಸ್

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.