ಆಧಾರ್‌ ಅದಾಲತ್‌: ಮುಗಿಬಿದ್ದ ಜನ


Team Udayavani, Dec 28, 2017, 12:11 PM IST

28-24.jpg

ಉಡುಪಿ: ಆಧಾರ್‌ ಕಾರ್ಡ್‌ ನೋಂದಣಿ ಮತ್ತು ತಿದ್ದುಪಡಿಗಾಗಿ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಡಿ.26ರಂದು ಆರಂಭಿಸಲಾಗಿರುವ “ಆಧಾರ್‌ ಅದಾಲತ್‌’ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಹಲವು ಮಂದಿ ಆಧಾರ್‌ ತಿದ್ದುಪಡಿ, ನೋಂದಣಿ ಮಾಡಿಕೊಳ್ಳಲಾಗದೆ ವಾಪಸಾಗಿದ್ದಾರೆ.

5 ದಿನಗಳ ಕಾಲ ನಡೆಯಲಿರುವ ಈ ಅದಾಲತ್‌ನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಎರಡು ಕಂಪ್ಯೂಟರ್‌ಗಳನ್ನು ಅಳವಡಿಸಿ ದಿನಕ್ಕೆ 70 ಮಂದಿ ನೋಂದಣಿ/ತಿದ್ದುಪಡಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಮೊದಲ ದಿನ ಮತ್ತು ಡಿ.27ರಂದು ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಡಿ.27ರಂದು 300ಕ್ಕೂ ಅಧಿಕ ಮಂದಿ ಆಗಮಿಸಿದ್ದರು. ಕಂಪ್ಯೂಟರ್‌ಗಳ ಸಂಖ್ಯೆಯನ್ನು ನಾಲ್ಕಕ್ಕೆ ಹೆಚ್ಚಿಸಲಾಯಿತಾದರೂ ಆಗಮಿಸಿದವರೆಲ್ಲರಿಗೂ ಅವಕಾಶ ದೊರೆಯಲಿಲ್ಲ. ಹಾಗಾಗಿ ಬಾಕಿ ಉಳಿದವರಿಗೆ ಟೋಕನ್‌
ಸಂಖ್ಯೆ ನೀಡಿ ವಾಪಸ್ಸು ಕಳುಹಿಸಲಾಯಿತು.

ತಾಂತ್ರಿಕ ತೊಡಕು: ನಿಗದಿತವಾದ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ತಿದ್ದುಪಡಿ/ನೋಂದಣಿ ಮಾಡಿದ್ದೇವೆ. ಡಿ.27ರಂದು 175 ತಿದ್ದುಪಡಿ ಮತ್ತು 48 ಹೊಸ ನೋಂದಣಿ ಆಗಿದೆ. ಮಕ್ಕಳು ಮತ್ತು ಹಿರಿಯರ ಬೆರಳಚ್ಚು ಪಡೆಯುವಾಗ ವಿಳಂಬ ಆಗು ವುದರಿಂದ ಸ್ವಲ್ಪ ತೊಂದರೆಯಾಗಿದೆ. ಕೆಲವು ಮಂದಿ ಪೂರಕವಾದ ದಾಖಲೆಗಳನ್ನು ಒದಗಿಸದೆ ಇದ್ದುದರಿಂದಲೂ ಪ್ರಕ್ರಿಯೆ ವಿಳಂಬವಾಗಿದೆ. 180 ಮಂದಿಗೆ ಟೋಕನ್‌ ನೀಡಲಾಗಿದೆ. ಅವರು ಮುಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ “ಸ್ಪಂದನ’ ಕೇಂದ್ರದಲ್ಲಿ ಆಧಾರ್‌ ತಿದ್ದುಪಡಿ/ ನೋಂದಣಿ ಮಾಡಿಕೊಳ್ಳಬಹುದು. ಇಲ್ಲಿ ದೊರೆ ತಿರುವ ಪ್ರತಿಕ್ರಿಯೆ ಕುರಿತು ಬೆಂಗಳೂರಿನ ಇ-ಆಡಳಿತ ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ತಾಲೂಕು ಮಟ್ಟದಲ್ಲಿ ಆಧಾರ್‌ ಅದಾಲತ್‌ ನಡೆಸಲು ಪ್ರಸ್ತಾವನೆ ಸಲ್ಲಿಸ ಲಾಗುವುದು ಎಂದು ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

“ಆಧಾರ್‌ ನೋಂದಣಿ/ತಿದ್ದುಪಡಿಗೆ ಅವಕಾಶವಿದೆ ಎಂದು ಸಾರ್ವಜನಿಕರನ್ನು ಆಹ್ವಾನಿಸಿ ಅನಂತರ ಅವಕಾಶ ನೀಡದೆ ಇರುವುದು ಸರಿಯಲ್ಲ. ಅಗತ್ಯವಿರುವಷ್ಟು ಸಿಸ್ಟಂ ಮತ್ತು ಸಿಬಂದಿಯನ್ನು ನೇಮಿಸಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.