Fraud: ಮಲ್ಪೆ; ಲಂಡನಿನ ವೈದ್ಯ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
Team Udayavani, Feb 23, 2024, 7:15 AM IST
ಮಲ್ಪೆ: ತಾನು ಲಂಡನಿನ ವೈದ್ಯ ಎಂಬುದಾಗಿ ನಂಬಿಸಿ ಮಲ್ಪೆಯ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಂಕನಿಡಿಯೂರು ಗ್ರಾಮದ ವಿನೀತಾ (35) ಅವರು ಕಂಪೆನಿಯೊಂದರಲ್ಲಿ ಬಿಸಿನೆಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಜ. 24ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬದಾಗಿ ಪರಿಚಯ ಮಾಡಿಕೊಂಡು ವಾಟ್ಸಾಪ್ ಮೂಲಕ ಚಾಟ್ ಮಾಡುತ್ತಿದ್ದ. ಅನಂತರ ಆತನು ತಾನು ಲಂಡನ್ನಿಂದ ಭಾರತಕ್ಕೆ ಬರುವುದಾಗಿ ಹೇಳಿದ್ದನು. ಫೆ. 16ರಂದು ವಿನೀತಾ ಅವರಿಗೆ ಬೇರೆ ಒಂದು ನಂಬರಿನಿಂದ ಕರೆ ಬಂದಿದ್ದು, ನಿಮ್ಮ ಸ್ನೇಹಿತ ದಿಲ್ಲಿ ವಿಮಾನ ನಿಲ್ದಾಣದಲ್ಲಿ ನಮ್ಮ ಕಸ್ಟಡಿಯಲ್ಲಿದ್ದಾರೆ. ಅವರನ್ನು ಬಿಡುಗಡೆ ಮಾಡಬೇಕಾದರೆ ದಂಡ ಕಟ್ಟಬೇಕಾಗುತ್ತದೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಸರಕಾರದಿಂದ ತಮ್ಮ ಮೇಲೆ ಕಾನೂನು ಕ್ರಮ ಆಗಬಹುದೆಂದು ಹೆದರಿ ವಿನೀತಾ ಅವರು ಹಣವನ್ನು ಪಾವತಿ ಮಾಡಿದರು. ಅವರು ಹೀಗೆ ಫೆ. 16ರಿಂದ 20ರ ವರೆಗೆ ಒಟ್ಟು 4,96,000 ರೂ. ಹಣವನ್ನು ಕೆನರಾ ಬ್ಯಾಂಕ್ ಖಾತೆ ಮತ್ತು ಪೋನ್ಪೇ ಮೂಲಕ ವರ್ಗಾಯಿಸಿ ವಂಚನೆಗೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !